Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ 16 ನಿರ್ದೇಶಕ ಸ್ಥಾನಕ್ಕೆ 41 ಮಂದಿ ಕಣದಲ್ಲಿ
    News

    ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ 16 ನಿರ್ದೇಶಕ ಸ್ಥಾನಕ್ಕೆ 41 ಮಂದಿ ಕಣದಲ್ಲಿ

    adminBy adminApril 22, 2025

    ಏಪ್ರಿಲ್‌ 26ರಂದು ಚುನಾವಣೆ, ಅಂದೇ ಮತ ಎಣಿಕೆ, ಫಲಿತಾಂಶ

    ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯುವುದು ಪಕ್ಕಾ ಆಗಿದೆ. ಏಪ್ರಿಲ್‌ 26ರಂದು ಚುನಾವಣೆ ನಡೆಯಲಿದ್ದು, ಒಟ್ಟು 16 ನಿರ್ದೇಶಕ ಸ್ಥಾನಕ್ಕೆ ಅಂತಿಮವಾಗಿ 41 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

    https://chat.whatsapp.com/EbVKVnWB6rlHT1mWtsgbch
    16 ನಿರ್ದೇಶಕ ಸ್ಥಾನಗಳಿದ್ದು ದ.ಕ. ಮತ್ತು ಉಡುಪಿ ಜಿಲ್ಲೆಗಳ ತಲಾ 8 ಸ್ಥಾನಗಳಂತೆ ಹಂಚಿಕೆ ಮಾಡಲಾಗಿದೆ. ಇದರಲ್ಲಿ ತಲಾ ಒಂದು ಸ್ಥಾನ ಮಹಿಳೆಯರಿಗೆ ಮೀಸಲು. ಅವಿಭಜಿತ ದ.ಕ. ಜಿಲ್ಲೆಗಳಿಂದ ಸಲ್ಲಿಕೆಯಾಗಿದ್ದ ನಾಮಪತ್ರಗಳ ಪೈಕಿ ಒಟ್ಟು 60 ನಾಮಪತ್ರ ಸಿಂಧುವಾಗಿತ್ತು. ಹಾಲಿ 16 ನಿರ್ದೇಶಕರ ಪೈಕಿ 13 ಮಂದಿ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಇವರಲ್ಲಿ ಹಾಲಿ ಅಧ್ಯಕ್ಷ ಸುಚರಿತ ಶೆಟ್ಟಿ 4ನೇ ಬಾರಿ, ಮಾಜಿ ಅಧ್ಯಕ್ಷರಾದ ರವಿರಾಜ ಹೆಗ್ಡೆ ಹಾಗೂ ಕಾಪು ದಿವಾಕರ ಶೆಟ್ಟಿ5ನೇ ಬಾರಿ, ಪ್ರಕಾಶ್ಚಂದ್ರ ಶೆಟ್ಟಿ, ಮಂಜಯ್ಯ ಶೆಟ್ಟಿ, ಎಸ್ .ಬಿ.ಜಯರಾಮ ರೈ 3ನೇ ಬಾರಿ, ಸುಭದ್ರಾ ರಾವ್ 2ನೇ ಬಾರಿ ಕಣಕ್ಕೆ ಇಳಿದಿದ್ದಾರೆ.
    ಉಡುಪಿಯಿಂದ ಕಮಲಾಕ್ಷ ಹೆಬ್ಬಾರ್, ಉದಯ ಕೋಟ್ಯಾನ್, ದ.ಕ.ದಿಂದ ಕೆ.ಚಂದ್ರಶೇಖರ ರಾವ್ ಮಾಡ್ನೂರು, ಬಿ.ಸುಧಾಕರ ರೈ ಬೋಳಂತೂರು, ಶರ್ಮಿಳಾ ಬಾಳುಗೋಡು, ಉಷಾ ಅಂಚನ್ ಕೊಣಾಲು, ಸವಿತಾ ಎನ್. ಶೆಟ್ಟಿ ಬಡಗಬೆಳ್ಳೂರು ಮತ್ತಿತರ ಹೊಸ ಮುಖಗಳು ಕಣದಲ್ಲಿದ್ದಾರೆ.


    ಅವಿರೋಧ ಆಯ್ಕೆಗೆ ವಿಫಲ ಪ್ರಯತ್ನ: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ 2009 ಹಾಗೂ 2014ರಲ್ಲಿ ಹಾಲು ಒಕ್ಕೂಟ ನಿರ್ದೇಶಕ ಸ್ಥಾನಕ್ಕೆ ಆವಿರೋಧ ಆಯ್ಕೆ ನಡೆದಿತ್ತು. ಈ ಬಾರಿಯೂ ಅವಿರೋಧ ಆಯ್ಕೆಗೆ ಪ್ರಯತ್ನ ನಡೆಸಿದರೂ ಸಾಧ್ಯವಾಗಿಲ್ಲ.
    ಏ.26ರಂದು ಬೆಳಗ್ಗೆ 9ರಿಂದ ಸಂಜೆ 4ರ ತನಕ ಮತದಾನ ನಡೆಯಲಿದೆ. ಹಾಲು ಒಕ್ಕೂಟದ 750 ಸಂಘಗಳ ಪೈಕಿ 710 ಸಂಘಗಳು ಮತದಾನದ ಅರ್ಹತೆ ಪಡೆದುಕೊಂಡಿವೆ. ಒಂದು ಹಾಲು ಸೊಸೈಟಿಯಿಂದ ಒಬ್ಬರಿಗೆ ಮಾತ್ರ ಮತದಾನಕ್ಕೆ ಅವಕಾಶವಿದ್ದು, ಸೊಸೈಟಿಯ ಆಡಳಿತ ಮಂಡಳಿ ಸೂಚಿಸಿದ ವ್ಯಕ್ತಿ ಮತದಾನ ಮಾಡುವ ಅಧಿಕಾರ ಹೊಂದಿದ್ದಾರೆ. ಮತದಾನ ಮುಕ್ತಾಯ ಬಳಿಕ ಅಂದೇ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಮತದಾನ ಕುಲಶೇಖರದಲ್ಲಿರುವ ಹಾಲು ಒಕ್ಕೂಟ ಕಚೇರಿಯಲ್ಲಿ ನಡೆಯಲಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Cooperative Cooperative Department Dakshina Kannada Sahakari Halu utpadakara Okkuta dkmul Election Kapu Divakara Shetty Spandana Sucharitha Shetty
    Previous Articleಎಸ್‌ಸಿಡಿಸಿಸಿ ಬ್ಯಾಂಕ್ ಗ್ರಾಹಕ ಸ್ನೇಹಿ ಬ್ಯಾಂಕ್
    Next Article ಒಂದೇ ರೀತಿಯ ಸಮವಸ್ತ್ರದಲ್ಲಿ ಒಂದೂವರೆ ಲಕ್ಷ ಮಹಿಳೆಯರ ಸಮಾವೇಶ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.