Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವೈಕುಂಠ ಮೆಹ್ತಾ ರಾಷ್ಟ್ರೀಯ ಸಹಕಾರಿ ನಿರ್ವಹಣಾ ಸಂಸ್ಥೆಯ ನಿರ್ದೇಶಕರಾಗಿ ಡಾ.ಸುವಕಾಂತ ಮೊಹಾಂತಿ ನೇಮಕ
    News

    ವೈಕುಂಠ ಮೆಹ್ತಾ ರಾಷ್ಟ್ರೀಯ ಸಹಕಾರಿ ನಿರ್ವಹಣಾ ಸಂಸ್ಥೆಯ ನಿರ್ದೇಶಕರಾಗಿ ಡಾ.ಸುವಕಾಂತ ಮೊಹಾಂತಿ ನೇಮಕ

    adminBy adminApril 11, 2025

    ಮುಂಬೈ: ಬೋಧನೆ, ಸಂಶೋಧನೆ ಮತ್ತು ಶೈಕ್ಷಣಿಕ ನಾಯಕತ್ವದಲ್ಲಿ ಎರಡು ದಶಕಗಳಿಗೂ ಹೆಚ್ಚು ಅನುಭವ ಹೊಂದಿರುವ ಪ್ರತಿಷ್ಠಿತ ಶಿಕ್ಷಣ ತಜ್ಞ ಡಾ.ಸುವಕಾಂತ ಮೊಹಾಂತಿ ಅವರನ್ನು ಪುಣೆಯ ವೈಕುಂಠ ಮೆಹ್ತಾ ರಾಷ್ಟ್ರೀಯ ಸಹಕಾರಿ ನಿರ್ವಹಣಾ ಸಂಸ್ಥೆಯ (VAMNICOM) ನಿರ್ದೇಶಕರಾಗಿ ನೇಮಿಸಲಾಗಿದೆ. ಡಾ.ಹೇಮಾ ಯಾದವ್ ಅವರ ಜಾಗದಲ್ಲಿ ಡಾ.ಮೊಹಾಂತಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

    https://chat.whatsapp.com/EbVKVnWB6rlHT1mWtsgbch
    ಕೇಂದ್ರ ಸಹಕಾರ ಸಚಿವ ಅಮಿತ್ ಷಾ ನೇತೃತ್ವದಲ್ಲಿ ಸಹಕಾರ ಸಚಿವಾಲಯವು ಸಹಕಾರಿ ಶಿಕ್ಷಣ ಮತ್ತು ತರಬೇತಿಯ ಬಗ್ಗೆ ಹೆಚ್ಚಿನ ಒಲವು ತೋರಿಸುತ್ತಿರುವ ಸಮಯದಲ್ಲೇ VAMNICOMನಲ್ಲಿ ಡಾ.ಮೊಹಾಂತಿ ಅವರ ನಾಯಕತ್ವವು ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ. ರಾಷ್ಟ್ರೀಯ ಮಟ್ಟದ ಸಹಕಾರಿ ವಿಶ್ವವಿದ್ಯಾಲಯ ಸ್ಥಾಪಿಸಲು ಸಂಸತ್ತಿನಲ್ಲಿ ಅಂಗೀಕಾರವಾದ ಮಸೂದೆ, ಜೊತೆಗೆ ಇನ್‌ಸ್ಟಿಟ್ಯೂಟ್ ಆಫ್ ರೂರಲ್ ಮ್ಯಾನೇಜ್‌ಮೆಂಟ್‌ ಆನಂದ್ (IRMA) ನ ಪ್ರಸ್ತಾವಿತ ಮೇಲ್ದರ್ಜೆಗೇರಿಸುವಿಕೆಯ ಈ ಸಮಯದಲ್ಲೇ ಡಾ.ಮೊಹಾಂತಿಯವರ ನೇಮಕಾತಿ ಮಹತ್ವ ಪಡೆದಿದೆ.


    ವ್ಯಾಮ್ನಿಕಾಮ್‌ಗೆ ನಿಯೋಜನೆಗೊಳ್ಳುವ ಮೊದಲು ಮೊಹಾಂತಿಯವರು ಭುವನೇಶ್ವರದ ಕಳಿಂಗ ಇನ್‌ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (KIIT ವಿಶ್ವವಿದ್ಯಾಲಯ) ದಲ್ಲಿ ಮ್ಯಾನೇಜ್‌ಮೆಂಟ್ ಸ್ಕೂಲ್‌ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು. ಪ್ರತಿಷ್ಠಿತ GRiSP ವಿದ್ಯಾರ್ಥಿವೇತನದ ಅಡಿಯಲ್ಲಿ ಅವರು UKಯ ರೀಡಿಂಗ್ ವಿಶ್ವವಿದ್ಯಾಲಯದಿಂದ ಅನ್ವಯಿಕ ಅರ್ಥಶಾಸ್ತ್ರ ಮತ್ತು ಮಾರ್ಕೆಟಿಂಗ್‌ನಲ್ಲಿ ಪಿಎಚ್‌ಡಿ ಪದವಿ ಪಡೆದಿರುವ ಡಾ.ಮೊಹಾಂತಿ, ಗ್ರಾಮೀಣ ಆರ್ಥಿಕತೆಯೊಂದಿಗಿನ ಅವರ ನಿಕಟ ಸಂಬಂಧ ಮತ್ತು IRMAನಲ್ಲಿನ ಅವರ ಅನುಭವ ಸಹಕಾರ ಕ್ಷೇತ್ರದ ಬೆಳವಣಿಗೆಯಲ್ಲಿ ನಿರೀಕ್ಷೆಗಿಂತ ವೇಗವಾಗಿ ಚಲಿಸಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ. ಡಾ.ಮೊಹಾಂತಿ ಈ ಹಿಂದೆ HDFC ಚೇರ್ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಮಾರ್ಕೆಟಿಂಗ್ ವಿಭಾಗದ ಅಧ್ಯಕ್ಷ ಮತ್ತು IRMAನಲ್ಲಿ ಅಸೋಸಿಯೇಟ್ ಡೀನ್ ಸೇರಿದಂತೆ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Dr. Suva Kantha Mohanty GRiSP scholarship Hema Yadav Institute of Rural Management Anand Vaikunth Mehta National Institute of Cooperative Management VAMNICOM
    Previous Articleಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ 19.37 ಕೋಟಿ ರೂ. ಲಾಭ
    Next Article ಕ್ಯಾಂಪ್ಕೊ ಪುತ್ತೂರು ಶಾಖೆಯಲ್ಲಿ ಮಣ್ಣಿನ ಪರೀಕ್ಷಾ ಯಂತ್ರಕ್ಕೆ ಚಾಲನೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.