ಬಂಟ್ವಾಳ: ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಬಿ.ಸಿ.ರೋಡ್ ಕೈಕಂಬದ ಪೊಳಲಿ ದ್ವಾರದ ಸಮೀಪ ನಿರ್ಮಿಸಿರುವ ಅಕ್ಷಯ ಸೌಧ ಕಟ್ಟಡದ ಉದ್ಘಾಟನಾ ಸಮಾರಂಭ ಜೂನ್ 8ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ.
https://chat.whatsapp.com/EbVKVnWB6rlHT1mWtsgbch
ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅಕ್ಷಯ ಸೌಧವನ್ನು ಉದ್ಘಾಟಿಸಲಿದ್ದಾರೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ . ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಂ.ಕರುಣೇಂದ್ರ ಪೂಜಾರಿ ಕೊಂಬರಬೈಲು ಅಧ್ಯಕ್ಷತೆ ವಹಿಸಲಿದ್ದಾರೆ. ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಭಾಂಗಣ ಉದ್ಘಾಟಿಸಲಿದ್ದಾರೆ. ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಲಾಕರ್ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್, ಕಿಶೋರ್ ಕುಮಾರ್ ಬೊಟ್ಯಾಡಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಟಿ.ಜಿ ರಾಜಾರಾಮ್ ಭಟ್, ಬಂಟ್ವಾಳ ಪುರಸಭೆ ಅಧ್ಯಕ್ಷ ಡಿ.ವಾಸು ಪೂಜಾರಿ, ಬಂಟ್ವಾಳ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್, ದ.ಕ. ಕೃಷಿ ಅಭಿವೃದ್ಧಿ ಸಹಕಾರ ಸಂಘದ ಅಧ್ಯಕ್ಷ ಕೆ.ರವೀಂದ್ರ ಕಂಬಳಿ, ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಅರುಣ್ ರೋಶನ್ ಡಿಸೋಜ, ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕ ಎಚ್.ಎನ್ ರಮೇಶ್, ಸಹಾಯಕ ನಿಬಂಧಕ ಸುಧೀರ್ ಕುಮಾರ್ ಜೆ., ಬಂಟ್ವಾಳ ತಾಲೂಕು ಸಹಕಾರಿ ಅಭಿವೃದ್ಧಿ ಅಧಿಕಾರಿ ಡಾ.ಜ್ಯೋತಿ ಡಿ., ಬಂಟ್ವಾಳ ಪುರಸಭಾ ಸದಸ್ಯರಾದ ಎ.ಗೋವಿಂದ ಪ್ರಭು, ಜಯಂತಿ ವಿ.ಬಂಗೇರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಂಘದ ಉಪಾಧ್ಯಕ್ಷ ಅರಿರಾಜ ಕೆ.ಜೈನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ಕಾಮತ್, ಆಡಳಿತ ಮಂಡಳಿ ನಿರ್ದೇಶಕರಾದ ಬಿ.ಸದಾಶಿವ ಶೆಣೈ, ವಿಠಲ ಪೂಜಾರಿ, ಎ.ಲಕ್ಷ್ಮೀ ವಿ.ಪ್ರಭು, ಹರೀಶ್, ಬಿ.ಜಯ ಕುಂದರ್, ಮುರಳೀಧರ ಭಟ್, ಚಂದ್ರಶೇಖರ ಭಂಡಾರಿ ಬಿ., ದಿವಾಕರ ಶೆಟ್ಟಿ, ಪದ್ಮನಾಭ ಗೌಡ, ಗಣೇಶ್, ಜಯಂತಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬಂಟ್ವಳ ವಲಯ ಮೇಲ್ವಿಚಾರಕ ಕೀರ್ತಿರಾಜ್, ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಸಿಬ್ಬಂದಿ ವರ್ಗ ಹಾಗೂ ಸದಸ್ಯರು ಭಾಗವಹಿಸಲಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com