Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ಮಾಡೂರು ಶಾಖೆಯಲ್ಲಿ ಸ್ವ-ಉದ್ಯೋಗ ತರಬೇತಿ ಕಾರ್ಯಾಗಾರ
    News

    ಆತ್ಮಶಕ್ತಿ ಮಾಡೂರು ಶಾಖೆಯಲ್ಲಿ ಸ್ವ-ಉದ್ಯೋಗ ತರಬೇತಿ ಕಾರ್ಯಾಗಾರ

    adminBy adminMay 28, 2025

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗುರುಶ್ರೀ ಸ್ವ-ಸಹಾಯ ಗುಂಪಿನ ಮಹಿಳಾ ಸದಸ್ಯರಿಗೆ ಸ್ವ-ಉದ್ಯೋಗ ತರಬೇತಿ ಕಾರ್ಯಾಗಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಮಾಡೂರು ಶಾಖೆಯ ಆವರಣದಲ್ಲಿ ಜರುಗಿತು.

    https://chat.whatsapp.com/EbVKVnWB6rlHT1mWtsgbch
    ಮಾಡೂರು ಶಾಖೆಯ ಹಿರಿಯ ಸದಸ್ಯರಾದ ಸುಂದರಿ ಕಾರ್ಯಾಗಾರ ಉದ್ಘಾಟಿಸಿದರು. ಸಂತ ಆಗ್ನೆಸ್ ಕಾಲೇಜಿನ ಸಹ ಪ್ರಾದ್ಯಾಪಕರಾಗಿರುವ ಡಾ.ಮೀರಾ ರಮೇಶ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಸಂಘದ ಗುರುಶ್ರೀ ಸ್ವ-ಸಹಾಯ ಗುಂಪಿನ ಮಹಿಳಾ ಸದಸ್ಯರಿಗೆ ಇಂತಹ ಅಚ್ಚುಕಟ್ಟಾದ ಸ್ವ-ಉದ್ಯೋಗ ತರಬೇತಿ ಕಾರ್ಯಾಗಾರವನ್ನು ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್ ಮುಂದಾಳತ್ವದಲ್ಲಿ ಹಮ್ಮಿಕೊಂಡಿರುವುದು ಶ್ಲಾಘನೀಯ ಹಾಗೂ ಅಂತಾರಾಷ್ಟ್ರೀಯ ಕಾರ್ಯಾಗಾರದಲ್ಲಿ ಈ ತರಬೇತಿಯ ಬಗ್ಗೆ ಮಂಡಿಸಲಿದ್ದೇನೆ ಎಂದು ತಿಳಿಸಿದರು.


    ಕಾರ್ಯಕ್ರಮದ ತರಬೇತುದಾರರಾದ ಜಿಲ್ಲಾ ಸಣ್ಣ ಕೈಗಾರಿಕೆಗಳ ಉಪಾಧ್ಯಕ್ಷರಾದ ರೇಖಾಲತಾ ಮಾತನಾಡಿ, ಸ್ವ-ಸಹಾಯ ಗುಂಪಿನ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸ್ವ-ಉದ್ಯೋಗದ ತರಬೇತಿ ಪಡೆದು, ಈ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
    ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ “ಸಂಘವು ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಶೇಕಡಾ 95 ಮಹಿಳಾ ಸಿಬ್ಬಂದಿಯೊಂದಿಗೆ ಸಂಘವನ್ನು ಮುನ್ನಡೆಸುತ್ತಿದ್ದು, ಗುರುಶ್ರೀ ಸ್ವ-ಸಹಾಯ ಸಂಘಗಳ ಮೂಲಕ ಸಮಾಜದ ಇತರ ಮಹಿಳೆಯರು ಮುಂಚೂಣಿಗೆ ಬರಲು ಸಹಾಯಕವಾಗಿದ್ದು, ಸ್ವ-ಉದ್ಯೋಗ ನಡೆಸಲು ಬೇಕಾದ ತರಬೇತಿ ನೀಡುವ ನಿಟ್ಟಿನಲ್ಲಿ ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ತರಬೇತಿಯನ್ನು ಆಯೋಜಿಸಿದ್ದು ಇದರ ಸಂಪೂರ್ಣ ಪ್ರಯೋಜನ ಪಡೆಯಬೇಕೆಂದು ತಿಳಿಸಿದರು.
    ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಮತ್ತಿತ್ತರರು ಉಪಸ್ಥಿತರಿದ್ದರು. ಮಾಡೂರು ಶಾಖೆಯ ಪ್ರಭಾರ ಶಾಖಾಧಿಕಾರಿ ಭವ್ಯ ಸ್ವಾಗತಿಸಿ, ಹಿರಿಯ ಶಾಖಾಧಿಕಾರಿ ಸೌಮ್ಯಲತಾ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Atmashakthi Atmashakthi Vividhoddesha Sahakari Sangha Chitharanjan Bolar Chittaranjan Bolar Self Help Group Swa Udyoga Karyagara
    Previous Articleಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನೀರುಮಾರ್ಗ ಶಾಖೆ ಗ್ರಾಹಕರ ಸಭೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.