ಬೆಳಗಾವಿ: ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ಭಾಗದಲ್ಲಿ ಕಾರ್ಯವ್ಯಾಪ್ತಿ ಹೊಂದಿರುವ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾದ ಶ್ರೀ ಬೀರೇಶ್ವರ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯು 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ 45.35 ಕೋಟಿ ರೂ. ಲಾಭ ಗಳಿಸಿದೆ.
https://chat.whatsapp.com/EbVKVnWB6rlHT1mWtsgbch
ಬೀರೇಶ್ವರ ಸಹಕಾರಿ ಸಂಸ್ಥೆಯು ಗ್ರಾಮೀಣ ಪ್ರದೇಶದಲ್ಲಿ ಕೆಲಸ ಆರಂಭಿಸಿ ವರ್ಷದಿಂದ ವರ್ಷಕ್ಕೆ ಸದೃಢವಾಗಿ ಬೆಳೆಯುತ್ತಿದೆ. ಅಂತಾರಾಜ್ಯ ಕಾಯ್ದೆಯಡಿ ಕರ್ನಾಟಕದಲ್ಲಿ 176, ಮಹಾರಾಷ್ಟ್ರದಲ್ಲಿ 46 ಹಾಗೂ ಗೋವಾದಲ್ಲಿ ನಾಲ್ಕು ಒಟ್ಟು ಸೇರಿ 226 ಶಾಖೆಗಳನ್ನು ಹೊಂದಿದೆ. ಲಾಭಾಂಶದಲ್ಲಿ ಕಳೆದ ವರ್ಷಕ್ಕಿಂತ 4.79 ಕೋಟಿ ರೂ. ಹೆಚ್ಚಳವಾಗಿದೆ ಎಂದು ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಬೀರೇಶ್ವರ ಕೋ ಆಪರೇಟಿವ್ ಸೊಸೈಟಿಯಲ್ಲಿ 4,08,233 ಸದಸ್ಯರು, 34,92,16,400 ರೂ. ಷೇರು ಬಂಡವಾಳ, 4338.58 ಕೋಟಿ ರೂ. ಠೇವಣಿ ಸಂಗ್ರಹ, 5030.90 ಕೋಟಿ ರೂ. ದುಡಿಯುವ ಬಂಡವಾಳ ಇದೆ. ಎಸ್‌ಎಂಎಸ್ ಸೇವೆ, ಕಿರು ಸಾಲ ಯೋಜನೆ, ವೆಸ್ಟರ್ನ್ ಯೂನಿಯನ್ ಮನಿ ಟ್ರಾನ್ಸ್‌ಫರ್, ಎಕ್ಸ್‌ಪ್ರೆಸ್ ಮನಿ ಟ್ರಾನ್ಸ್‌ಫರ್, ಷೇರು ಮಾರುಕಟ್ಟೆ, ಡಿಪಾಸಿಟ್ ಲಾಕರ್, ಜೀವವಿಮೆ, ಟಿಕೆಟ್ ಬುಕ್ಕಿಂಗ್ ಮತ್ತು ಇ-ಸ್ಟ್ಯಾಂಪ್ ಸೌಲಭ್ಯ ಸೇರಿ ಇತರ ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com