Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎಂಸಿಸಿ ಬ್ಯಾಂಕ್‌ ವಿತ್ತೀಯ ವರ್ಷದಲ್ಲಿ 13.00 ಕೋಟಿ ರೂ. ಲಾಭ
    News

    ಎಂಸಿಸಿ ಬ್ಯಾಂಕ್‌ ವಿತ್ತೀಯ ವರ್ಷದಲ್ಲಿ 13.00 ಕೋಟಿ ರೂ. ಲಾಭ

    adminBy adminApril 16, 2025

    ಶೀಘ್ರದಲ್ಲೇ ಬೈಂದೂರಿನಲ್ಲಿ 20ನೇ ಶಾಖೆ ಕಾರ್ಯಾರಂಭ: ಬ್ಯಾಂಕ್‌ ಅಧ್ಯಕ್ಷ ಅನಿಲ್ ಲೋಬೊ ಘೋಷಣೆ

    ಮಂಗಳೂರು: 113 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ ಮಾರ್ಚ್‌ 31ಕ್ಕೆ ಕೊನೆಗೊಂಡ ವಿತ್ತೀಯ ವರ್ಷದಲ್ಲಿ ಒಟ್ಟು 13.00 ಕೋಟಿ ರೂಪಾಯಿ ವ್ಯವಹಾರಿಕ ಲಾಭ ಗಳಿಸಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು, ಪ್ರಸ್ತುತ ವರ್ಷ 1.30% ಎನ್.ಪಿ.ಎ. ದಾಖಲಿಸಿದೆ ಎಂದು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ತಿಳಿಸಿದ್ದಾರೆ.

    https://chat.whatsapp.com/EbVKVnWB6rlHT1mWtsgbch
    ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾಖಲೆಯ ಲಾಭ ಮತ್ತು ಕನಿಷ್ಠ ಎನ್.ಪಿ.ಎ. ಜೊತೆಗೆ, 2024–2025ನೇ ವಿತ್ತೀಯ ವರ್ಷದಲ್ಲಿ, ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ನೇತೃತ್ವದ ಆಡಳಿತ ಮಂಡಳಿ, ಅಧಿಕಾರಿ ವರ್ಗ ಮತ್ತು ಸಿಬ್ಬಂದಿಯ ಶ್ರಮದಿಂದ, ಬ್ಯಾಂಕ್ ಸ್ಥಾಪನೆಯಾದಂದಿನಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯವ್ಯಾಪ್ತಿಯನ್ನು ಇಡೀ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಿದ್ದು, ವಿತ್ತೀಯ ವರ್ಷದಲ್ಲಿ ಬೆಳ್ತಂಗಡಿ ಮತ್ತು ಬೆಳ್ಮಣ್‌ನಲ್ಲಿ ಕ್ರಮವಾಗಿ 18 ಮತ್ತು 19ನೇ ಶಾಖೆಯನ್ನು ತೆರೆಯಲಾಗಿದೆ. ಬೈಂದೂರಿನಲ್ಲಿ ಶೀಘ್ರದಲ್ಲೇ 20ನೇ ಶಾಖೆ ತೆರೆಯಲಾಗುವುದು. ಅನಿವಾಸಿ ಭಾರತೀಯರಿಗೆ (ಎನ್‌ಆರ್‌ಐ) ಸೇವಾ ಸೌಲಭ್ಯ ನೀಡುವ ಕರ್ನಾಟಕದ ಪಟ್ಟಣ ಸಹಕಾರಿ ಬ್ಯಾಂಕುಗಳ ಪೈಕಿ ಎರಡನೇ ಬ್ಯಾಂಕ್ ಎಂಸಿಸಿ ಬ್ಯಾಂಕ್‌ ಆಗಿರುತ್ತದೆ. ಬ್ಯಾಂಕಿನ ವ್ಯವಹಾರವು 1240 ಕೋಟಿ ರೂ. ತಲುಪಿದ್ದು, ಈ ಆರ್ಥಿಕ ವರ್ಷದ ಇನ್ನೊಂದು ಮಹತ್ವದ ಸಾಧನೆಯಾಗಿದೆ ಎಂದು ತಿಳಿಸಿದರು.


    ಕರ್ನಾಟಕ ರಾಜ್ಯಾದ್ಯಂತ ಕಾರ್ಯವ್ಯಾಪ್ತಿ ಹೊಂದಿರುವ ಎಂಸಿಸಿ ಬ್ಯಾಂಕ್, ಮಂಗಳೂರಿನಲ್ಲಿ ನವೀಕೃತಗೊಂಡ ಸುಸಜ್ಜಿತ ಆಡಳಿತ ಕಛೇರಿಯೊಂದಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 19 ಶಾಖೆಗಳನ್ನು ಹೊಂದಿದ್ದು, 2024–25ರ ವಿತ್ತೀಯ ವರ್ಷದಲ್ಲಿ ದಾಖಲೆಯ ಲಾಭ ಗಳಿಸಿದೆ. 2024–25ರ ವಿತ್ತೀಯ ವರ್ಷದಲ್ಲಿ ಗಣನೀಯ ಪ್ರಮಾಣದಲ್ಲಿ ಬ್ಯಾಂಕಿನ ವ್ಯವಹಾರ ಪ್ರಗತಿ ದಾಖಲಿಸಿದ್ದು, ಬ್ಯಾಂಕಿನ ನಿವ್ವಳ ಮೌಲ್ಯ (Net Worth) ರೂ. 76.00 ಕೋಟಿಯಿಂದ ರೂ.86.68 ಕೋಟಿಗೆ ತಲುಪಿದೆ. ಬ್ಯಾಂಕಿನ ವ್ಯವಹಾರ ರೂ. 1240 ಕೋಟಿ ದಾಟಿದ್ದು ಕಳೆದ ವರ್ಷಕ್ಕಿಂತ ಶೇಕಡಾ 15 ಏರಿಕೆಯಾಗಿದೆ. ಒಟ್ಟು ಠೇವಣಿಯಲ್ಲಿ ಶೇಕಡಾ 11.00 ಪ್ರಗತಿ ಸಾಧಿಸಿದ್ದು, ರೂ.705.40 ಕೋಟಿ ಠೇವಣಿ, ಒಟ್ಟು ಮುಂಗಡದಲ್ಲಿ ಶೇಕಡಾ 20.37 ಪ್ರಗತಿ ಸಾಧಿಸಿದ್ದು ರೂ. 535.49 ಕೋಟಿ ಮುಂಗಡಗಳು, ದುಡಿಯುವ ಬಂಡವಾಳ ರೂ.836.73 ಕೋಟಿ (ಪ್ರಗತಿ ಶೇಕಡಾ 11.13) ಮತ್ತು ಶೇರು ಬಂಡವಾಳ ರೂ.32.43 ಕೋಟಿ (ಪ್ರಗತಿ ಶೇಕಡಾ 3.91) ಆಗಿರುತ್ತದೆ. ಬ್ಯಾಂಕಿನ CRAR (Capital to Risk Assets Ratio) ಪ್ರಮಾಣವು ಶೇಕಡಾ 22.81 ಇದ್ದು ನಿಗದಿತ ಕನಿಷ್ಟ ಪ್ರಮಾಣ ಶೇಕಡಾ 12ಕ್ಕಿಂತ ಜಾಸ್ತಿಯಿರುತ್ತದೆ ಎಂದು ಅನಿಲ್‌ ಲೋಬೊ ಮಾಹಿತಿ ನೀಡಿದರು.


    ಬ್ಯಾಂಕಿನ ಕಾರ್ಯವ್ಯಾಪ್ತಿ ಇಡೀ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಿದೆ. ಬ್ಯಾಂಕಿನ ವ್ಯವಹಾರವನ್ನು ಸಂಪೂರ್ಣ ಕೋರ್ ಬ್ಯಾಂಕಿಂಗ್ ಮುಖಾಂತರ ನಡೆಸುತ್ತಿದ್ದು, ಇತರ ಖಾಸಗಿ ಮತ್ತು ವಾಣಿಜ್ಯ ಬ್ಯಾಂಕುಗಳು ನೀಡುವ ಎಲ್ಲಾ ಸೇವೆ ಮತ್ತು ಸೌಲಭ್ಯಗಳು ಎಂಸಿಸಿ ಬ್ಯಾಂಕಿನಲ್ಲೂ ದೊರೆಯುತ್ತವೆ. ಗ್ರಾಹಕರಿಗೆ ಕಡಿಮೆ ಬಾಡಿಗೆಯಲ್ಲಿ ಲಾಕರ್ ಸೌಲಭ್ಯ, ಕಡಿಮೆ ದರದಲ್ಲಿ ದೇಶ ವಿದೇಶ ವಿದ್ಯಾ ಭವಿಷ್ಯ ಶಿಕ್ಷಣ ಸಾಲ, ಎಮ್.ಎಸ್.ಎಮ್.ಇ ವ್ಯವಹಾರ ಸಾಲ, ವಾಹನ ಸಾಲ, ವಸತಿ ಸಾಲ, ಮನೆ ಖರೀದಿ, ದುರಸ್ತಿ, ಮದುವೆ, ಗ್ರಹ ಉಪಯೋಗಿ ವಸ್ತು ಖರೀದಿ ಸಾಲವನ್ನು ತ್ವರಿತವಾಗಿ ನೀಡುತ್ತಿದೆ. ಸೇವಾ ಶುಲ್ಕವಿಲ್ಲದೆ ಚಿನ್ನಾಭರಣ ಸಾಲ ನೀಡುತ್ತಿದೆ. ಎಟಿಎಮ್ ಮತ್ತು ಮೊಬೈಲ್ ಬ್ಯಾಂಕಿಂಗ್ ಸೌಲಭ್ಯವನ್ನು ಉಚಿತವಾಗಿ ನೀಡಲಾಗುತ್ತಿದೆ. ಬ್ಯಾಂಕಿನಲ್ಲಿರುವ ಠೇವಣಿಗಳಿಗೆ ಖಾಸಗಿ ಮತ್ತು ವಾಣಿಜ್ಯ ಬ್ಯಾಂಕುಗಳಂತೆಯೇ ಭಾರತೀಯ ರಿಸರ್ವ್ ಬ್ಯಾಂಕಿನ ಡಿಪಾಸಿಟ್ ಇನ್ಸೂರೆನ್ಸ್ ಆ್ಯಂಡ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಶನ್‌ನಿಂದ ವಿಮಾ ಸೌಲಭ್ಯವಿದೆ.

    ಎಂಸಿಸಿ ಬ್ಯಾಂಕಿನ ನಿರ್ದೇಶಕರಾದ ಡಾ.ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಜೆ.ಪಿ.ರೊಡ್ರಿಗಸ್, ಡೇವಿಡ್ ಡಿಸೋಜ, ಹೆರಾಲ್ಡ್ ಮೊಂತೇರೊ, ರೋಶನ್ ಡಿಸೋಜ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಸಿ.ಜಿ.ಪಿಂಟೊ, ಸುಶಾಂತ್ ಸಲ್ಡಾನ್ಹಾ, ಐರಿನ್ ರೆಬೆಲ್ಲೊ, ಡಾ.ಫ್ರೀಡಾ ಡಿಸೋಜ, ಆಲ್ವಿನ್ ಪಿ.ಮೊಂತೇರೊ, ಫೆಲಿಕ್ಸ್ ಡಿಕ್ರೂಜ್, ಶರ್ಮಿಳಾ ಮಿನೇಜಸ್ ಹಾಗೂ ಮಹಾ ಪ್ರಬಂಧಕ ಸುನಿಲ್ ಮಿನೇಜಸ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    ಮುಂದಿನ ಕಾರ್ಯಯೋಜನೆಗಳು :
    ೧) ಜುಲೈ ಅಂತ್ಯದೊಳಗೆ ಬೈಂದೂರಿನಲ್ಲಿ 20ನೇ ಶಾಖೆ
    ೨) ಜೂನ್ ಅಂತ್ಯದೊಳಗೆ ಸ್ವಂತ ಕಟ್ಟಡಕ್ಕೆ ಕುಲಶೇಖರ ಶಾಖೆಯ ಸ್ಥಳಾಂತರ
    ೩) ಗೂಗಲ್ ಪೇ, ಫೊನ್ ಪೇ, ಯುಪಿಎ ಸೌಲಭ್ಯಗಳು
    ೪) ಮಾರ್ಚ್ ಅಂತ್ಯದೊಳಗೆ ರೂ. 1500 ಕೋಟಿ ವ್ಯವಹಾರದ ಗುರಿ

     

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Anil Lobo Banking Co Operative ministry Cooperative Cooperative Department Cooperative Registrar Core Banking CRAR (Capital to Risk Assets Ratio) MCC BANK Spandana
    Previous Articleಲಡಾಖ್, ಲಕ್ಷದ್ವೀಪಕ್ಕೆ ಮೊದಲ ಅಪೆಕ್ಸ್ ಸ್ಟೇಟ್ ಕೋ-ಆಪರೇಟಿವ್‌ ಬ್ಯಾಂಕ್‌
    Next Article ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ 3.45 ಕೋಟಿ ರೂ. ಲಾಭ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.