Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಜೂನ್‌ 15ರಂದು ಉಳ್ಳಾಲದಲ್ಲಿ ವೈದ್ಯಕೀಯ ಶಿಬಿರ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಜೂನ್‌ 15ರಂದು ಉಳ್ಳಾಲದಲ್ಲಿ ವೈದ್ಯಕೀಯ ಶಿಬಿರ

    adminBy adminJune 13, 2025

    ಉಳ್ಳಾಲ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಳ್ಳಾಲ ಶಾಖೆಯ ದಶಮಾನೋತ್ಸವ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಪಡೀಲ್, ಮಂಗಳೂರು, ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ ಮತ್ತು ಮಹಿಳಾ ವಿಭಾಗ ಬಂಡಿಕೊಟ್ಯ, ಉಳ್ಳಾಲ ಮತ್ತು ವಿದ್ಯಾರಣ್ಯ ಯುವಕ ವೃಂದ ಮತ್ತು ವಿದ್ಯಾರಣ್ಯ ಕಲಾವೃಂದ ಉಳ್ಳಾಲ, ಶಿವಶಕ್ತಿ ಯುವಕ ಮಂಡಲ ಉಳ್ಳಾಲ ಇವರ ಜಂಟಿ ಸಹಯೋಗದೊಂದಿಗೆ ಉಚಿತ ವೈದ್ಯಕೀಯ, ಕಣ್ಣಿನ ತಪಾಸಣೆ ಮತ್ತು ದಂತ ತಪಾಸಣಾ ಶಿಬಿರ ಜೂನ್‌ 15ರ ಭಾನುವಾರ ಬೆಳಗ್ಗೆ 9.30ರಿಂದ 12.30ರವರೆಗೆ ಉಳ್ಳಾಲ ನಗರಸಭೆ ಆವರಣದ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ.

    https://chat.whatsapp.com/EbVKVnWB6rlHT1mWtsgbch
    ವೈದ್ಯಕೀಯ ಶಿಬಿರದಲ್ಲಿ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಯನ್ಸಸ್ ಮಂಗಳೂರು, ಇವರ ನುರಿತ ವೈದ್ಯರ ತಂಡ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಮಧುಮೇಹ, ಬಿ.ಪಿ. ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆ, ಅನಾರೋಗ್ಯಕರ ಹಲ್ಲುಗಳನ್ನು ಕೀಳುವುದು, ಹುಳುಕು ಹಲ್ಲುಗಳಿಗೆ ಸಿಮೆಂಟ್ ತುಂಬಿಸುವುದು, ಹಲ್ಲುಗಳನ್ನು ಸ್ವಚ್ಚಗೊಳಿಸುವುದು, ಉಚಿತ ಔಷಧ ವಿತರಣೆ, ಇನ್ನಿತರ ವೈದ್ಯಕೀಯ ಸೇವೆಗಳು, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡ್‌ ನೀಡುವುದು ಹಾಗೂ ಸಂಘದ ವತಿಯಿಂದ ಉಚಿತ ಕನ್ನಡಕ ವಿತರಣೆ ಮಾಡಲಾಗುವುದು. ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಸದುಪಯೋಗ ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Atmashakthi Atmashakthi Vividhoddesha Sahakari Sangha Brahmashree narayana guru swamy Prakashana And Charitable Trust Shivashakthi Yuvaka Mandala Ullala Nagarasabhe Vidyranya Yuvaka Vrunda
    Previous Article₹3,000ಕ್ಕಿಂತ ಹೆಚ್ಚಿನ ಮೊತ್ತದ ಯುಪಿಐ ಪಾವತಿಗೆ ತೆರಬೇಕಿದೆಯೇ ಶುಲ್ಕ?
    Next Article ಕೋಟ ವ್ಯವಸಾಯಿಕ ಸಹಕಾರಿ ಸಂಘದಿಂದ ಆರೋಗ್ಯ ಕೇಂದ್ರಕ್ಕೆ ಇಸಿಜಿ ಯಂತ್ರ ಹಸ್ತಾಂತರ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.