ಮಂಗಳೂರು: ದೇಶದಲ್ಲಿ ಯುದ್ಧ ಸ್ಥಿತಿ ತಲೆದೋರಿದ್ದು ಪಾಕಿಸ್ತಾನ ವಿರುದ್ಧದ ಆಪರೇಶನ್ ಸಿಂಧೂರ್ ಕಾರ್ಯಾಚರಣೆ ನಡೆಯುತ್ತಿದೆ. ಭಯೋತ್ಪಾದನೆಯ ವಿರುದ್ಧದ ಸಿಂಧೂರ ಕಾರ್ಯಾಚರಣೆಯಲ್ಲಿ ಭಾಗವಹಿಸುತ್ತಿರುವ ಸೈನಿಕರಿಗೆ ಶಕ್ತಿ ತುಂಬುವುದಕ್ಕಾಗಿ ನವೋದಯ ಸಂಸ್ಥೆ ಮತ್ತು ತನ್ನ ವೈಯಕ್ತಿಕ ನೆಲೆಯಲ್ಲಿ 3 ಕೋಟಿ ರೂ. ಸೈನಿಕರ ಕಲ್ಯಾಣಕ್ಕೆ ನೀಡಲಾಗುವುದು ಎಂದು ಸಹಕಾರ ರತ್ನ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ನವೋದಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಘೋಷಿಸಿದರು.
https://chat.whatsapp.com/EbVKVnWB6rlHT1mWtsgbch
ಶನಿವಾರ ಮಂಗಳೂರಿನ ಬಂಗ್ರಕೂಳೂರು ಗೋಲ್ಡ್‌ಫಿಂಚ್ ಮೈದಾನದಲ್ಲಿ ನಡೆದ ನವೋದಯ ಸ್ವಸಹಾಯ ಸಂಘಗಳ ರಜತ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತನಾಡುವ ವೇಳೆ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಈ ಘೋಷಣೆ ಮಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್, ಸಚಿವರಾದ ಕೆ.ಎನ್ ರಾಜಣ್ಣ, ದಿನೇಶ್ ಗುಂಡೂರಾವ್, ಆರ್.ಬಿ.ತಿಮ್ಮಾಪುರ್, ಲಕ್ಷ್ಮೀ ಹೆಬ್ಬಾಳ್ಕರ್, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರುಗಳು ಮೊದಲಾದವರು ಹಾಜರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com