ಉಡುಪಿ: ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಇದರ ಮಹಾಸಭೆ ಮಂಗಳವಾರ ಸಹಕಾರಿಯ ನೋಂದಾಯಿತ ಕಚೇರಿಯಲ್ಲಿ ಸೊಸೈಟಿಯ ಅಧ್ಯಕ್ಷರಾದ ಜೆಸಿಂತಾ ಡಿಸೋಜ ಅಧ್ಯಕ್ಷತೆಯಲ್ಲಿ ಜರುಗಿತು.
https://chat.whatsapp.com/EbVKVnWB6rlHT1mWtsgbch
ದೇವರ ಸ್ತುತಿಯೊಂದಿಗೆ ಶಾಖಾ ಸಿಬ್ಬಂದಿಗಳು ಕಾರ್ಯಕ್ರಮ ಆರಂಭಿಸಿದರು. ಕಾರ್ಯಕ್ರಮ ನಿರ್ವಹಿಸಿದ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೀವನ್ ಡಿಸೋಜ ಲೆಕ್ಕ ಪರಿಶೋಧನಾ ವರದಿ ಮಂಡಿಸಿದರು. ಗುರುಚರಣ್ ಇವರು ಸ್ವಾಗತಿಸಿದರು. ಮುಖ್ಯ ಅತಿಥಿಯಾಗಿದ್ದ ಸಮಾಜಸೇವಕ ಶೈಲೇಶ್ ಆರ್.ಹಳದಿಪುರ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿ ಸಲಹೆ ಸೂಚನೆಗಳನ್ನು ನೀಡಿ ಸಹಕಾರಿಯ ಅಭಿವೃದ್ಧಿ ಮತ್ತು ಸಹಕಾರಿಯ ಮಹತ್ವದ ಕುರಿತು ಅನಿಸಿಕೆಗಳನ್ನು ತಿಳಿಸಿದರು. ಅಧ್ಯಕ್ಷೀಯ ಭಾಷಣ ಮಾಡಿದ ಸಹಕಾರಿಯ ಅಧ್ಯಕ್ಷರಾದ ಜೆಸಿಂತಾ ಡಿಸೋಜ ನಮ್ಮ ಸಹಕಾರಿಯು ಅಭಿವೃದ್ಧಿ ಹೊಂದುತ್ತಿದ್ದು ಎಲ್ಲರ ಸಹಕಾರದಿಂದ ಈ ಮಟ್ಟಕ್ಕೆ ಬೆಳೆದಿದೆ ಎನ್ನಲು ಸಂತೋಷವಾಗುತ್ತದೆ. ಸದಸ್ಯರು ಸಂಪೂರ್ಣ ಸಹಕಾರ ಇನ್ನೂ ಹೆಚ್ಚು ನೀಡಿದಲ್ಲಿ ನಮ್ಮ ಸಹಕಾರಿಯು ಇನ್ನಷ್ಟು ಅಭಿವೃದ್ಧಿ ಹೊಂದಲು ಸಹಕಾರಿಯಾಗುವುದು ಎಂದು ತಿಳಿಸಿದರು.
ಸೊಸೈಟಿಯ ಉಪಾಧ್ಯಕ್ಷರಾದ ಅಜಯ್ ಕುಮಾರ್, ನಿರ್ದೇಶಕರಾದ ಪ್ರಶಾಂತ್ ಕುಮಾರ್, ಜೂದ್ ನೆಲ್ಸನ್ ಡಿಸೋಜ, ಗುರುಚರಣ್ ನಾಯ್ಕ್, ರೋಹನ್ ಪ್ರಶಾಂತ್ ಕೊಲಾಸೊ, ಪ್ರಶಾಂತಿ ಪ್ರಿಯಾ ಕ್ಯಾಸ್ಟಲಿನೋ, ಸೀಮಾ, ಅಜಿತ್, ಸಿಬ್ಬಂದಿ ವರ್ಗದವರು ಹಾಗೂ ಸಹಕಾರಿಯ ಸದಸ್ಯರು ಉಪಸ್ಥಿತರಿದ್ದರು. ನಿರ್ದೇಶಕ ಪ್ರಶಾಂತ್ ಕುಮಾರ್ ವಂದಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com