ಮಂಗಳೂರು: ಸುರತ್ಕಲ್ ಪೂರ್ವ ಆರ್ಕೇಡ್‌ನಲ್ಲಿ 2013ರಿಂದ ಕಾರ್ಯಾಚರಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಶಾಖೆಯು ಸುರತ್ಕಲ್ ಮುಖ್ಯ ರಸ್ತೆಯಲ್ಲಿರುವ ವಿಜಯ್ ಮಹಲ್ ಕಾಂಪ್ಲೆಕ್ಸ್‌ನ ಸುಸಜ್ಜಿತ ಹವಾನಿಯಂತ್ರಿತ ಶಾಖೆಗೆ ಸ್ಥಳಾಂತರಗೊಳ್ಳಲಿದೆ. ಜೂನ್ 20ರಂದು ಶುಕ್ರವಾರ ಬೆಳಗ್ಗೆ 10.30ಕ್ಕೆ ಸ್ಥಳಾಂತರ ಶಾಖೆಯನ್ನು ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕ್ಷೇತ್ರದ ಅಧ್ಯಕ್ಷರಾದ ಚಿತ್ತರಂಜನ್ ಕೆ. ಉದ್ಘಾಟಿಸಲಿದ್ದಾರೆ.
https://chat.whatsapp.com/EbVKVnWB6rlHT1mWtsgbch
ಸಹಕಾರ ತತ್ವದ ಮೂಲಕ ಜನಸೇವೆಯ ಸದುದ್ದೇಶದ ಧ್ಯೇಯದೊಂದಿಗೆ ಮಂಗಳೂರಿನ ಬೆಂದೂರ್‌ವೆಲ್‌ನಲ್ಲಿ 30.01.2012ರಲ್ಲಿ ಕೇಂದ್ರದ ಮಾಜಿ ವಿತ್ತ ಸಚಿವರಾದ ಬಿ.ಜನಾರ್ದನ ಪೂಜಾರಿಯವರ ಅಮೃತ ಹಸ್ತದಿಂದ ಉದ್ಘಾಟನೆಗೊಂಡು, ದಶಮಾನೋತ್ಸವ ಸಂದರ್ಭ ಪಡೀಲ್‌ನಲ್ಲಿ ಸ್ವಂತ ಆಡಳಿತ ಹಾಗೂ ಪ್ರಧಾನ ಕಚೇರಿಯನ್ನು ಹೊಂದಿ, ಕಾರ್ಯನಿರ್ವಹಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಉನ್ನತ ಸಾಧನೆಯ ಹಾದಿಯಲ್ಲಿದೆ.
ದಿನಾಂಕ 17.01.2020ರಂದು ಸ್ವಂತ ನಿವೇಶನದಲ್ಲಿ ಸ್ವಂತ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸವೂ ಬಿ.ಜನಾರ್ದನ ಪೂಜಾರಿಯವರಿಂದ ನೆರವೇರಿ, 30.01.2022ರಂದು ಲೋಕಾರ್ಪಣೆಗೊಂಡಿದೆ. ಸಂಘದ ದಶಮಾನೋತ್ಸವದ ಸಂದರ್ಭ ಸುಸಜ್ಜಿತವಾದ ಹವಾನಿಯಂತ್ರಿತ ಸ್ವಂತ ಕಟ್ಟಡ ಹೊಂದಿದ ದಕ್ಷಿಣ ಕನ್ನಡ ಜಿಲ್ಲೆಯ ಏಕಮಾತ್ರ ವಿವಿಧೋದ್ದೇಶ ಸಹಕಾರಿ ಸಂಘ ಎನಿಸಿದೆ. ಅಲ್ಪಾವಧಿಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 33 ಶಾಖೆಗಳು ಆರಂಭವಾಗಿ ನುರಿತ ಸಿಬ್ಬಂದಿ ವರ್ಗದ ಗುಣಮಟ್ಟದ ಸೇವೆಗಾಗಿ ಈಗಾಗಲೇ ರಾಜ್ಯ ಹಾಗೂ ರಾಷ್ಟ್ರಮಟ್ಟದ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.
ಆತ್ಮಶಕ್ತಿ ಸಹಕಾರಿ ಸಂಘವು ಮಹಿಳಾ ಸಬಲೀಕರಣದೊಂದಿಗೆ ಶೇ.95 ಮಹಿಳಾ ಸಿಬ್ಬಂದಿಗಳಿಂದ ಗ್ರಾಹಕರಿಗೆ ಅತ್ಯುತ್ತಮ ಸೇವೆಯೊಂದಿಗೆ ನಿರಂತರವಾಗಿ ಲಾಭ ಗಳಿಸುತ್ತಾ ಮುಂದುವರಿದಿದ್ದು ವಾರ್ಷಿಕ ರೂ. 2,೦೦೦ ಕೋಟಿಗೂ ಮೀರಿ ವ್ಯವಹಾರದೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಮಾತ್ರವಲ್ಲದೇ ಕೊಡಗು, ಚಿಕ್ಕಮಗಳೂರು ಹಾಗೂ ಮೈಸೂರು ಜಿಲ್ಲೆಗಳ ವ್ಯಾಪ್ತಿಗಳಿಗೆ ತನ್ನ ಶಾಖೆಗಳನ್ನು ವಿಸ್ತರಿಸಿ, 50 ಶಾಖೆಗಳನ್ನು ಹೊಂದುವ ಯೋಜನೆಯನ್ನು ಹಮ್ಮಿಕೊಂಡಿದೆ.
ನೂತನ ಶಾಖೆಯ ಉದ್ಘಾಟನಾ ಸಮಾರಂಭದ ಪ್ರಯಕ್ತ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ.10.50 ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂಗೆ ಗರಿಷ್ಠ ಮೌಲ್ಯ ರೂ.8,000ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲ ನೀಡಲಾಗುವುದು. ನಮ್ಮ ಎಲ್ಲಾ ಶಾಖೆಗಳಲ್ಲಿ ಇ-ಮುದ್ರಾಂಕ, ನೆಫ್ಟ್, ಆರ್‌ಟಿಜಿಎಸ್ ಸೇವೆಯು ಲಭ್ಯವಿದ್ದು, ವಿಮಾ ಪಾಲಿಸಿಗಳಾದ ಎಲ್‌ಐಸಿ, ಕೇರ್, ಇಫ್ಕೋಟೋಕಿಯ, ಜನರಲ್ ಇನ್ಸುರೆನ್ಸ್ ಕಂಪನಿ ಮುಂತಾದ ಕಂಪನಿಗಳ ವಿಮಾ ಸೌಲಭ್ಯಗಳೂ ಲಭ್ಯವಿರುತ್ತದೆ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸ೦ಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com



