Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ 3.45 ಕೋಟಿ ರೂ. ಲಾಭ
    News

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ 3.45 ಕೋಟಿ ರೂ. ಲಾಭ

    adminBy adminApril 16, 2025

    ದಾಖಲೆಯ ಗಳಿಕೆ, ವಿಶೇಷ ಸಾಧನೆ: ಬ್ಯಾಂಕ್‌ ಅಧ್ಯಕ್ಷ ಎಚ್‌.ಜಗನ್ನಾಥ ಸಾಲ್ಯಾನ್‌ ಹೇಳಿಕೆ

    ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಅಭೂತಪೂರ್ವ ಕಾರ್ಯಸಾಧನೆಯೊಂದಿಗೆ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಮುನ್ನಡೆಯುತ್ತಿದ್ದು 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ದಾಖಲೆಯ ರೂ. 3.45 ಕೋಟಿಗೂ ಮಿಕ್ಕಿ ಲಾಭ ಗಳಿಸಿ ವಿಶೇಷ ಸಾಧನೆ ಮಾಡಿದೆ ಎಂದು ಬ್ಯಾಂಕ್‌ ಅಧ್ಯಕ್ಷ ಎಚ್‌.ಜಗನ್ನಾಥ ಸಾಲ್ಯಾನ್‌ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

    https://chat.whatsapp.com/EbVKVnWB6rlHT1mWtsgbch
    ವಿಟ್ಲದಲ್ಲಿ ಪ್ರಧಾನ ಕಛೇರಿ ಮತ್ತು ಕನ್ಯಾನ, ಕಲ್ಲಡ್ಕ, ಬಿ.ಸಿ.ರೋಡ್‌ ಹಾಗೂ ಪುತ್ತೂರಿನಲ್ಲಿ ಶಾಖೆಗಳನ್ನು ಹೊಂದಿರುವ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ನಲ್ಲಿ ಒಟ್ಟು 8515 ಸದಸ್ಯರಿದ್ದು, ರೂ. 2.82 ಕೋಟಿ ಪಾಲು ಬಂಡವಾಳ ಹೊಂದಿದೆ. ಪ್ರಸಕ್ತ ವರ್ಷ ದಾಖಲೆಯ 950 ಕೋಟಿ ರೂ.ಗಳ ವ್ಯವಹಾರ ದಾಖಲಿಸಿದ್ದು, ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ ಈ ಬಾರಿ 259 ಕೋಟಿ ರೂಪಾಯಿ ಹೆಚ್ಚಿನ ವ್ಯವಹಾರ ಮಾಡಿದೆ. ಸ್ಪರ್ಧಾತ್ಮಕ ಯುಗದಲ್ಲಿ ರೂ.134.73 ಕೋಟಿ ರೂಪಾಯಿಗಳ ಠೇವಣಿ ಸಂಗ್ರಹಿಸಿದ್ದು, ಕಳೆದ ಸಾಲಿಗಿಂತ 5.93%ರಷ್ಟು ಹೆಚ್ಚಳವಾಗಿದೆ. ಅಲ್ಲದೆ 104.13 ಕೋಟಿ ರೂ. ಹೊರಬಾಕಿ ಸಾಲವಿದ್ದು ಸಾಲ ವಸೂಲಾತಿ ಕಳೆದ ಸಾಲಿಗಿಂತ ಹೆಚ್ಚಾಗಿದೆ.
    ಪ್ರಸ್ತುತ ಬ್ಯಾಂಕಿನಲ್ಲಿ 9.08 ಕೋಟಿ ರೂಪಾಯಿ ಮೀಸಲು ನಿಧಿಯಿದ್ದು, ರೂ. 12.43 ಕೋಟಿಗಳ ಇತರ ನಿಧಿಗಳನ್ನು ಹೊಂದಿದೆ. ರೂ. 2.40 ಕೋಟಿಗಳ ಚರ ಹಾಗೂ ಸ್ಥಿರಾಸ್ತಿಗಳನ್ನು ಹೊಂದಿದೆ. ಬ್ಯಾಂಕಿನ ದುಡಿಯುವ ಬಂಡವಾಳ ರೂ. 162.53 ಕೋಟಿಗಳಾಗಿರುತ್ತದೆ. ಬ್ಯಾಂಕ್ ಹಲವಾರು ವರ್ಷಗಳಿಂದ ಆಡಿಟ್‌ ವರ್ಗೀಕರಣದಲ್ಲಿ ‘ಎ’ ತರಗತಿಯಲ್ಲಿದ್ದು, ಕಳೆದ ಸಾಲಿನಲ್ಲಿ ಶೇಕಡಾ 22 ಡಿವಿಡೆಂಡ್ ನೀಡಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಸತತವಾಗಿ ಸಾಧನಾ ಪ್ರಶಸ್ತಿಯನ್ನು ಮುಡಿಗೇರಿಸಿಗೊಂಡಿದೆ. ಉಪ್ಪಿನಂಗಡಿಯಲ್ಲಿ ಬ್ಯಾಂಕಿನ 5ನೇ ಶಾಖೆ ಆರಂಭಿಸುವ ಕಾರ್ಯ ಭರದಿಂದ ಸಾಗುತ್ತಿದ್ದು ಅತೀ ಶೀಘ್ರದಲ್ಲಿ ಲೋಕಾರ್ಪಣೆ ಕಾರ್ಯ ಕೈಗೊಳ್ಳಲಿದ್ದೇವೆ ಎಂದು ಜಗನ್ನಾಥ ಸಾಲ್ಯಾನ್‌ ತಿಳಿಸಿದ್ದಾರೆ.


    2025-26ಕ್ಕೆ ವ್ಯವಹಾರದ ಗುರಿ:

    2025-26ನೇ ಸಾಲಿನಲ್ಲಿ ರೂ. 1000 ಕೋಟಿಗೂ ಮೀರಿದ ವ್ಯವಹಾರ, ರೂ.155 ಕೋಟಿ ಮೇಲ್ಪಟ್ಟು ಠೇವಣಿ ಸಂಗ್ರಹ, ರೂ.125 ಕೋಟಿಗೂ ಮೀರಿದ ಸಾಲ ನೀಡಿಕೆ, ರೂ. 3.90 ಕೋಟಿಗೂ ಮೀರಿದ ಲಾಭ ಹಾಗೂ 96 ಶೇಕಡಾ ಸಾಲ ವಸೂಲಾತಿ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಜಗನ್ನಾಥ ಸಾಲ್ಯಾನ್‌ ತಿಳಿಸಿದರು. ಬ್ಯಾಂಕಿನಲ್ಲಿ 32 ನುರಿತ ಸಿಬ್ಬಂದಿಗಳಿದ್ದು, ಇವರ ಪೂರ್ಣ ಪ್ರಮಾಣದ ಸಹಕಾರದೊಂದಿಗೆ, ಕೃಷ್ಣಮುರಳಿ ಶ್ಯಾಮ್ ಕೆ. ಇವರು ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಬ್ಯಾಂಕ್‌ ಅನ್ನು ಅಭಿವೃದ್ಧಿಪಥದತ್ತ ಮುನ್ನಡೆಸುತ್ತಿದ್ದಾರೆ. ಬ್ಯಾಂಕ್ ಅನುಭವಿ ಆಡಳಿತ ಮಂಡಳಿಯನ್ನು ಹೊಂದಿದ್ದು, ಅಧ್ಯಕ್ಷರಾಗಿ ಎಚ್.ಜಗನ್ನಾಥ ಸಾಲ್ಯಾನ್‌, ಉಪಾಧ್ಯಕ್ಷರಾಗಿ ಮನೋರಂಜನ್ ಕೆ.ಆರ್ ಹಾಗೂ ನಿರ್ದೇಶಕರಾಗಿ ಮೋಹನ್ ಕೆ.ಎಸ್., ವಿಶ್ವನಾಥ ಎಂ., ತಿರುಮಲೇಶ್ವರ ಭಟ್ ಪಿ., ಗೋವರ್ಧನ ಕುಮಾರ್ ಐ., ದಯಾನಂದ ಆಳ್ವ ಕೆ., ರಾಮದಾಸ ಶೆಣೈ, ಸತೀಶ್ ಪಿ., ಭಾಸ್ಕರ್ ಶೆಟ್ಟಿ, ಕೇಶವ ಎ., ದಿವಾಕರ ವಿ., ಜಯಂತಿ ಎಚ್. ರಾವ್, ಶುಭಲಕ್ಷ್ಮಿ, ಪೂವಪ್ಪ ಎಸ್ ಸೇವೆ ಸಲ್ಲಿಸುತ್ತಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Co Operative ministry Cooperative Cooperative Department Cooperative Registrar H Jagannatha Salyan Vitla Spandana Vitla Grameena Sahakari Bank
    Previous Articleಎಂಸಿಸಿ ಬ್ಯಾಂಕ್‌ ವಿತ್ತೀಯ ವರ್ಷದಲ್ಲಿ 13.00 ಕೋಟಿ ರೂ. ಲಾಭ
    Next Article ಎಂಸಿಸಿ ಬ್ಯಾಂಕ್‌ ವಿತ್ತೀಯ ವರ್ಷದಲ್ಲಿ 13 ಕೋಟಿ ರೂ. ಲಾಭ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.