Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘಕ್ಕೆ 20.37 ಲಕ್ಷ ರೂ. ನಿವ್ವಳ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್: ರವೀಂದ್ರ ಕಂಬಳಿ
    News

    ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘಕ್ಕೆ 20.37 ಲಕ್ಷ ರೂ. ನಿವ್ವಳ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್: ರವೀಂದ್ರ ಕಂಬಳಿ

    adminBy adminJuly 9, 2025

    ಬಂಟ್ವಾಳ: ಬಂಟ್ವಾಳ ತಾಲೂಕು ಕೃಷಿ ಉತ್ಪನ್ನಸಹಕಾರಿ ಮಾರಾಟ ಸಂಘದ 2024-25ನೇ ಸಾಲಿನಲ್ಲಿ 371 ಲಕ್ಷ ರೂ. ವ್ಯವಹಾರ ನಡೆಸಿದ್ದು, 20.37 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಕೆ.ರವೀಂದ್ರ ಕಂಬಳಿ ತಿಳಿಸಿದ್ದಾರೆ.
    ಮಂಗಳವಾರ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಘದ ಸದಸ್ಯರಿಗೆ ಶೇ.12 ಡಿವಿಡೆಂಡ್ ಘೋಷಿಸಿದರು. ಸಂಘದ ಪಾಲು ಬಂಡವಾಳ 11.64 ಲಕ್ಷ ರೂ.ಗೂ ಮೀರಿದ್ದು 2,943 ಲಕ್ಷ ರೂ. ಠೇವಣಿ ಹೊಂದಿದೆ. 3,157 ಲಕ್ಷ ರೂ. ದುಡಿಯುವ ಬಂಡವಾಳವಿದ್ದು, ಯಾವುದೇ ಬ್ಯಾಂಕಿನ ಸಾಲವಿಲ್ಲದೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಸಹಕಾರಿ ಸಂಘದಲ್ಲಿ 2,577 ಲಕ್ಷ ರೂ. ಠೇವಣಿಯನ್ನು ಹೂಡಿದೆ. 536 ಲಕ್ಷ ರೂ. ಹೊರಬಾಕಿ ಸಾಲ ನೀಡಲಾಗಿದೆ ಎಂದು ತಿಳಿಸಿದರು.

    https://chat.whatsapp.com/EbVKVnWB6rlHT1mWtsgbch
    ಸಂಘವು ಪ್ರಸಕ್ತ ಸಾಲಿನ ಲೆಕ್ಕಪರಿಶೋಧನೆ ವರದಿಯಲ್ಲಿ ‘ಎ’ ವರ್ಗ ಪಡೆದಿದೆ. ಬಿ.ಮೂಡ ಗ್ರಾಮದ ಪೊನ್ನೋಡಿಯಲ್ಲಿ ಸ್ವಂತ ನಿವೇಶನದಲ್ಲಿ ಕೇಂದ್ರ ಕಚೇರಿ ಕಾರ್ಯಾಚರಿಸುತ್ತಿದೆ. ಇಲ್ಲಿ ಆರು ಗೋದಾಮುಗಳನ್ನು ಹೊಂದಿದ್ದು ಒಂದು ಗೋದಾಮು ಪಡಿತರ ವಿತರಣೆಗೆ ಉಪಯೋಗಿಸಲಾಗುತ್ತಿದ್ದು, ನಾಲ್ಕು ಗೋದಾಮುಗಳನ್ನು ಬಾಡಿಗೆಗೆ ನೀಡಲಾಗಿದೆ. ಬಿ.ಸಿ.ರೋಡು ಮತ್ತು ತುಂಬೆಯಲ್ಲಿ ಸ್ವಂತ ಕಟ್ಟಡವನ್ನು ಹೊಂದಿದ್ದು, ಇದನ್ನು ಬಾಡಿಗೆಗೆ ನೀಡಲಾಗಿದೆ. ಫರಂಗಿಪೇಟೆ ಶಾಖೆಯಲ್ಲಿ ವಿವಿಧ ಪಡಿತರ ವ್ಯವಸ್ಥೆ, ಸಾಲ ಸೌಲಭ್ಯ ಹಾಗೂ ಇ-ಸ್ಟ್ಯಾಂಪಿಂಗ್ ವ್ಯವಹಾರ ನಡೆಸಲಾಗುತ್ತಿದ್ದು ಈ ಶಾಖೆಯಲ್ಲಿಯೂ ನ್ಯಾಯಬೆಲೆ ಅಂಗಡಿ ಮೂಲಕ ಪಡಿತರ ವಿತರಣಾ ವ್ಯವಸ್ಥೆ ಹೊಂದಿದೆ. ಎಲ್ಲಾ ಶಾಖೆಗಳು ಗಣಕೀಕೃತವಾಗಿದ್ದು, ಸಂಘವು ಸದಸ್ಯರ, ಸಿಬ್ಬಂದಿಗಳ ಸಹಕಾರದಿಂದ ಯಶಸ್ಸಿನತ್ತ ಮುನ್ನಡೆಯುತ್ತಿದೆ ಎಂದು ರವೀಂದ್ರ ಕಂಬಳಿ ಹೇಳಿದರು.


    ಸಂಘದ ಉಪಾಧ್ಯಕ್ಷೆ ಉಪಾಧ್ಯಕ್ಷೆ ಶಶಿಕಲಾ ಉಡುಪ, ನಿರ್ದೇಶಕರಾದ ವೆಂಕಟ್ರಾಯ ಪ್ರಭು, ಬಿ.ಟಿ.ನಾರಾಯಣ ಭಟ್, ಜ್ಞಾನೇಶ್ವರ ಪ್ರಭು, ಪದ್ಮನಾಭ ಕಿದೆಬೆಟ್ಟು, ರಾಯಿ ಸುಂದರ ಭಂಡಾರಿ, ಮನೋರಾಜ್ ಎ.. ಪೂವಪ್ಪ, ರಾಮ ನಾಯ್, ರತ್ನಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಾಣೆಮಂಗಳೂರು ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಯಶಂಕರ ಬಾಸ್ತ್ರಿತ್ತಾಯ ಮಹಾಸಭೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು.ಧರ್ಮಪಾಲ ಭಂಡಾರಿ ಗತವರ್ಷದ ವರದಿ ವಾಚಿಸಿದರು. ನಿರ್ದೇಶಕ ಪೊಳಲಿ ವೆಂಕಟೇಶ್ ನಾವಡ ವಂದಿಸಿದರು.

    ಬಂಟ್ವಾಳ ತಾಲೂಕು ಕೃಷಿ ಉತ್ಪನ್ನಸಹಕಾರಿ ಮಾರಾಟ ಸಂಘದ ಬಂಟ್ವಾಳ ಶಾಖೆಯಲ್ಲಿ ರೈತರ ಅನುಕೂಲಕ್ಕೆ ಕೃಷಿ ಉಪಕರಣ, ಕ್ರಿಮಿನಾಶಕ, ಇನ್ನಿತರ ಸಾಮಗ್ರಿಗಳ ಮಾರಾಟದ ವ್ಯವಸ್ಥೆ ಹೊಂದಿದೆ. ಅಲ್ಲದೆ ಬ್ಯಾಂಕಿಂಗ್ ವ್ಯವಹಾರ, ನ್ಯಾಯಬೆಲೆ ಅಂಗಡಿ ಮೂಲಕ ಜನರಿಗೆ ಪಡಿತರ ವಿತರಣೆ ವ್ಯವಸ್ಥೆಯೂ ಇದೆ.
    ಕೆ.ರವೀಂದ್ರ ಕಂಬಳಿ
    ಅಧ್ಯಕ್ಷರು, ಬಂಟ್ವಾಳ ತಾಲೂಕು ಕೃಷಿ ಉತ್ಪನ್ನಸಹಕಾರಿ ಮಾರಾಟ ಸಂಘ

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Bantwala Thaluku Krushi Utpanna Sahakari Maaraata Sangha Cooperative Dividend Net Profit Raveendra Kambali
    Previous Articleಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಒಂದೇ ಕುಟುಂಬದ ಸದಸ್ಯರು ಸ್ಪರ್ಧಿಸುವಂತಿಲ್ಲ: ಚುನಾವಣಾ ಪ್ರಾಧಿಕಾರ ಮಹತ್ವದ ಆದೇಶ
    Next Article ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ನಿರ್ದೇಶಕ ಕದ್ರಿ ವಿಶ್ವನಾಥ ಜೋಗಿ ನಿಧನ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.