ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್, ಸಹಕಾರ ಇಲಾಖೆ ಮತ್ತು ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಮೇ 28ರಂದು ಸಂತ ಫಿಲೋಮಿನಾ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ ಅಂಗವಾಗಿ ಸ್ವಚ್ಛತಾ ಸೇ ಸಹಕಾರ್ ಕಾರ್ಯಕ್ರಮ ನಡೆಯಲಿದೆ.
https://chat.whatsapp.com/EbVKVnWB6rlHT1mWtsgbch
ಬೆಳಗ್ಗೆ 10ಕ್ಕೆ ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ರೆ.ಡಾ.ಆಂಟನಿ ಪ್ರಕಾಶ್ ಮೊಂತೇರೊ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರೂ, ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಡಾ.ಎಸ್ ಆರ್ ಹರೀಶ್ ಆಚಾರ್ಯ ಅವರು ವಿಷಯ ಮಂಡನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಎಸ್.ಬಿ ಜಯರಾಮ ರೈ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ಮಂಜುನಾಥ ಎನ್.ಎಸ್, ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕ ಎಚ್.ಎನ್ ರಮೇಶ್, ಪುತ್ತೂರು ಉಪವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕ ಎನ್.ಎಸ್ ರಘು ಭಾಗವಹಿಸಲಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com