ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೆ.ಸಿ.ರೋಡ್ ಶಾಖೆಯ ದ್ವಿತೀಯ ವಾರ್ಷಿಕೋತ್ಸವ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಸಂಘದ ಕೆ.ಸಿ.ರೋಡ್ ಶಾಖೆಯಲ್ಲಿ ಜರುಗಿತು.
https://chat.whatsapp.com/EbVKVnWB6rlHT1mWtsgbch
ಸಂಘದ ಗ್ರಾಹಕರಾದ ಸಿಸ್ಟರ್ ಐಲಿನ್ ಮಥಾಯಿಸ್, ಕೆ.ಶಿವಪ್ರಸಾದ್ ಆಚಾರ್ಯ ಹಾಗೂ ಅಬ್ಬಾಸ್ ಉಚ್ಚಿಲ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಐಲಿನ್ ಮಥಾಯೀಸ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಗ್ರಾಹಕ ಸ್ನೇಹಿ ಸೇವೆಯೊಂದಿಗೆ ಉತ್ತಮ ಬೆಳವಣಿಗೆ ಸಾಧಿಸಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡುತ್ತಿರುವುದು ಶ್ಲಾಘನೀಯ. ಈ ಭಾಗದಲ್ಲಿ ಉಚಿತ ಆರೋಗ್ಯ ಶಿಬಿರ ಆಯೋಜನೆ ಮಾಡಿದಲ್ಲಿ ಸ್ಥಳಾವಕಾಶ ಮಾಡಿಕೊಡುವುದಾಗಿ ತಿಳಿಸಿದರು.
ಕೆ.ಶಿವಪ್ರಸಾದ್ ಆಚಾರ್ಯ ಮಾತನಾಡಿ “ಕೆ.ಸಿ.ರೋಡ್ ಶಾಖೆಯಲ್ಲಿ ಸಿಬ್ಬಂದಿಯ ಗ್ರಾಹಕ ಸ್ನೇಹಿ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಅಬ್ಬಾಸ್ ಉಚ್ಚಿಲ ಮಾತನಾಡಿ “ಕೆ.ಸಿ. ರೋಡ್ ಶಾಖೆಯು ಎರಡು ವರುಷದಲ್ಲಿ ಈ ಭಾಗದ ಜನರಿಗೆ ತನ್ನ ಕಾರ್ಯವೈಖರಿಯಿಂದ ತುಂಬಾ ಹತ್ತಿರವಾಗಿದೆ. ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಉಚಿತ ಆರೋಗ್ಯ ಶಿಬಿರ ಆಯೋಜನೆ ಮಾಡುವಂತೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರಲ್ಲಿ ಮನವಿ ಮಾಡಿದರು.





ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ “ಸಂಘದ ಬೆಳವಣಿಗೆಗೆ ಕೇವಲ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಮಾತ್ರವಲ್ಲದೆ ಗ್ರಾಹಕರು ಕೂಡ ಕಾರಣೀಭೂತರು. ಈ ನಿಟ್ಟಿನಲ್ಲಿ ಸಂಘದ ಎಲ್ಲಾ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂದರ್ಭದಲ್ಲಿ ಗ್ರಾಹಕ ಸಭೆಯನ್ನು ನಡೆಸಿ, ಗ್ರಾಹಕರ ಸಲಹೆ ಸೂಚನೆಗಳನ್ನು ಪಡೆದುಕೊಂಡು ಕಾರ್ಯರೂಪಕ್ಕೆ ತರಲಾಗುತ್ತಿದೆ. ಸಂಘವು ಪ್ರಸ್ತುತ ೩೩ ಶಾಖೆಗಳೊಂದಿಗೆ ಕಾರ್ಯಾಚರಿಸುತ್ತಿದ್ದು, ಈ ಸಾಲಿನಲ್ಲಿ ಇನ್ನೂ ಎರಡು ನೂತನ ಶಾಖೆಗಳನ್ನು ಆರಂಬಿಸುವುದಾಗಿ ತಿಳಿಸಿದರು. ಸಂಘವು ಪ್ರತಿವರ್ಷದಂತೆ ಈ ವರ್ಷವೂ ಉತ್ತಮ ಲಾಭ ಗಳಿಸಿದ್ದು, ಗ್ರಾಹಕರಿಗೆ ಒಳ್ಳೆಯ ಡಿವಿಡೆಂಡ್ ನೀಡುವುದಾಗಿ ತಿಳಿಸಿದರು. ಮತ್ತು ಶಾಖೆಯ ಕಟ್ಟಡ ಉದ್ಘಾಟನೆ ಸಮಯದಲ್ಲಿ ಮಾಲೀಕರಾದ ಅಬ್ಬಾಸ್ ಉಚ್ಚಿಲರವರ ಪ್ರೋತ್ಸಾಹ ನೆನಪಿಸಿದರು. ಕೆ.ಸಿ. ರೋಡ್ ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಸದಸ್ಯ ಗ್ರಾಹಕರಿಗೆ ಚಿನ್ನಾಭರಣಗಳಿಗೆ ಅಧಿಕ ಮೌಲ್ಯದೊಂದಿಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲಗಳನ್ನು ನೀಡುತ್ತಿದ್ದೇವೆ. ಸಂಸ್ಥೆಯು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ ಜೀವ ವಿಮೆ, ಆರೋಗ್ಯ ವಿಮೆ, ಮತು ವಾಹನ ವಿಮಾ ಸೌಲಭ್ಯಗಳನ್ನು ಗ್ರಾಹಕರಿಗೆ ನೀಡುತ್ತಿದೆ. ಸುಮಾರು ೮೬ಕ್ಕೂ ಮಿಕ್ಕಿ ಉಚಿತ ಆರೋಗ್ಯ ಶಿಬಿರಗಳನ್ನು ಸಂಘವು ಆಯೋಜಿಸಿ ಜನರ ಆರೋಗ್ಯದ ಕಡೆಗೆ ಹೆಚ್ಚಿನ ಕಾಳಜಿ ವಹಿಸುವಂತೆ ಮಾಡುತ್ತಿದೆ ಎಂದು ತಿಳಿಸಿದರು.
ಸಂಘದ ನಿರ್ದೇಶಕರಾದ ಆನಂದ್ ಎಸ್.ಕೊಂಡಾಣ, ಮುಖ್ಯ ಕಾರ್ಯನಿರ್ವಹಣಾದಿಕಾರಿ ಸೌಮ್ಯ ವಿಜಯ್ ಮತ್ತಿತ್ತರರು ಉಪಸ್ಥಿತರಿದ್ದರು. ಸಂಘದ ಕೆ.ಸಿ.ರೋಡ್ ಶಾಖೆಯ ಸಿಬ್ಬಂದಿ ಮೇಘಶ್ರೀ ಪಿ.ಎನ್. ಸ್ವಾಗತಿಸಿ , ವಿದ್ಯಾ ಹರೀಶ್ ವಂದಿಸಿದರು. ಶಾಖಾಧಿಕಾರಿ ಶಿವರಾಮ ಕಾರ್ಯಕ್ರಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com

