Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ ಪ್ರತಿಭಾ ಪುರಸ್ಕಾರ ಸಮಾರಂಭ
    News

    ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ ಪ್ರತಿಭಾ ಪುರಸ್ಕಾರ ಸಮಾರಂಭ

    adminBy adminJuly 24, 2025

    ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ಮೌಲ್ಯದ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆ

    ಉಡುಪಿ: ಇಲ್ಲಿನ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಉಡುಪಿ ಜಿಲ್ಲೆಯ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರ, ಪ್ರತಿಭಾ ಪುರಸ್ಕಾರ, ಸಸಿ ವಿತರಣಾ ಸಮಾರಂಭ ಉಡುಪಿ ಅಜ್ಜರಕಾಡು ಪುರಭವನದಲ್ಲಿ ಇತ್ತೀಚೆಗೆ ಜರಗಿತು.

    https://chat.whatsapp.com/EbVKVnWB6rlHT1mWtsgbch
    ಉಡುಪಿ ತಹಸೀಲ್ದಾರ್ ಪಿ.ಗುರುರಾಜ್ ಕಾರ್ಯಕ್ರಮ ಉದ್ಘಾಟಿಸಿದರು. ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಲಾವಣ್ಯ ಕೆ.ಆರ್ ಮಾತನಾಡಿದರು. ಉಡುಪಿ ನಗರ ಸಭೆ ಪರಿಸರ ಅಭಿಯಂತರ ರವಿಪ್ರಕಾಶ್, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್, ಸೊಸೈಟಿಯ ಉಪಾಧ್ಯಕ್ಷರಾದ ಜಾರ್ಜ್ ಸ್ಯಾಮ್ಯುಯೆಲ್, ನಿರ್ದೇಶಕರಾದ ಪುರುಷೋತ್ತಮ ಪಿ.ಶೆಟ್ಟಿ, ಜಯಾ ಶೆಟ್ಟಿ, ಸದಾಶಿವ ನಾಯ್ಕ್, ಎಲ್.ಉಮಾನಾಥ, ವಿನಯ ಕುಮಾರ್ ಟಿ.ಎ, ಅಬ್ದುಲ್ ರಜಾಕ್ ಉಪಸ್ಥಿತರಿದ್ದರು.

    ಅಂತಾರಾಷ್ಟ್ರೀಯ ಸಹಕಾರ ವರ್ಷ 2025 ಅಂಗವಾಗಿ “ಏಕ್ ಪೇಡ್ ಮಾ ಕೆ ನಾಮ್” ಧ್ಯೇಯವಾಕ್ಯದಡಿ ಗಿಡ ನೆಡುವ ಸಂಕಲ್ಪ, ಹಸಿರು ಪರಿಸರ ನಿರ್ಮಾಣದ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ ಸಹಕಾರ ಇಲಾಖೆ ವತಿಯಿಂದ ವಿದ್ಯಾರ್ಥಿ, ಸಂಘ ಸಂಸ್ಥೆಗಳ ಮೂಲಕ ತಾಯಿ ಹೆಸರಲ್ಲಿ ಮನೆಗೊಂದು ಗಿಡ ನೆಡಲು ಲಕ್ಷ ಗಿಡ ವಿತರಿಸುತ್ತಿದ್ದು, ಗಿಡವನ್ನು ಉತ್ತಮವಾಗಿ ಪೋಷಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡುವುದಾಗಿ ಘೋಷಿಸಲಾಯಿತು.
    ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಸಲಾಯಿತು. ಹಸಿರು ಜಾಗೃತಿ ಅಂಗವಾಗಿ ಭಿತ್ತಿಪತ್ರ ಅನಾವರಣ, ಶಾಲಾ ಮಕ್ಕಳಿಗೆ ಗಿಡ ವಿತರಣೆ ಮಾಡಲಾಯಿತು. ಕನ್ನಡ ಮಾಧ್ಯಮದ ೩೫ ಶಾಲಾ ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ಮೌಲ್ಯದ ನೋಟ್ ಪುಸ್ತಕ, ಶಿಕ್ಷಣ ಪರಿಕರ, ಸಮವಸ್ತ್ರ ವಿತರಿಸಲಾಯಿತು. ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಕೆರೆಯ ನೀರನು ಕೆರೆಗೆ ಚೆಲ್ಲಿ ಎಂಬ ಧ್ಯೇಯದಡಿ ಗಳಿಸಿದ ಲಾಭಾಂಶದಲ್ಲಿ ಸಮಾಜಮುಖಿ ಯೋಜನೆಗಳಿಗೆ ಪ್ರತಿವರ್ಷ 25 ಲಕ್ಷ ರೂ. ವಿನಿಯೋಗಿಸಲಾಗುತ್ತಿದೆ ಎಂದು ಹೇಳಿದರು. ತರಬೇತುದಾರರಾದ ರಾಜೇಂದ್ರ ಭಟ್‌ ವಿಶೇಷ ಉಪನ್ಯಾಸ ನೀಡಿದರು.
    ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಬಿ.ಜಯಕರ ಶೆಟ್ಟಿ ಇಂದ್ರಾಳಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಮಲ್ಪೆ ಶಾಖಾ ವ್ಯವಸ್ಥಾಪಕರಾದ ನವೀನ್ ಕೆ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ.ಶೇರಿಗಾರ್ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    B.Jayakara Shetty Indrali Badagabettu Credit Co Operative Society Ek Ped Maa Ke Naam Prathibha Puraskara Sasi Vitharane
    Previous Articleಕಾರವಾರ ಅರ್ಬನ್ ಸಹಕಾರ ಬ್ಯಾಂಕ್ ಲೈಸೆನ್ಸ್‌ ರದ್ದು!
    Next Article ಸಹಕಾರವೇ ಭವಿಷ್ಯ: ರಾಷ್ಟ್ರೀಯ ಸಹಕಾರಿ ನೀತಿ -2025 ಅನಾವರಣ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.