ಸಹಕಾರ ಸಂಘಗಳ ಉಪನಿಬಂಧಕಿ ಗಗನ ಕೆ ಅಭಿಪ್ರಾಯ
ಮಂಗಳೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯು ತಮ್ಮ ಅಧೀನದ ಸೌಹಾರ್ದ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ, ಸಿಬ್ಬಂದಿಗಳಿಗೆ, ನಿರ್ದೇಶಕರುಗಳಿಗೆ ಕಾಲಕಾಲಕ್ಕೆ ತರಬೇತಿ ಶಿಬಿರಗಳನ್ನು ಆಯೋಜಿಸುತ್ತ ಸಹಕಾರಿಗಳ ಬಗ್ಗೆ ಜ್ಞಾನ ಹೆಚ್ಚಿಸುವ ಕೆಲಸ ಮಾಡುತ್ತಿದೆ. ಸಂಬಂಧಪಟ್ಟವರು ತರಬೇತಿ ಶಿಬಿರಗಳಲ್ಲಿ ಭಾಗವಹಿಸಿ ತಮ್ಮ ಜ್ಞಾನ ಹೆಚ್ಚಿಸುವ ಕೆಲಸ ಮಾಡುತ್ತಿರಬೇಕು ಎಂದು ಸೌಹಾರ್ದ ಸಹಕಾರಿಗಳ ದಾವಾ ಪಂಚಾಯಿತಿ ನ್ಯಾಯಾಲಯದ ಸಹಕಾರ ಸಂಘಗಳ ಉಪನಿಬಂಧಕಿ, ಗಗನ ಕೆ ಅಭಿಪ್ರಾಯಪಟ್ಟರು.
https://chat.whatsapp.com/EbVKVnWB6rlHT1mWtsgbch
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ವತಿಯಿಂದ ಶನಿವಾರ ಮಂಗಳೂರಿನ ಶ್ರೀನಿವಾಸ ಹೋಟೆಲ್ ಸಭಾಂಗಣದಲ್ಲಿ ನಡೆದ ಲೆಕ್ಕ ಪರಿಶೋಧನಾ ವರದಿಗಳ ಪೂರ್ವ ಸಿದ್ಧತೆಗಳು ಹಾಗೂ ದಾವಾ ದಾಖಲಾತಿ ಪ್ರಕ್ರಿಯೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತರಬೇತಿಗಳಲ್ಲಿ ಭಾಗವಹಿಸಿದಾಗ ಜ್ಞಾನ ಹೆಚ್ಚುತ್ತದೆ. ಹೆಚ್ಚಿನ ಜ್ಞಾನ ಸಂಪಾದನೆಯಿಂದ ಪ್ರಾಮಾಣಿಕತೆ ಹೆಚ್ಚುತ್ತದೆ. ಮನುಷ್ಯ ಜನ್ಮ ಎಂಬುದು ಬಹಳಷ್ಟು ಪುಣ್ಯ ಸಂಚಯದಿಂದ ಸಿಗುವಂಥದ್ದು. ಮನುಷ್ಯ ಜೀವನದಲ್ಲಿ ಸಿಗುವ ಪ್ರತಿಯೊಂದು ಕ್ಷಣವನ್ನೂ ಸದುಪಯೋಗ ಮಾಡಿಕೊಳ್ಳಬೇಕು. ಕಲಿಕೆ ಎಂಬುದು ನಿರಂತರ ಪ್ರಕ್ರಿಯೆ. ಅದು ಯಾವತ್ತೂ ಮುಗಿಯದ ಪ್ರಕ್ರಿಯೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯು ಆವಾಗಾವಾಗ ಮಾಡುವ ತರಬೇತಿಗಳಲ್ಲಿ ಪೂರ್ತಿಯಾಗಿ ಭಾಗವಹಿಸಿ ಎಲ್ಲರೂ ಜ್ಞಾನ ಹೆಚ್ಚಿಸಿಕೊಳ್ಳಬೇಕು. ಇಲ್ಲಿ ಕಲಿತು ಹೊರಗೆ ಹೋದಾಗ ಸಾಕಷ್ಟು ಜ್ಞಾನವನ್ನು ಸಂಪಾದಿಸಿಕೊಳ್ಳಬೇಕು. ಇದರಿಂದ ತಮ್ಮ ಕೆಲಸದ ಜಾಗದಲ್ಲಿ ಹೆಚ್ಚು ಪಕ್ವವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಗಗನ ಕೆ ಹೇಳಿದರು.
ಸನ್ನದು ಲೆಕ್ಕಪರಿಶೋಧಕ ಮಧುಕರ ಹೆಗ್ಡೆ ಮುಖ್ಯ ಅತಿಥಿಯಾಗಿದ್ದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ ಪ್ರಾಸ್ತಾವಿಕ ಮಾತನಾಡಿದರು. ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ.ಎಸ್ ಸ್ವಾಗತಿಸಿದರು. ಸೌಹಾರ್ದ ಅಭಿವೃದ್ಧಿ ಅಧಿಕಾರಿ ನಂದನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com