ಬಂಟ್ವಾಳ: ಸಜೀಪಮೂಡದ ಬೊಳ್ಳಾಯಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 17ನೇ ಶಾಖೆ ಅಳದಂಗಡಿಯಲ್ಲಿ ಜೂನ್ 15ರಂದು ಉದ್ಘಾಟನೆಗೊಳ್ಳಲಿದೆ.
https://chat.whatsapp.com/EbVKVnWB6rlHT1mWtsgbch
ಅಳದಂಗಡಿಯ ಗುರುದೇವ ಸಂಕೀರ್ಣದಲ್ಲಿ ಬೆಳಗ್ಗೆ 10.30ಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಲಿದ್ದಾರೆ. ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭದ್ರತಾ ಕೋಶ ಉದ್ಘಾಟಿಸಲಿದ್ದಾರೆ. ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಅಳದಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ, ಅಳದಂಗಡಿ ಚರ್ಚ್ ಧರ್ಮಗುರು ಫಾದರ್ ಎಲಿಯಾಸ್ ಡಿಸೋಜ, ನೂರುಲ್ ಇಸ್ಲಾಂ ಜುಮಾ ಮಸೀದಿ ಖತೀಬ ಮಹಮ್ಮದ್ ಮುಸ್ತಫಾ ಹಿಮಮಿ, ಶ್ರೀ ಕ್ಲಿನಿಕ್ ಅಳದಂಗಡಿಯ ಡಾ.ಎನ್.ಎಂ ತುಳುಪುಳೆ, ಅಳದಂಗಡಿ ಗುರುದೇವ ಸಂಕೀರ್ಣ ಕಟ್ಟಡದ ಮಾಲೀಕ ಸಂಜೀವ ಪೂಜಾರಿ ಕೊಡಂಗೆ, ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲ, ಪ್ರಗತಿಪರ ಕೃಷಿಕ ಗಂಗಾಧರ್ ಮಿತ್ತಮಾರ್, ಅಳದಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಸುಭಾಷ್ಚಂದ್ರ ರೈ, ಅಳದಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲ್, ಸುಲ್ಕೇರಿಮೊಗ್ರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುಧೀರ್ ಸುವರ್ಣ, ಅಳದಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳ್ಳೆಂಜ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ವಿಠಲ ಬೆಳ್ಚಡ ಚೇಳೂರು, ಆಡಳಿತ ಮಂಡಳಿ ನಿರ್ದೇಶಕರಾದ ಸುಂದರ ಪೂಜಾರಿ ಬೀಡಿನಪಾಲು, ರಮೇಶ್ ಅನ್ನಪಾಡಿ, ಗಿರೀಶ್ ಕುಮಾರ್ ಪೆರ್ವ, ಜಯಶಂಕರ್ ಕಾನ್ಸಾಲೆ, ಕೆ.ಸುಜಾತಾ ಎಂ, ವಾಣಿ ವಸಂತ, ಅರುಣ್ ಕುಮಾರ್ ಎಂ., ಆಶಿಶ್ ಪೂಜಾರಿ, ಚಿದಾನಂದ ಎಂ.ಕಡೇಶ್ವಾಲ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಮತಾ ಜಿ, ಶಾಖಾ ವ್ಯವಸಥಾಪಕಿ ಅರ್ಪಿತಾ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com





