ಉಳ್ಳಾಲ: ದ.ಕ. ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾಗಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ವತಿಯಿಂದ ಕಿನ್ಯಾ ಗ್ರಾಮದ ಮಿನಾದಿ ಶಾಲೆಯ 110 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಬ್ಯಾಗ್ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.
https://chat.whatsapp.com/EbVKVnWB6rlHT1mWtsgbch
ಕೋಟೆಕಾರು ಬ್ಯಾಂಕ್ ನಿರ್ದೇಶಕಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಸುರೇಖಾ ಚಂದ್ರಹಾಸ್ ಮಾತನಾಡಿ, ಕೋಟೆಕಾರು ವ್ಯವಸಾಯ ಬ್ಯಾಂಕ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಮುತುವರ್ಜಿ ವಹಿಸಿ ಐದು ವರ್ಷಗಳಿಂದ ಸರಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದ್ದಾರೆ. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಬ್ಯಾಂಕ್ ವತಿಯಿಂದ ಕಲಿಯುವ ಸಾಮಗ್ರಿಗಳ ವಿತರಣೆ ಮಾಡಲಾಗಿದೆ. ಅಂಗ್ಲಮಾಧ್ಯಮ ಶಿಕ್ಷಣಕ್ಕೆ ಮಾರು ಹೋಗುತ್ತಿರುವ ಈಗಿನ ಸಂದರ್ಭದಲ್ಲಿ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸುವ ಉದ್ದೇಶದಿಂದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಈ ಸೇವೆ ಒದಗಿಸುತ್ತಿದೆ. ಹೆತ್ತವರು ಮಕ್ಕಳಿಗೆ ಅಸ್ತಿ ಮಾಡದಿದ್ದರೂ ಪರವಾಗಿಲ್ಲ, ಮೌಲ್ಯಾಧಾರಿತ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನೇ ಆಸ್ತಿಯನ್ನಾಗಿಸಿ ಎಂದು ಆಶಯ ವ್ಯಕ್ತಪಡಿಸಿದರು.







ಕಿನ್ಯಾ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸಿರಾಜುದ್ದೀನ್ ಕಿನ್ಯಾ ಮಾತನಾಡಿ, ಮಿನಾದಿ ಶಾಲೆಯ ಅಭಿವೃದ್ಧಿಗೆ ಶಾಸಕರು ಐಡಿಯಾ ಕೇಳಿದ್ದರು. ಎಲ್‌ಕೆಜಿ, ಯುಕೆಜಿಗೆ ಅನುಮತಿ ಕೊಟ್ಟು ಕಳೆದ ವರ್ಷ ಶಿಕ್ಷಣ ಆರಂಭಿಸಿದ್ದಾರೆ. ಗ್ರಾಮದ ಜನರ ಆಲೋಚನೆ ಎಲ್‌ಕೆಜಿಯಿಂದ ಪದವಿ ಶಿಕ್ಷಣದವರೆಗೆ ಒಂದೇ ಕ್ಯಾಂಪಸ್‌ನಲ್ಲಿ ಮಕ್ಕಳು ಕಲಿಯಬೇಕು ಅನ್ನುವುದು. ಅದಕ್ಕಾಗಿ ಮೌಲಾನಾ ಆಝಾದ್ ಕಾಲೇಜಿನ ಯೋಜನೆ ಕಿನ್ಯಾ ಗ್ರಾಮದಲ್ಲಿ ಜಾರಿಗೆ ಬರಲಿದೆ. ಇಲ್ಲಿನ ಮಕ್ಕಳಿಗೆ ಪದವಿವರೆಗೂ ಕಲಿಯುವ ಅವಕಾಶ ಲಭ್ಯವಾಗಲಿದೆ. ಸರಕಾರಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಸಿಗಬೇಕು ಎಂಬ ಉದ್ದೇಶದಿಂದ ಕೋಟೆಕಾರು ಬ್ಯಾಂಕ್ ಎಲ್ಲ ಸವಲತ್ತುಗಳನ್ನು ವಿತರಿಸಿದೆ ಎಂದರು.
ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕಿನ ಉಪಾಧ್ಯಕ್ಷ ಕೆ.ಬಿ.ಅಬುಸಾಲಿ ಕಿನ್ಯಾ ಅಧ್ಯಕ್ಷತೆ ವಹಿಸಿದ್ದರು. ಬ್ಯಾಂಕಿನ ನಿರ್ದೇಶಕರಾದ ಉದಯ ಕುಮಾರ್ ಶೆಟ್ಟಿ, ರಾಘವ ಆರ್.ಉಚ್ಚಿಲ್, ರಘು ಉಚ್ಚಿಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ದನ್ ಉಳ್ಳಾಲ, ಕಿನ್ಯಾ ಗ್ರಾಪಂ ಸದಸ್ಯರಾದ ಸಿರಾಜುದ್ದೀನ್ ಕಿನ್ಯಾ, ಮಸೀದಿ ಆಡಳಿತ ಮಂಡಳಿ ಸದಸ್ಯ ಮೂಸ ಕುಂಞ, ಶಾಲಾ ಮುಖ್ಯೋಪಾಧ್ಯಾಯಿನಿ ಸುಮನಾ ಯು., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಾಫರ್ ಅಹಮ್ಮದ್, ಕಿನ್ಯಾ ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಗಿರಿಜಾ ಮೊದಲಾದವರು ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com

