Top News

    ಗದಗ ಜಿಲ್ಲಾ ಸಹಕಾರ ಸಂಘಗಳ ವತಿಯಿಂದ ಸಹಕಾರದಿಂದ ಸ್ವಚ್ಛತಾ ಅಭಿಯಾನ

    June 6, 2025

    ನಿರೀಕ್ಷೆಗೂ ಮೀರಿ ರೆಪೋ ದರ ಕಡಿತಗೊಳಿಸಿದ ಆರ್‌ಬಿಐ

    June 6, 2025

    ಜೂನ್‌ 8ರಂದು ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಕ್ಷಯ ಸೌಧ ಕಟ್ಟಡ ಉದ್ಘಾಟನೆ

    June 5, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎಸ್‌ಸಿಡಿಸಿಸಿ ಬ್ಯಾಂಕ್ ಗ್ರಾಹಕ ಸ್ನೇಹಿ ಬ್ಯಾಂಕ್
    News

    ಎಸ್‌ಸಿಡಿಸಿಸಿ ಬ್ಯಾಂಕ್ ಗ್ರಾಹಕ ಸ್ನೇಹಿ ಬ್ಯಾಂಕ್

    adminBy adminApril 21, 2025

    ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಭಿಪ್ರಾಯ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗ್ರಾಹಕರ ಸೇವೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳಿಗಿಂತ ಮುಂಚೂಣಿಯಲ್ಲಿದೆ. ಬ್ಯಾಂಕ್ ತನ್ನ 113 ಶಾಖೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿದ್ದು, ಗ್ರಾಹಕರಿಗೆ ಉತ್ಕೃಷ್ಟ ಸೇವೆ ನೀಡಿ ‘ಗ್ರಾಹಕ ಸ್ನೇಹಿ ಬ್ಯಾಂಕ್ ‘ ಆಗಿ ಬೆಳೆದಿದೆ ಎಂದು ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.

    https://chat.whatsapp.com/EbVKVnWB6rlHT1mWtsgbch
    ಬ್ಯಾಂಕಿನ ಸಿಬ್ಬಂದಿಗಳಿಗೆ ಭಾನುವಾರ ಗಿಫ್ಟ್ ಕೂಪನ್ ವಿತರಣಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಿಬ್ಬಂದಿಗಳಿಗೆ ಪೂರಕವಾಗಿರುವ ಪಿಂಚಣಿ ಯೋಜನೆಯನ್ನು ರಾಜ್ಯದಲ್ಲಿ ಮೊದಲ ಬಾರಿ ಜಾರಿಗೆ ತಂದ ಹೆಗ್ಗಳಿಕೆ ಎಸ್‌ಸಿಡಿಸಿಸಿ ಬ್ಯಾಂಕಿನದ್ದು. ಮಾತ್ರವಲ್ಲ ಬ್ಯಾಂಕ್ ಕಾಲಕಾಲಕ್ಕೆ ವಿವಿಧ ಸವಲತ್ತುಗಳನ್ನು ಸಿಬ್ಬಂದಿಗಳಿಗೆ ನೀಡುತ್ತಿದೆ. ಹಾಗಾಗಿ ಸಿಬ್ಬಂದಿಗಳು ತಮ್ಮ ಕಾರ್ಯದಕ್ಷತೆಯನ್ನು ಹೆಚ್ಚಿಸಿ ಬ್ಯಾಂಕಿನ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.
    ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಮಾತನಾಡಿ, ಎಸ್‌ಸಿಡಿಸಿಸಿ ಬ್ಯಾಂಕ್ ಇಂದು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಾಗಲು ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ದಕ್ಷ ನಾಯಕತ್ವ ಕಾರಣವಾಗಿದೆ. 31 ವರ್ಷ ಕಾಲ ಎಸ್‌ಸಿಡಿಸಿಸಿ ಬ್ಯಾಂಕ್ ಅನ್ನು ಅತ್ಯುನ್ನತ ಮಟ್ಟಕ್ಕೇರಿಸಿದ ಇವರು ಬ್ಯಾಂಕಿನ ಸರ್ವಾಂಗೀಣ ಪ್ರಗತಿಯ ರೂವಾರಿಯಾಗಿದ್ದಾರೆ ಎಂದರು.


    ರೂ.10,000 ಮೌಲ್ಯದ ಗಿಫ್ಟ್ ಕೂಪನ್ : ಬ್ಯಾಂಕಿನ ಸಿಬ್ಬಂದಿಗೆ ತಲಾ ರೂ.10,000 ಮೌಲ್ಯದ ಗಿಫ್ಟ್ ಕೂಪನ್ ವಿತರಿಸಲಾಯಿತು. ಬ್ಯಾಂಕಿನ ಸಿಬ್ಬಂದಿ ಪರವಾಗಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಗೋಪಾಲಕೃಷ್ಣ ಭಟ್, ಮಹಾಪ್ರಬಂಧಕ ಸುನೀಲ್ ಕುಮಾರ್ ಹೊಳ್ಳ, ಸಹಾಯಕ ಮಹಾಪ್ರಬಂಧಕ ಅಶೋಕ್ ಎಚ್.ಎಂ. ಹಾಗೂ ಸಿಬ್ಬಂದಿಗಳಾದ ಶ್ರೇಯಾ ಶೆಟ್ಟಿ , ಪ್ರಕಾಶ್ ಕೆ. ಹಾಗೂ ರಮೇಶ್ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರಿಂದ ರೂ. 10,000 ಮೌಲ್ಯದ ಗಿಫ್ಟ್ ಕೂಪನ್ ಸ್ವೀಕರಿಸಿದರು.
    ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಿರ್ದೇಶಕರಾದ ಭಾಸ್ಕರ್ ಎಸ್.ಕೋಟ್ಯಾನ್, ಶಶಿಕುಮಾರ್ ರೈ ಬಾಲ್ಯೊಟ್ಟು, ಮಹೇಶ್ ಎಂ.ಹೆಗ್ಡೆ, ಸದಾಶಿವ ಉಳ್ಳಾಲ್, ಮೋನಪ್ಪ ಶೆಟ್ಟಿ, ರಾಜೇಶ್ ರಾವ್ ಉಪಸ್ಥಿತರಿದ್ದರು. ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಸ್ವಾಗತಿಸಿದರು. ಮಹಾಪ್ರಬಂಧಕ ಸುನೀಲ್ ಕುಮಾರ್ ಹೊಳ್ಳ ವಂದಿಸಿದರು. ಉಪ ಮಹಾಪ್ರಬಂಧಕ ನಿತ್ಯಾನಂದ ಶೇರಿಗಾರ್ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Co Operative ministry Cooperative Cooperative Department Cooperative Registrar Dr. M.N Rajendrakumar Gift Vocuher SCDCC Bank
    Previous Articleಡಾ.ಪ್ರಭಾಕರ ಕೋರೆ ಕೋ-ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಗೆ 25.30 ಕೋಟಿ ರೂ. ಲಾಭ
    Next Article ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ 16 ನಿರ್ದೇಶಕ ಸ್ಥಾನಕ್ಕೆ 41 ಮಂದಿ ಕಣದಲ್ಲಿ

    Related Posts

    News

    ಗದಗ ಜಿಲ್ಲಾ ಸಹಕಾರ ಸಂಘಗಳ ವತಿಯಿಂದ ಸಹಕಾರದಿಂದ ಸ್ವಚ್ಛತಾ ಅಭಿಯಾನ

    June 6, 2025
    News

    ನಿರೀಕ್ಷೆಗೂ ಮೀರಿ ರೆಪೋ ದರ ಕಡಿತಗೊಳಿಸಿದ ಆರ್‌ಬಿಐ

    June 6, 2025
    News

    ಜೂನ್‌ 8ರಂದು ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಕ್ಷಯ ಸೌಧ ಕಟ್ಟಡ ಉದ್ಘಾಟನೆ

    June 5, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಗದಗ ಜಿಲ್ಲಾ ಸಹಕಾರ ಸಂಘಗಳ ವತಿಯಿಂದ ಸಹಕಾರದಿಂದ ಸ್ವಚ್ಛತಾ ಅಭಿಯಾನ

    June 6, 2025

    ನಿರೀಕ್ಷೆಗೂ ಮೀರಿ ರೆಪೋ ದರ ಕಡಿತಗೊಳಿಸಿದ ಆರ್‌ಬಿಐ

    June 6, 2025

    ಜೂನ್‌ 8ರಂದು ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಕ್ಷಯ ಸೌಧ ಕಟ್ಟಡ ಉದ್ಘಾಟನೆ

    June 5, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.