ಲೆಕ್ಕಪರಿಶೋಧನೆಯಲ್ಲಿ ಸತತ ಎ ಶ್ರೇಣಿ ಸಂಘದ ಹೆಗ್ಗಳಿಕೆ: ಚಿತ್ತರಂಜನ್ ಬೋಳಾರ್ ಮಾಹಿತಿ
ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 33 ಶಾಖೆಗಳನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 2024-25ನೇ ಸಾಲಿನಲ್ಲಿ ರೂ. 3.50 ಕೋಟಿಗೂ ಮಿಕ್ಕಿ ಲಾಭ ಗಳಿಸಿದೆ.
https://chat.whatsapp.com/EbVKVnWB6rlHT1mWtsgbch
2012ರಲ್ಲಿ 1200 ಸದಸ್ಯರ ಪಾಲು ಬಂಡವಾಳದಿಂದ ಸ್ಥಾಪನೆಯಾದ ಆತ್ಮಶಕ್ತಿ ಸಹಕಾರಿ ಸಂಘದಲ್ಲಿ ಪ್ರಸಕ್ತ 7507 ಸದಸ್ಯರಿದ್ದು ರೂ. 1.58 ಕೋಟಿಗೂ ಅಧಿಕ ಪಾಲು ಬಂಡವಾಳ ಹೊಂದಿದೆ. ರೂ. 22 ಲಕ್ಷ ಠೇವಣಿಯೊಂದಿಗೆ ಆರಂಭಗೊಂಡ ಸಂಘವು 2024-25ನೇ ಸಾಲಿನಲ್ಲಿ ರೂ.247 ಕೋಟಿಗೂ ಮಿಕ್ಕಿ ಠೇವಣಾತಿ ಹೊಂದಿದೆ. ಸಂಘವು 2024-25ನೇ ಸಾಲಿನಲ್ಲಿ ರೂ. 214 ಕೋಟಿಗೂ ಮಿಕ್ಕಿ ಹೊರಬಾಕಿ ಸಾಲ ಹೊಂದಿದೆ. ಪ್ರತಿವರ್ಷವೂ ಶಾಸನಬದ್ಧ ಲೆಕ್ಕಪರಿಶೋಧನೆಯಲ್ಲಿ ‘ಎ’ ಶ್ರೇಣಿ ಕಾಯ್ದುಕೊಳ್ಳುತ್ತಿದೆ ಎಂದು ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ತಿಳಿಸಿದ್ದಾರೆ.
ಮೂವರು ಸಿಬ್ಬಂದಿಯೊಂದಿಗೆ ಆರಂಭವಾದ ಆತ್ಮಶಕ್ತಿ ಸಹಕಾರಿ ಸಂಘವು ಮಹಿಳಾ ಸಬಲೀಕರಣದ ಧ್ಯೇಯದೊಂದಿಗೆ ಮುನ್ನಡೆಯುತ್ತಿದ್ದು, ಸಂಘದ ಉದ್ಯೋಗಿಗಳಲ್ಲಿ ಶೇ.95ರಷ್ಟು ಮಹಿಳಾ ಸಿಬ್ಬಂದಿಗಳೇ ಇರುವುದು ವಿಶೇಷ. ಪ್ರಸ್ತುತ 111 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ದಕ್ಷ ಆಡಳಿತ ಮಂಡಳಿ, ಬದ್ಧತೆಯ ಸಿಬ್ಬಂದಿ ವರ್ಗ, ಸದಸ್ಯ ಬಂಧುಗಳ ಸಹಕಾರದಿಂದ ಉತ್ತಮ ಪ್ರಗತಿ ಸಾಧಿಸಲು ಸಾಧ್ಯವಾಗಿದೆ. ಸಂಘವು ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ 7 ವರ್ಷಗಳಿಂದ ಉತ್ತಮ ವಿವಿಧೋದ್ದೇಶ ಸಹಕಾರ ಸಂಘ ರಾಜ್ಯ ಪ್ರಶಸ್ತಿ, ಪ್ರಾರಂಭದಿಂದಲೂ ರಾಜ್ಯದಲ್ಲೇ ಅತಿಹೆಚ್ಚು ಇ-ಸ್ಟಾಂಪಿಂಗ್ ವಿತರಿಸುವ ಮೂಲಕ ಸತತ 10 ವರ್ಷಗಳಿಂದ ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ, ಸಂಘದ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿ ಗುರುತಿಸಿ ಸತತ 9 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಪ್ರಶಸ್ತಿ ಪಡೆದುಕೊಂಡಿದೆ.
ರಾಜ್ಯದಲ್ಲೇ ಪ್ರಥಮ ಬಾರಿ ಎನ್ನುವಂತೆ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆಯಿಂದ ನಡೆಸಲ್ಪಡುವ 26 ವಾರಗಳ HDCM ದೂರ ಶಿಕ್ಷಣ ತರಬೇತಿ ತರಗತಿಯನ್ನು ಮಂಗಳೂರಿನ ಪಡೀಲ್‌ನಲ್ಲಿರುವ ಆತ್ಮಶಕ್ತಿ ಸಹಕಾರ ಸಂಘದ ಪ್ರಧಾನ ಕಚೇರಿಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಸಹಕಾರ ಸಂಘಗಳಲ್ಲಿ ಕೆಲಸ ಗಿಟ್ಟಿಸಿಕೊಳ್ಳಲು, ಪದೋನ್ನತಿ ಹೊಂದಲು ಈ ಶಿಕ್ಷಣ ಬಹಳ ಮುಖ್ಯ. ಆತ್ಮಶಕ್ತಿ ಸಹಕಾರಿ ಸಂಘವು ಈ ಕೋರ್ಸಿನ ಮಂಗಳೂರು ವಿಭಾಗದ ಕೇಂದ್ರವಾಗಿದ್ದು, ಇದುವರೆಗೆ 1000ಕ್ಕೂ ಅಧಿಕ ಜನ ಇದರ ಪ್ರಯೋಜನ ಪಡೆದುಕೊಂಡಿದ್ದಾರೆ.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸದಸ್ಯರಿಗೆ ವಿಶೇಷ ಕೊಡುಗೆಯಾಗಿ 1000 ದಿನಗಳ ಠೇವಣಿಗಳಿಗೆ ಶೇ.10.50ವರಗೆ ಆಕರ್ಷಕ ಬಡ್ಡಿ ಯೋಜನೆ ಜಾರಿಗೊಳಿಸಿದೆ. ಚಿನ್ನಾಭರಣ ಸಾಲಗಳಿಗೆ ಸೇವಾ ಶುಲ್ಕವಿಲ್ಲದೆ ಪ್ರತಿ ಗ್ರಾಂ ಗರಿಷ್ಟ ಮೌಲ್ಯ ರೂ. 7500ರವರೆಗೆ ಸಾಲ ನೀಡಲಾಗುತ್ತಿದೆ. ಮಕ್ಕಳ ಭವಿಷ್ಯಕ್ಕೆ ಆತ್ಮಶಕ್ತಿ ಭವಿಷ್ಯ ಸುರಕ್ಷಾ ಯೋಜನೆಯಲ್ಲಿ ಸದಸ್ಯರು ರೂ. 1,00,000ವನ್ನು 18 ವರ್ಷಗಳ ಅವಧಿಗೆ ಠೇವಣಾತಿ ಮಾಡಿದಾಗ ರೂ. 5,00,000ವನ್ನು ಪಡೆಯಬಹುದು. ಈ ಯೋಜನೆಯಲ್ಲಿ ಗ್ರಾಹಕರು ತಮ್ಮ ಮಕ್ಕಳ ಭವಿಷ್ಯದ ಸುರಕ್ಷತೆಗಾಗಿ ಕನಿಷ್ಟ ರೂ.25,000 ಹೂಡಿಕೆ ಮಾಡಬಹುದು. ಈ ಯೋಜನೆ ಸೀಮಿತ ಅವಧಿಯಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಂಘದ ಸಮೀಪದ ಶಾಖೆಯನ್ನು ಸಂಪರ್ಕಿಸಬಹುದು.
ಸಂಘವು ಆರ್ಥಿಕ ಚಟುವಟಿಕೆಗಳಿಗಷ್ಟೇ ಸೀಮಿತವಾಗಿರದೆ ಸಮಾಜಸೇವೆಯಲ್ಲೂ ತೊಡಗಿಸಿಕೊಂಡಿದೆ. 80ಕ್ಕೂ ಮಿಕ್ಕಿ ಉಚಿತ ವೈದ್ಯಕೀಯ ಶಿಬಿರ, 800ಕ್ಕೂ ಮಿಕ್ಕಿ ಕಣ್ಣಿನ ಶಸ್ತ್ರಚಿಕಿತ್ಸೆ, ೧೯,೦೦೦ಕ್ಕೂ ಮಿಕ್ಕಿ ಉಚಿತ ಕನ್ನಡಕ ವಿತರಣೆ, ಉಚಿತ ಔಷಧ ವಿತರಣೆ, ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ವಿತರಣೆ, ಸಂಘದ ಪಿಗ್ಮಿ ಸಂಗ್ರಾಹಕರಿಗೆ ಉಚಿತ ಆರೋಗ್ಯ ವಿಮೆ, ಸಾರ್ವಜನಿಕರ ಉಪಯೋಗಕ್ಕಾಗಿ ಬಸ್ ತಂಗುದಾಣ ನಿರ್ಮಾಣ, ಮನೆ ನಿರ್ಮಾಣ, ವಿಮಾ ಸೌಲಭ್ಯ, ವಾರ್ಷಿಕೋತ್ಸವ ಸಂದರ್ಭ ಗ್ರಾಹಕರ ಭೇಟಿ ಸಭೆಗಳನ್ನು ಆಯೋಜಿಸಲಾಗುತ್ತಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com