Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ₹3,000ಕ್ಕಿಂತ ಹೆಚ್ಚಿನ ಮೊತ್ತದ ಯುಪಿಐ ಪಾವತಿಗೆ ತೆರಬೇಕಿದೆಯೇ ಶುಲ್ಕ?
    News

    ₹3,000ಕ್ಕಿಂತ ಹೆಚ್ಚಿನ ಮೊತ್ತದ ಯುಪಿಐ ಪಾವತಿಗೆ ತೆರಬೇಕಿದೆಯೇ ಶುಲ್ಕ?

    adminBy adminJune 12, 2025

    ಫೋನ್‌ ಪೇ, ಗೂಗಲ್‌ ಪೇ ಬಳಕೆದಾರರಿಗೆ ತಟ್ಟಲಿದೆಯೇ ಬಿಸಿ…?

    ಇಲ್ಲ ಎನ್ನುತ್ತಿದೆ ಕೇಂದ್ರ ಸರ್ಕಾರ, ಊಹಾಪೋಹ ನಂಬಬೇಡಿ ಎಂದ ಸರ್ಕಾರ 

    ನವದೆಹಲಿ: ಫೋನ್‌ ಪೇ, ಗೂಗಲ್‌ ಪೇ ಸೇರಿ ಯುಪಿಐ ಆಪ್‌ಗಳ ಮೂಲಕ ನಡೆಸುವ 3,000 ರೂ.ಗಳಿಗಿಂತ ಹೆಚ್ಚಿನ ಮೊತ್ತದ ವಹಿವಾಟಿಗೆ ಶುಲ್ಕ ವಿಧಿಸುವ ಸಾಧ್ಯತೆ ಇದೆಯೇ? ಹೌದು ಎನ್ನುತ್ತಿವೆ ಮೂಲಗಳು. ಹೀಗಾದರೆ ಬ್ಯಾಂಕುಗಳು ಮತ್ತು ಪಾವತಿ ಸೇವಾ ಪೂರೈಕೆದಾರರಿಗೆ ಅನುಕೂಲವಾಗಲಿದೆ. ಸಣ್ಣ ವ್ಯಾಪಾರಿಗಳು ಮತ್ತು ಬಳಕೆದಾರರಿಗೆ ತೊಂದರೆಯಾಗದಂತೆ, ಹೆಚ್ಚಿನ ಮೊತ್ತದ ವಹಿವಾಟುಗಳಿಗೆ ಮಾತ್ರ ಶುಲ್ಕ ವಿಧಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ವರದಿಯಾಗಿದೆ.

    https://chat.whatsapp.com/EbVKVnWB6rlHT1mWtsgbch
    ಇದರಿಂದ ಬ್ಯಾಂಕುಗಳು, ಫಿನ್‌ಟೆಕ್ ಸಂಸ್ಥೆಗಳು ಮತ್ತು ಫೋನ್‌ ಪೇ, ಗೂಗಲ್‌ ಪೇನಂತಹ ಸೇವಾ ಪೂರೈಕೆದಾರ ಕಂಪನಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಇವುಗಳಿಗೆ ಆದಾಯ ಗಳಿಸಲು ಸಹಾಯ ಮಾಡಲಿದೆ. ಸಣ್ಣ ವ್ಯಾಪಾರಿಗಳು ಮತ್ತು ದೈನಂದಿನ ಬಳಕೆದಾರರ ಮೇಲೆ ಪರಿಣಾಮ ಬೀರದಂತೆ ಹೆಚ್ಚಿನ ವಹಿವಾಟುಗಳ ಮೇಲೆ ಮಾತ್ರ ಶುಲ್ಕ ವಿಧಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ವರದಿ ಹೇಳಿದೆ.

     


    ಪ್ರಸ್ತುತ, ರೂಪೇ ಡೆಬಿಟ್ ಕಾರ್ಡ್‌ಗಳು ಮತ್ತು ಯುಪಿಐ ಪಾವತಿಗಳಿಗೆ ಈ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಇದೀಗ ಮತ್ತೆ ಶುಲ್ಕದ ವಿಚಾರ ಮುನ್ನೆಲೆಗೆ ಬಂದಿದ್ದು ದೊಡ್ಡ ಮೊತ್ತದ ಯುಪಿಐ ವಹಿವಾಟುಗಳಿಗೆ ವ್ಯಾಪಾರಿ ಶುಲ್ಕ ವಿಧಿಸುವ ಸಾಧ್ಯತೆ ಇದೆ. ಆದರೆ ಸಣ್ಣ ಮೊತ್ತದ ವಹಿವಾಟುಗಳಿಗೆ ವಿನಾಯಿತಿ ಮುಂದುವರಿಯಬಹುದು. ಎಂಡಿಆರ್ ತೆಗೆದುಹಾಕಿದ್ದರಿಂದ ಯುಪಿಐ ಬಳಕೆಯು ಹೆಚ್ಚಾಗಿದ್ದೇನೋ ಸರಿ. ಆದರೆ, ಇದರಿಂದ ನಮಗೆ ನಷ್ಟವಾಯಿತು ಎಂಬುದು ಬ್ಯಾಂಕುಗಳು, ಫಿನ್‌ಟೆಕ್ ಸಂಸ್ಥೆಗಳು ಮತ್ತು ಪಾವತಿ ಸೇವಾ ಪೂರೈಕೆದಾರರ ವಾದ.

    ಆದರೆ ಕೇಂದ್ರ ಸರ್ಕಾರ ಈ ಸುದ್ದಿಯನ್ನು ನಿರಾಕರಿಸಿವೆ. ಯುಪಿಐ ಪಾವತಿಗೆ ಶುಲ್ಕ ವಿಧಿಸುವ ಯಾವುದೇ ಪ್ರಸ್ತಾವನೆ ಇಲ್ಲ, ಅವೆಲ್ಲವೂ ಆಧಾರರಹಿತ ಎಂದು ಹೇಳಿದೆ. ಈ ಊಹಾಪೋಹಗಳನ್ನು ಜನ ನಂಬಬಾರದು ಎಂದೂ ಕೇಂದ್ರ ಸರ್ಕಾರ ಹೇಳಿದೆ

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Debit Card Google pay GST MDR Phone Pay Rupay UPI
    Previous Articleಜೂನ್‌ 17ರಂದು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ “ಏಕ್‌ ಪೇಡ್‌ ಮಾ ಕೇ ನಾಮ್‌ʼʼ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಜೂನ್‌ 15ರಂದು ಉಳ್ಳಾಲದಲ್ಲಿ ವೈದ್ಯಕೀಯ ಶಿಬಿರ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.