Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪ್ರಣವ ಸೌಹಾರ್ದ ಸಹಕಾರಿ ಸಂಸ್ಥೆ 11ನೇ ವಾರ್ಷಿಕ ಮಹಾಸಭೆ
    News

    ಪ್ರಣವ ಸೌಹಾರ್ದ ಸಹಕಾರಿ ಸಂಸ್ಥೆ 11ನೇ ವಾರ್ಷಿಕ ಮಹಾಸಭೆ

    adminBy adminJune 16, 2025

    ಗ್ರಾಹಕರಿಗಾಗಿ ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆ ನೀಡುವ ನಿಟ್ಟಿನಲ್ಲಿ ಕಾರ್ಯೋನ್ಮುಖ: ಜಿ.ಆರ್‌ ಪ್ರಸಾದ್‌ ಘೋಷಣೆ

    ಮಂಗಳೂರು: ಯೆಯ್ಯಾಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಣವ ಸೌಹಾರ್ದ ಸಹಕಾರಿ ಸಂಸ್ಥೆಯ 11ನೇ ವಾರ್ಷಿಕ ಮಹಾಸಭೆ ಭಾನುವಾರ ಪದವಿನಂಗಡಿಯ ಬೆನಕ ಸಭಾಂಗಣದಲ್ಲಿ ಸಂಸ್ಥೆಯ ಅಧ್ಯಕ್ಷ ಜಿ.ಆರ್‌ ಪ್ರಸಾದ್‌ ಅಧ್ಯಕ್ಷತೆಯಲ್ಲಿ ನಡೆಯಿತು.

    https://chat.whatsapp.com/EbVKVnWB6rlHT1mWtsgbch
    ಸಭೆಯ ಮೊದಲಿಗೆ ಸದಸ್ಯರ ಮಕ್ಕಳಿಂದ ಶಾಸ್ತ್ರೀಯ ನೃತ್ಯ ಜರಗಿತು. ನಂತರ ಸಂಸ್ಥೆಯ ಅಧ್ಯಕ್ಷರಾದ ಜಿ.ಆರ್ ಪ್ರಸಾದ್ ಅವರು ಸಂಸ್ಥೆಯ ಆರ್ಥಿಕ ವರ್ಷದ ಆರ್ಥಿಕ ತಕ್ತೆಯನ್ನು ಮಂಡಿಸಿದರು. ಸಂಸ್ಥೆಗೆ ಕಳೆದ ಆರ್ಥಿಕ ವರ್ಷ ರೂ.66.64 ಲಕ್ಷ ಒಟ್ಟಾರೆ ಲಾಭ ಇದ್ದು ನಿವ್ವಳ ಲಾಭ ರೂ. 52 .75 ಲಕ್ಷವಿದೆ. ಸದಸ್ಯರ ಸಂಖ್ಯೆ 7800 ಇದ್ದು ರೂ. 165 ಲಕ್ಷ ಪಾಲು ಬಂಡವಾಳ ಇದೆ. ರೂ.160 ಲಕ್ಷ ವಿವಿಧ ನಿಧಿಗಳಿದ್ದು ಸದಸ್ಯರಿಗೆ ಈ ವರುಷವೂ ಶೇಕಡಾ 10 ಪ್ರತಿಶತ ಲಾಭಾಂಶ ಹಂಚಲು ನಿರ್ಧರಿಸಲಾಗಿದೆ. ಸಂಸ್ಥೆ ಲೆಕ್ಕಪತ್ರ ಪರಿಶೋಧನೆಯಲ್ಲಿ ಎ ದರ್ಜೆ ಮಾನ್ಯತೆ ಉಳಿಸಿಕೊಂಡಿದೆ ಹಾಗೂ ಸಾಲ ವಸೂಲಾತಿಯಲ್ಲೂ ಉತ್ತಮ ಫಲಿತಾಂಶ ತೋರಿಸುತ್ತಾ ಬಂದಿದೆ ಎಂದು ಹೇಳಿದರು.


    ಕಳೆದ ಆರ್ಥಿಕ ವರ್ಷದಲ್ಲಿ ಖರೀದಿಸಿದ ನಿವೇಶನದಲ್ಲಿ ಈ ವರ್ಷ ಪ್ರಣವ ಸೌಹಾರ್ದ ಸಹಕಾರಿಯು ತನ್ನ ಪ್ರಧಾನ ಕಚೇರಿ ಕಟ್ಟಡ ನಿರ್ಮಿಸುವ ಯೋಜನೆ ಇದ್ದು ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ಸಂಸ್ಥೆ ತನ್ನ ಗ್ರಾಹಕರಿಗಾಗಿ ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆ ನೀಡುವ ಉದ್ದೇಶವಿದ್ದು ಈ ನಿಟ್ಟಿನಲ್ಲಿ ಅದಾಗಲೇ ಕಾರ್ಯೋನ್ಮುಖವಾಗಿದೆ ಎಂದರು.
    ಸಂಸ್ಥೆಯ ಉಪಾಧ್ಯಕ್ಷ ಪ್ರಶಾಂತ್ ಪೈ ಸ್ವಾಗತಿಸಿ, ಸಂಸ್ಥೆ ನಡೆದು ಬಂದ ದಾರಿಯನ್ನು ವಿವರಿಸಿದರು. ನಿರ್ದೇಶಕ ಹಾಗೂ ಪ್ರಣವ ಚಾರಿಟೇಬಲ್ ಟ್ರಸ್ಟ್ ಕೋಶಾಧಿಕಾರಿ ಸೋಮಪ್ಪ ನಾಯಕ್ ಪ್ರಣವ ಸಹಕಾರಿಯ ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಅನಾರೋಗ್ಯ ಪೀಡಿತ ಸದಸ್ಯರಾದ ರಘುವೀರ ಗಟ್ಟಿ , ಗಣೇಶ್ ಭಟ್ ಮತ್ತು ಇತ್ತೀಚೆಗೆ ಮಂಗಳೂರು ಮಂಜನಾಡಿಯಲ್ಲಿ ಮನೆ, ಇಬ್ಬರು ಮಕ್ಕಳನ್ನು ಅಲ್ಲದೆ ತನ್ನ ಎರಡೂ ಕಾಲುಗಳನ್ನು ಕಳೆದುಕೊಂಡ ಪ್ರಸ್ತುತ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಶ್ವಿನಿ ಅವರಿಗೆ ಆರ್ಥಿಕ ಸಹಾಯ ನೀಡಲಾಯಿತು.
    ಲೆಕ್ಕಪರಿಶೋಧಕ ಸಿಎ ಅನಂತಪದ್ಮನಾ ಹಾಗೂ ಆಂತರಿಕ ಲೆಕ್ಕ ಪರಿಶೋಧಕರಾದ ಸಿಎ ಶ್ರಾವಣಿ ಉಪಸ್ಥಿತರಿದ್ದರು. ನಿರ್ದೇಶಕ ವೆಂಕಟೇಶ ವಂದಿಸಿದರು. ಸದಸ್ಯ ಅತಿಥಿ ಪತ್ರಿಕೆಯ ಸಂಪಾದಕ ಬಾಲಕೃಷ್ಣ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕರಾದ ರವೀಂದ್ರನಾಥ್ ಪಿ, ಸುಬ್ರಹ್ಮಣ್ಯ ಭಟ್, ರವಿಶಂಕರ್ ಪಿ.ಎನ್ , ಪದ್ಮರಾಜ್ ಬಲ್ಲಾಳ್, ದಯಾಸಾಗರ ಪೂಂಜಾ , ಭಗವಾನ್ದಾಸ್ ಅಡ್ಯಂತಾಯ , ಡಾ.ಶ್ಯಾಮಪ್ರಸಾದ್ ಶೆಟ್ಟಿ , ಜಗದೀಶ್ ಶೆಟ್ಟಿ ಬಿಜೈ, ಡಾ.ವೆಂಕಟೇಶ್, ಜಯಲಕ್ಷ್ಮಿ ಚಂದ್ರಹಾಸ್ , ಮೀರಾ ಕರ್ಕೇರ , ವೃತಿಪರ ನಿರ್ದೇಶಕರಾದ ಶ್ರೀ ಸತೀಶ್ ಭಟ್ , ಶ್ರೀಮತಿ ಮಮತಾ ರಾವ್, ಕಾರ್ಯೋನ್ಮುಖ ನಿರ್ದೇಶಕರಾದ ಶ್ರೀ ಕೃಷ್ಣ ಕಾಮತ್ , ಮುಖ್ಯ ಕಾರ್ಯನಿರ್ವಹಣಾಧಿಕಾರಿ ( ಪ್ರಭಾರ ) ಶ್ರೀಮತಿ ಮಮತಾ ವೈ ಶೆಟ್ಟಿಗಾರ್ ಮತ್ತು ಸಂಸ್ಥೆಯ ಎಲ್ಲಾ ಸಿಬ್ಬಂದಿ, ಉತ್ತಮ ಸಂಖ್ಯೆಯಲ್ಲಿ ಸದಸ್ಯರು ಹಾಜರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Benaka Sabhangana padavinangady Cooperative Cooperative Department G R Prasad Pranava Souharda Sahakari
    Previous Articleಎಂಸಿಸಿ ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ
    Next Article ಡಾಕ್ಟರ್ಸ್ ಆಂಡ್ ಅಲೈಡ್ ಪ್ರೊಫೆಶನಲ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಸಭೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.