ಕೋಟ: ಒಂದು ಊರಿನ ಸರ್ಕಾರಿ ಶಾಲೆ, ಆಸ್ಪತ್ರೆಗಳಿಗೆ ಆಯಾ ಊರಿನ ಸಹಕಾರಿ ಸಂಘಗಳು, ರೋಟರಿಯಂಥ ಸಂಸ್ಥೆಗಳು ಸೇವೆ ನೀಡಿದಲ್ಲಿ ಜನರಿಗೆ ಉಪಕಾರವಾಗುತ್ತದೆ ಎಂದು ರೋಟರಿ ಕ್ಲಬ್ ಅಧ್ಯಕ್ಷ ಜಿ.ತಿಮ್ಮ ಪೂಜಾರಿ ಹೇಳಿದರು.
ಕೋಟ ವ್ಯವಸಾಯಿಕ ಸಹಕಾರಿ ಸಂಘ ಮತ್ತು ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಜಂಟಿಯಾಗಿ ಕೋಟ ಸಮುದಾಯ ಆರೋಗ್ಯ ಕೇಂದ್ರಕ್ಕೆ ಇಸಿಜಿ ಯಂತ್ರ ಹಸ್ತಾಂತರ ಮಾಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.
https://chat.whatsapp.com/EbVKVnWB6rlHT1mWtsgbch
ಕೋಟ ವ್ಯವಸಾಯಿಕ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಡಾ.ಕೃಷ್ಣ ಕಾಂಚನ್ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಾಧವ ಪೈ ಅವರಿಗೆ ಇಸಿಜಿ ಯಂತ್ರ ಹಸ್ತಾಂತರಿಸಿದರು. ಸಹಕಾರಿ ಸಂಘದ ಉಪಾಧ್ಯಕ್ಷ ನಾಗರಾಜ ಹಂದೆ, ಸಿಇಒ ಶರತ್ ಕುಮಾರ್ ಶೆಟ್ಟಿ, ವೈದ್ಯ ಡಾ.ವಿಶ್ವನಾಥ್, ಸದಸ್ಯರಾದ ಅಚ್ಯುತ ಪೂಜಾರಿ, ಕುಸುಮಾ, ಬಸವ ಪೂಜಾರಿ ರಾಜೇಶ್ ಮೊದಲಾದವರು ಉಪಸ್ಥಿತರಿದ್ದರು. ರೋಠರಿ ಕ್ಲಬ್ ಮಾಜಿ ಅಧ್ಯಕ್ಷ ದೇವಪ್ಪ ಪಟಗಾರ ಕಾರ್ಯಕ್ರಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com





