240 ಹೊಸ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳ ಸ್ಥಾಪನೆ: ರಾಷ್ಟ್ರೀಯ ಮಟ್ಟದ ಪರಿಶೀಲನಾ ಸಭೆಯಲ್ಲಿ ಪ್ರಸ್ತಾಪ
ಶಿಲ್ಲಾಂಗ್: ದೇಶಾದ್ಯಂತ ಸಹಕಾರಿ ಬ್ಯಾಂಕಿಂಗ್ ಜಾಲವನ್ನು ಮತ್ತಷ್ಟು ಬಲಶಾಲಿಯಾಗಿ ವಿಸ್ತರಿಸುವ ಮತ್ತು ಬ್ಯಾಂಕ್‌ಗಳ ಸೇವೆ ಇಲ್ಲದ ಪ್ರದೇಶಗಳಲ್ಲಿ ಆರ್ಥಿಕ ಸೇರ್ಪಡೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದ್ದು ಕೇಂದ್ರಾಡಳಿತ ಪ್ರದೇಶಗಳಾದ ಲಡಾಖ್ ಮತ್ತು ಲಕ್ಷದ್ವೀಪಗಳಲ್ಲಿ ಅಪೆಕ್ಸ್ ಸ್ಟೇಟ್ ಕೋ ಆಪರೇಟಿವ್ ಬ್ಯಾಂಕ್ ಸ್ಥಾಪನೆಯ ವಿಚಾರ ಮುನ್ನೆಲೆಗೆ ಬಂದಿದೆ.
https://chat.whatsapp.com/EbVKVnWB6rlHT1mWtsgbch
ಮೇಘಾಲಯದ ಶಿಲ್ಲಾಂಗ್‌ನಲ್ಲಿ ನಡೆದ ಎರಡು ದಿನಗಳ ರಾಷ್ಟ್ರೀಯ ಮಟ್ಟದ ಪರಿಶೀಲನಾ ಸಭೆಯಲ್ಲಿ ಹಲವಾರು ವಿಷಯಗಳ ಬಗ್ಗೆ ಚರ್ಚೆಯಾಗಿದ್ದು, ಎರಡು ಹೊಸ ರಾಜ್ಯ ಸಹಕಾರಿ ಬ್ಯಾಂಕ್‌ಗಳು ಮತ್ತು 240 ಹೊಸ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳ (DCC) ಸ್ಥಾಪನೆಯ ಕುರಿತು ಚರ್ಚೆಗಳು ನಡೆದಿವೆ. ಲಡಾಖ್ ಮತ್ತು ಲಕ್ಷದ್ವೀಪಗಳಲ್ಲಿ ಪ್ರಸ್ತುತ ಯಾವುದೇ ಪ್ರಾದೇಶಿಕ ಸಹಕಾರಿ ಬ್ಯಾಂಕ್‌ಗಳು ಇಲ್ಲ ಎಂಬ ವಿಷಯ ಚರ್ಚೆಯಾಗಿದ್ದು, ಈ ಪ್ರದೇಶಗಳಲ್ಲಿ ಸಹಕಾರಿ ವಲಯವನ್ನು ಬಲಪಡಿಸಲು ಮತ್ತು ಅಸ್ತಿತ್ವದಲ್ಲಿರುವ ಸಹಕಾರಿ ಸಂಸ್ಥೆಗಳ ಆರ್ಥಿಕ ಅಗತ್ಯಗಳನ್ನು ಪೂರೈಸಲು, ಎರಡು ಹಂತದ ರಚನೆಯನ್ನು ಅನುಸರಿಸಿ ಎರಡೂ ಕಡೆ ಅಪೆಕ್ಸ್ ಸ್ಟೇಟ್ ಕೋ-ಆಪರೇಟಿವ್ ಬ್ಯಾಂಕ್‌ಗಳನ್ನು ಸ್ಥಾಪಿಸಲು ಪ್ರಸ್ತಾವನೆಯು ಶಿಫಾರಸು ಮಾಡಿದೆ. ಈ ಮಧ್ಯೆ 42 ಜಿಲ್ಲೆಗಳಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳೂ ಇಲ್ಲದಿರುವುದು ಚರ್ಚೆಯಾಗಿದ್ದು, ಇಲ್ಲಿ ಡಿಸಿಸಿಗಳ ಸ್ಥಾಪನೆಗೆ ಒಲವು ವ್ಯಕ್ತವಾಗಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com