ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಾಡೂರು ಶಾಖೆಯ ವಾರ್ಷಿಕೋತ್ಸವ ಪ್ರಯುಕ್ತ ಶ್ರೀ ಶಿರಡಿ ಸಾಯಿಬಾಬಾ ಮಂದಿರ ಮಾಡೂರು ಹಾಗೂ ಶ್ರೀ ವನದುರ್ಗಾ ಅಯ್ಯಪ್ಪ ಭಜನಾ ಮಂದಿರ ಇವರ ಜಂಟಿ ಸಹಯೋಗದೊಂದಿಗೆ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ ಏಪ್ರಿಲ್ 27ರ ಭಾನುವಾರ ಬೆಳಗ್ಗೆ 9.30ರಿಂದ ಮದ್ಯಾಹ್ನ 12.30ರವರೆಗೆ ಮಾಡೂರಿನ ಕೊರಗಜ್ಜನ ಕಟ್ಟೆಯ ಮುಂಭಾಗದ ಮಾತೃಶ್ರೀ ಕಾಂಪ್ಲೆಕ್ಸ್‌ನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಆವರಣದಲ್ಲಿ ಆಯೋಜಿಸಲಾಗಿದೆ.
https://chat.whatsapp.com/EbVKVnWB6rlHT1mWtsgbch
ಈ ಶಿಬಿರದಲ್ಲಿ ಎ.ಜೆ. ಇನ್‌ಸ್ಟಿಟ್ಯೂಟ್ ಮತ್ತು ಮೆಡಿಕಲ್ ಸೈನ್ಸ್ ಮಂಗಳೂರು, ಇವರ ನುರಿತ ವೈದ್ಯರ ತಂಡದಿಂದ ಮಧುಮೇಹ ತಪಾಸಣೆ, ಬಿ.ಪಿ ತಪಾಸಣೆ, ಕಣ್ಣಿನ ತಪಾಸಣೆ, ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಇತರ ವೈದ್ಯಕೀಯ ಸೇವೆಗಳು, ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡುವುದು ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ನುರಿತ ವೈದ್ಯರ ತಂಡದಿಂದ ದಂತ ತಪಾಸಣೆ, ಹುಳುಕು ಹಲ್ಲುಗಳ ಭರ್ತಿ, ಶುಚಿಗೊಳಿಸುವುದು, ಕೀಳುವುದು ಹಾಗೂ ಸಂಘದ ವತಿಯಿಂದ ಅಗತ್ಯವುಳ್ಳ ಕಣ್ಣಿನ ರೋಗಿಗಳಿಗೆ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗುವುದು. ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com