Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಭಗೀರಥ ಜಿ., ಉಪಾಧ್ಯಕ್ಷರಾಗಿ ಜಗದೀಶ್ಚಂದ್ರ ಡಿ.ಕೆ. ಅವಿರೋಧ ಆಯ್ಕೆ
    News

    ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಭಗೀರಥ ಜಿ., ಉಪಾಧ್ಯಕ್ಷರಾಗಿ ಜಗದೀಶ್ಚಂದ್ರ ಡಿ.ಕೆ. ಅವಿರೋಧ ಆಯ್ಕೆ

    adminBy adminJuly 28, 2025

    ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಭಗೀರಥ ಜಿ. ಮತ್ತು ಉಪಾಧ್ಯಕ್ಷರಾಗಿ ಜಗದೀಶ್ಚಂದ್ರ ಡಿ.ಕೆ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
    ಭಗೀರಥ ಜಿ. ಅವರು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ, ಗುರುವಾಯನಕೆರೆ ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷರಾಗಿ, ಪ್ರಸ್ತುತ ನಿರ್ದೇಶಕರಾಗಿ, ಮೇಲಂತಬೆಟ್ಟು ನಾಗಬ್ರಹ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ, ಕೃಷಿಕ ಸಮಾಜದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಜಗದೀಶ್ಚಂದ್ರ ಡಿ.ಕೆ. ಲಯನ್ಸ್ ಪ್ರಾಂತೀಯ ಅಧ್ಯಕ್ಷರಾಗಿ, ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕೇತ್ರ ಅಭಿವೃದ್ಧಿ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

    https://chat.whatsapp.com/EbVKVnWB6rlHT1mWtsgbch
    ಸಂಘದ ಅಧ್ಯಕ್ಷರಾಗಿದ್ದ ಪದ್ಮನಾಭ ಮಾಣಿಂಜ ಇತ್ತೀಚೆಗೆ ನಿಧನ ಹೊಂದಿದ್ದು, ಅವರಿಂದ ತೆರವುಗೊಂಡಿರುವ ಅಧ್ಯಕ್ಷ ಸ್ಥಾನಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಭಾನುವಾರ ಚುನಾ ವಣೆ ನಡೆಯಿತು. ಬೆಳ್ತಂಗಡಿ ತಾಲೂಕು ಸಹಕಾರ ಸಂಘಗಳ ಸಹಕಾರ ಅಭಿವೃದ್ಧಿ ಅಧಿಕಾರಿ ಬಿ.ವಿ.ಪ್ರತಿಮಾ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಸಂಘದ ನಿರ್ದೇಶಕರಾದ ಸಂಜೀವ ಪೂಜಾರಿ, ತನುಜಾ ಶೇಖರ, ಕೆ.ಪಿ.ದಿವಾಕರ, ಧರ್ಣಪ್ಪ ಪೂಜಾರಿ, ಧರಣೇಂದ್ರ ಕುಮಾರ್, ಚಂದ್ರಶೇಖರ, ಜಯವಿಕ್ರಮ ಪಿ., ಆನಂದ ಪೂಜಾರಿ ಸರ್ವೆದೋಳ, ಡಾ.ರಾಜಾರಾಮ ಕೆ.ಬಿ., ಗಂಗಾಧರ ಮಿತ್ತಮಾರು, ರಕ್ಷಿತ್ ಶಿವರಾಂ, ಚಿದಾನಂದ ಪೂಜಾರಿ ಎಲ್ದಕ್ಕ, ಸೂರಜ್ ಕುಮಾರ್, ವಿಶೇಷಾಧಿಕಾರಿ ಮೋನಪ್ಪ ಪೂಜಾರಿ ಕಂಡತ್ಯಾರು, ಸಿಇಒ ಅಶ್ವತ್ಥ ಕುಮಾರ್ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Bhageeratha G Co Operative ministry Cooperative Jagadeeshchandra D.K Shree Gurudeva Vividhoddesha Sahakara Sangha Beltangady Shree Gurunarayana Swamy Seva Sangha
    Previous Articleಎಂಸಿಸಿ ಬ್ಯಾಂಕ್ “ಐಡಿಯಾ ಸಮ್ಮಿತ್ 2025” ಆಯೋಜನೆ
    Next Article ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ 79 ಲಕ್ಷ ರೂ. ಲಾಭ, ಶೇ.13 ಡಿವಿಡೆಂಡ್ ಘೋಷಣೆ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.