ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್, ದ.ಕ. ಜಿಲ್ಲಾ ಸಹಕಾರ ಇಲಾಖೆ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ “ಏಕ್ ಪೇಡ್ ಮಾ ಕೇ ನಾಮ್ʼʼ ಕಾರ್ಯಕ್ರಮ ಜೂನ್ 17ರಂದು ಮಂಗಳವಾರ ಬೆಳಗ್ಗೆ 10ಕ್ಕೆ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆಯಲಿದೆ.
https://chat.whatsapp.com/EbVKVnWB6rlHT1mWtsgbch
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದ.ಕ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ. ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ “ಏಕ್ ಪೇಡ್ ಮಾ ಕೇ ನಾಮ್ʼʼ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಡಾ.ಎಸ್ ಆರ್ ಹರೀಶ್ ಆಚಾರ್ಯ ವಿಷಯ ಮಂಡನೆ ಮಾಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಸತೀಶ್ ಕೆ., ಪ್ರವೀಣ್ ಗಿಲ್ಬರ್ಟ್ ಪಿಂಟೊ, ದ.ಕ. ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್ ರಮೇಶ್, ಸಹಕಾರ ಸಂಘಗಳ ಪುತ್ತೂರು ಉಪವಿಭಾಗ ಸಹಾಯಕ ನಿಬಂಧಕ ಎಸ್.ಎನ್ ರಘು, ಮಂಗಳೂರು ವಿಭಾಗ ಅರಣ್ಯ ಸಂರಕ್ಷಣಾಧಿಕಾರಿ(ಪ್ರೊಬೇಶನರಿ) ಹಸ್ತ ಶೆಟ್ಟಿ, ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ರಾಘವೇಂದ್ರ ಎಚ್.ಪಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷ ನೀಲಯ ಎಂ.ಅಗರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ವಿ ಹಿರೇಮಠ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಪ್ರಭಾರ ಸಹಕಾರ ಶಿಕ್ಷಣಾಧಿಕಾರಿ ಶರಣಬಸಪ್ಪ ಕಾಟ್ರಳ್ಳಿ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಅಶೋಕ ಪಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಂಕಿತಾ ಪಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com

