ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದರ ತೊಕ್ಕೊಟ್ಟು ಶಾಖೆಯ ವತಿಯಿಂದ ಶ್ರೀ ಜೈ ವೀರಮಾರುತಿ ವ್ಯಾಯಾಮ ಶಾಲೆ ಟ್ರಸ್ಟ್, ಭಟ್ನಗರ ತೊಕ್ಕೊಟ್ಟು ಇವರ ಅಮೃತ ಮಹೋತ್ಸವ ಪ್ರಯುಕ್ತ ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇವರ ನುರಿತ ತಜ್ಞ ವೈದ್ಯ ತಂಡದವರಿಂದ ಉಚಿತ ದಂತ ತಪಾಸಣೆ ಮತ್ತು ಎ.ಜೆ. ಇನ್‌ಸ್ಟಿಟ್ಯೂಟ್ ಮತ್ತು ಮೆಡಿಕಲ್ ಸೈನ್ಸ್, ಮಂಗಳೂರು ಇವರ ನುರಿತ ತಜ್ಞ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರ ಶ್ರೀ ಜೈ ವೀರಮಾರುತಿ ವ್ಯಾಯಾಮ ಶಾಲೆ ಟ್ರಸ್ಟ್ ಭಟ್ನಗರ ತೊಕ್ಕೊಟ್ಟು ಇದರ ಆವರಣದಲ್ಲಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಭಾನುವಾರ ಜರುಗಿತು.
https://chat.whatsapp.com/EbVKVnWB6rlHT1mWtsgbch
ಶ್ರೀ ಜೈ ವೀರಮಾರುತಿ ವ್ಯಾಯಾಮ ಶಾಲೆ ಟ್ರಸ್ಟ್ ಮುಖ್ಯ ಶಿಕ್ಷಕ ಜಯಾನಂದ ಅಂಚನ್ ಉದ್ಘಾಟಿಸಿದರು. ಶ್ರೀ ಜೈ ವೀರಮಾರುತಿ ವ್ಯಾಯಾಮ ಶಾಲೆ ಟ್ರಸ್ಟ್ ಅಧ್ಯಕ್ಷ ಪುರುಷೋತ್ತಮ ಗಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿ ಟ್ರಸ್ಟ್‌ನ ಅಮೃತ ಮಹೋತ್ಸವದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇದರ ಅಂಗವಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಯೋಗದೊದಿಗೆ ಅಚ್ಚುಕಟ್ಟಾದ ಉಚಿತ ವೈದ್ಯಕೀಯ ಶಿಬಿರ ನಡೆಸುತ್ತಿದ್ದೇವೆ. ಇದಕ್ಕೆ ಸಹಕಾರ ನೀಡಿದ ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್ ಹಾಗೂ ಎಲ್ಲಾ ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದರು.
ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳ ಕಟ್ಟೆ ಇಲ್ಲಿನ ವೈದ್ಯರಾದ ಡಾ|ರೇಖಾ ಪಿ.ಶೆಣೈ ಮಾತನಾಡಿ ಸಮಾಜದ ಎಲ್ಲಾ ಜನರು ಉದ್ಯೋಗದ ಜೊತೆಗೆ ತಮ್ಮ ಆರೋಗ್ಯದ ಕಾಳಜಿ ನೋಡಿಕೊಳ್ಳಬೇಕು ಮತ್ತು ಈ ಶಿಬಿರದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಯ ಹಸಿರು ಕಾರ್ಡ್ ವಿತರಿಸುತ್ತಿದ್ದು ಶಿಬಿರಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಸಾಮಾಜಿಕ ಕಾರ್ಯಕರ್ತ ಸುಂದರ ಉಳ್ಳಾಲ ಮಾತನಾಡಿ ಬ್ಯಾಂಕಿಂಗ್ ಸೇವೆಯ ಜೊತೆಗೆ ಇಂತಹ ವೈದ್ಯಕೀಯ ಶಿಬಿರ ಆಯೋಜಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಮಾಜಿಕ ಕಳಕಳಿ ಶ್ಲಾಘನೀಯ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ೧೩ ವರ್ಷಗಳಿಂದ ಉಚಿತ ವೈದ್ಯಕೀಯ ಶಿಬಿರ ಏರ್ಪಡಿಸುತ್ತಿದ್ದು, ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ಇದರ ಸಂಪೂರ್ಣ ಪ್ರಯೋಜನ ಪಡೆಯುತ್ತಿದ್ದಾರೆ. ಸಂಘದ ೮೪ನೇ ಉಚಿತ ವೈದ್ಯಕೀಯ ಶಿಬಿರವು ಇದಾಗಿದ್ದು ಜೂನ್ ೧೫ರಂದು ಉಳ್ಳಾಲ ಪರಿಸರದಲ್ಲಿ ಉಚಿತ ವೈದ್ಯಕೀಯ ಶಿಬಿರ ಆರೋಜಿಸಲಾಗುವುದೆಂದು ತಿಳಿಸಿದರು.
ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ , ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಉದ್ಯಮಿ ಭಾಸ್ಕರ ಗಟ್ಟಿ, ಎ.ಜೆ.ಇನ್‌ಸ್ಟಿಟ್ಯೂಟ್ ಮತ್ತು ಮೆಡಿಕಲ್ ಸೈನ್ಸ್ ವೈದ್ಯರಾದ ಡಾ|ಮಾಣಿಕ್ ಆರೋರ ಹಾಗೂ ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ಇಲ್ಲಿನ ಪಿ.ಆರ್.ಓ ಭರತ್ ಮತ್ತಿತ್ತರರು ಉಪಸ್ಥಿತರಿದ್ದರು.
೧೫೦ಕ್ಕೂ ಅಧಿಕ ಶಿಬಿರಾರ್ಥಿಗಳು ವೈದ್ಯಕೀಯ ಶಿಬಿರದ ಪ್ರಯೋಜನ ಪಡೆದುಕೊಂಡರು. ಸಂಘದ ಉಳ್ಳಾಲ ಶಾಖೆಯ ಹಿರಿಯ ಶಾಖಾಧಿಕಾರಿ ಸಚಿನ್ ವಂದಿಸಿದರು, ತ್ರಿವೇಣಿ ಕಿರಣ್ ಕಾರ್ಯಕ್ರಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com