ಮಂಗಳೂರು: ವಿದೇಶಿ ವ್ಯಾಪಾರ ನಿರ್ದೇಶನಾಲಯ (DGFT)ದ ಐಟಿಸಿ (ಎಚ್.ಎಸ್) ಕೋಡ್ 20081920 ಅಡಿಯಲ್ಲಿ ಪರಿಗಣಿತವಾಗಿದ್ದ ಹುರಿದ ಅಡಿಕೆಯ(ರೋಸ್ಟೆಡ್ ಸುಪಾರಿ) ಅನಿರ್ಬಂಧಿತ ವ್ಯಾಪಾರವನ್ನು ರದ್ದುಗೊಳಿಸಿದೆ. ಈ ಮೂಲಕ ‘ರೋಸ್ಟೆಡ್ ನಟ್ಸ್ ಮತ್ತು ಸೀಡ್ಸ್’ ಶಿರೋನಾಮೆಯ ಮೂಲಕ ಆಮದಾಗುತ್ತಿದ್ದ ಅಡಿಕೆಗೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿರುವ ಕೇಂದ್ರ ಸರಕಾರದ ಕ್ರಮವನ್ನು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿಯವರು ಶ್ಲಾಘಿಸಿದ್ದಾರೆ.
https://chat.whatsapp.com/EbVKVnWB6rlHT1mWtsgbch
ಏಪ್ರಿಲ್ 2ರಂದು ಕೇಂದ್ರ ಸರಕಾರದ ವಾಣಿಜ್ಯ ಇಲಾಖೆ ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು ಅದರ ಪ್ರಕಾರ ಐಟಿಸಿ (ಎಚ್ಎಸ್) ಕೋಡ್ 08028090 ಮತ್ತು 20081920 ಅಡಿಯಲ್ಲಿ ಬರುವ “ಹುರಿದ ಅಡಿಕೆ”ಯನ್ನು “ಉಚಿತ” ದಿಂದ “ನಿಷೇಧಿತ” ಎಂದು ಪರಿಷ್ಕರಿಸಿ ವರ್ಗೀಕರಿಸಲಾಗಿದೆ. ಆದಾಗ್ಯೂ,ಕನಿಷ್ಠ ಆಮದು ದರವನ್ನು ಪ್ರತೀ ಕೆಜಿ ಗೆ ರೂ.351/- ನಿಗದಿ ಪಡಿಸಿದ್ದು, ಆಮದು ಮಾಡಲ್ಪಡುವ ಅಡಿಕೆಯ ವೆಚ್ಚ, ವಿಮೆ ಮತ್ತು ಸರಕು ಸಾಗಣೆ ( CIF) ಮೌಲ್ಯವು ಪ್ರತಿ ಕಿಲೋಗ್ರಾಂಗೆ ರೂ. 351/- ಮತ್ತು ಅದಕ್ಕಿಂತ ಹೆಚ್ಚಿದ್ದರೆ, 100% ರಫ್ತು ಆಧಾರಿತ ಘಟಕಗಳು (EOUಗಳು), SEZ ನಲ್ಲಿರುವ ಘಟಕಗಳು ಮತ್ತು ಮುಂಗಡ ಅಧಿಕಾರ ಯೋಜನೆಯಡಿಯಲ್ಲಿ ಆಮದು ಮಾಡಿಕೊಳ್ಳುವ ಅಡಿಕೆಗೆ MIP ಷರತ್ತುಗಳು ಅನ್ವಯವಾಗುವುದಿಲ್ಲ.
ಈ ಸಂಖ್ಯೆಯಡಿಯಲ್ಲಿ ಎಲ್ಲಾ ರೀತಿಯ ಸಂಸ್ಕರಿತ ಅಡಿಕೆಯನ್ನು ಸೇರಿಸಲಾಗಿದ್ದು, ಈಗ ಹುರಿದ ಅಡಿಕೆಯು ಸಹ ಸೇರ್ಪಡೆಗೊಂಡಿದೆ. ಕೆಲವು ತಿಂಗಳುಗಳ ಹಿಂದೆ ಹುರಿದ ಅಡಿಕೆ ಹೆಚ್ಚಿನ ಪ್ರಮಾಣದಲ್ಲಿ ಭಾರತದ ಮಾರುಕಟ್ಟೆಗೆ ಬಂದಿದ್ದರ ಪರಿಣಾಮ ಪಟೋರ ಮತ್ತಿತರ ಕೆಳದರ್ಜೆಯ ಅಡಿಕೆಯ ದರ ಕಡಿಮೆಯಾಗಿರುವುದಲ್ಲದೇ ಬೇಡಿಕೆ ಕುಂಠಿತವಾಗಿದ್ದನ್ನು ಗನನಿಸಬಹುದಾಗಿದೆ. ಕೇಂದ್ರ ಸರಕಾರದ ಕ್ರಮದಿಂದ ಬೆಳೆಗಾರರು ನಿಟ್ಟುಸಿರು ಬಿಡುವಂತಾಗಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com