ಮಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ವಿಶೇಷ ಕಾರ್ಯಪಡೆ ಘಟಕದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ರಾಜ್ಯದ ಗೃಹ ಸಚಿವ ಡಾ.ಜಿ.ಪರಮೇಶ್ವರ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಗೆ ಆಗಮಿಸಿದ್ದು , ಈ ಸಂದರ್ಭ ಎಸ್‌ಸಿಡಿಸಿಸಿ ಬ್ಯಾಂಕಿನ ಕಾರ್ಯಸಾಧನೆಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
https://chat.whatsapp.com/EbVKVnWB6rlHT1mWtsgbch
ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರಕುಮಾರ್ ಇಬ್ಬರು ಸಚಿವರನ್ನು ಸ್ವಾಗತಿಸಿ, ಬ್ಯಾಂಕಿನ ಪ್ರಗತಿಯ ಕುರಿತು ಮಾಹಿತಿ ನೀಡಿದರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಸುಸಜ್ಜಿತ ಕಟ್ಟಡವನ್ನು ಹೊಂದಿದ್ದು , ಆಧುನಿಕ ತಂತ್ರಜ್ಞಾನದ ಮೂಲಕ 113 ಶಾಖೆಗಳಲ್ಲಿ ಗ್ರಾಹಕರಿಗೆ ಉತ್ಕೃಷ್ಟ ಸೇವೆ ನೀಡುತ್ತಿದೆ. ಬ್ಯಾಂಕಿನ ಎಲ್ಲಾ ಶಾಖೆಗಳು ಕೋರ್ ಬ್ಯಾಂಕಿಂಗ್ ಸೌಲಭ್ಯದೊಂದಿಗೆ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಉತ್ತಮ ಸೇವೆ ನೀಡುತ್ತಿದೆ. ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವ ಸ್ವಸಹಾಯ ಸಂಘಗಳ ಕಾರ್ಯನಿರ್ವಹಣೆಯಲ್ಲೂ ಬ್ಯಾಂಕ್ ಸಮರ್ಪಕವಾಗಿ ಕಾರ್ಯನಿರ್ವಹಿಸಿ ಸುಮಾರು 40000ಕ್ಕೂ ಹೆಚ್ಚು ನವೋದಯ ಸ್ವಸಹಾಯ ಸಂಘಗಳನ್ನು ಸಂಘಟಿಸಲಾಗಿದೆ. ಮಾತ್ರವಲ್ಲ, ಮಂಗಳೂರು ಹಾಗೂ ಉಡುಪಿಯಲ್ಲಿ ಸುಸಜ್ಜಿತ ವಾಹನದಲ್ಲಿ ಮೊಬೈಲ್ ಬ್ಯಾಂಕಿಂಗ್ ಸೇವೆಯನ್ನೂ ಎಸ್‌ಸಿಡಿಸಿಸಿ ಬ್ಯಾಂಕ್ ನೀಡುತ್ತಿದೆ ಎಂದು ಡಾ.ಎಂ.ಎನ್. ರಾಜೇಂದ್ರಕುಮಾರ್ ವಿವರಿಸಿದರು.
ಎಸ್‌ಸಿಡಿಸಿಸಿ ಬ್ಯಾಂಕಿಗೆ ಮೊದಲ ಬಾರಿ ಆಗಮಿಸಿದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರನ್ನು ಹಾಗೂ ಪೊಲೀಸ್ ಮಹಾನಿರೀಕ್ಷಕರಾದ ಡಾ.ಎಂ.ಎ ಸಲೀಂ ಅವರನ್ನು ಬ್ಯಾಂಕ್ ವತಿಯಿಂದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಗೌರವಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ವಿಧಾನಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ ಭಂಡಾರಿ, ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಸದಾಶಿವ ಉಳ್ಳಾಲ್, ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್‌ನ ಟ್ರಸ್ಟಿ ಮೇಘರಾಜ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com





