ಮಂಗಳೂರು: ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಂಸಿಸಿ ಬ್ಯಾಂಕ್‌ನ 20ನೇ ಶಾಖೆ ಬೈಂದೂರಿನಲ್ಲಿ ಆಗಸ್ಟ್ 3ರಂದು ಉದ್ಘಾಟನೆಗೊಳ್ಳಲಿದೆ.
https://chat.whatsapp.com/EbVKVnWB6rlHT1mWtsgbch
ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೊ ಇವರ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಬೈಂದೂರಿನ ಹೋಲಿಕ್ರಾಸ್ ಚರ್ಚ್‌ನ ಧರ್ಮಗುರುಗಳಾದ ವಂದನೀಯ ವಿನ್ಸೆಂಟ್ ಕುವೆಲ್ಲೊ ಶಾಖೆಯನ್ನು ಆಶೀರ್ವದಿಸಲಿದ್ದಾರೆ. ಬೈಂದೂರಿನ ಶಾಸಕ ಗುರುರಾಜ್ ಗಂಟಿಹೊಳೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಾಬು ಶೆಟ್ಟಿ, ಬೈಂದೂರು ಸೇಂಟ್ ಥಾಮಸ್ ರೆಸಿಡೆನ್ಸಿಯಲ್ ಸ್ಕೂಲ್‌ನ ಪ್ರಾಂಶುಪಾಲ ವಂದನೀಯ ಫಿಲಿಪ್ ನೆಲಿವಿಲ್ಲ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜು ಪೂಜಾರಿ, ಬೈಂದೂರು ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಸದಾಶಿವ ಡಿ.ಪಡುವರಿ, ಶಿರೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕಾಪ್ಸಿನೂರ್ ಮೊಹಮ್ಮದ್, ನಾಡದೋಣಿ ರಾಜ್ಯ ಸಂಘದ ಅಧ್ಯಕ್ಷ ನಾಗೇಶ್ ಖಾರ್ವಿ, ಬೈಂದೂರಿನ ವಕೀಲರ ಸಂಘದ ಅಧ್ಯಕ್ಷ ಮೋಬಿ ಪಿ.ಸಿ. ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಎಂಸಿಸಿ ಬ್ಯಾಂಕಿನ ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವ, ನಿರ್ದೇಶಕರಾದ ಆಂಡ್ರ್ಯೂ ಡಿಸೋಜ, ಡಾ.ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಜೆ.ಪಿ.ರೊಡ್ರಿಗಸ್, ಡೇವಿಡ್ ಡಿಸೋಜ, ಎಲ್ರಾಯ್ ಕಿರಣ್ ಕ್ರಾಸ್ಟೊ, ಹೆರಾಲ್ಡ್ ಮೊಂತೇರೊ, ರೋಶನ್ ಡಿಸೋಜ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಸಿ.ಜಿ.ಪಿಂಟೊ, ಸುಶಾಂತ್ ಸಲ್ದಾನ್ಹಾ, ಐರಿನ್ ರೆಬೆಲ್ಲೊ, ಡಾ.ಫ್ರೀಡಾ ಡಿಸೋಜ, ಆಲ್ವಿನ್ ಮೊಂತೇರೊ, ಫೆಲಿಕ್ಸ್ ಡಿಕ್ರೂಜ್, ಶರ್ಮಿಳಾ ಮಿನೇಜಸ್, ಬ್ಯಾಂಕಿನ ಮಹಾಪ್ರಬಂಧಕರಾದ ಸುನಿಲ್ ಮಿನೇಜಸ್, ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ.





ಎಂಸಿಸಿ ಬ್ಯಾಂಕ್‌ನ ವಿವಿಧ ಕಾರ್ಯಕ್ರಮಗಳು:
ಆಗಸ್ಟ್ 9ರಂದು ಬೆಳ್ಮಣ್‌ನಲ್ಲಿ ಎಂಸಿಸಿ ಬ್ಯಾಂಕ್‌ನ 9ನೇ ಎಟಿಎಂ, 10ರಂದು ಸುರತ್ಕಲ್ ನಲ್ಲಿ 10ನೇ ಎಟಿಎಂ, 17ರಂದು ಕುಲಶೇಖರ ಶಾಖೆ ಸ್ವಂತ ಕಟ್ಟಡಕ್ಕೆ ಸ್ಥಳಾಂತರ ಮತ್ತು 11ನೇ ಎಟಿಎಂ ಉದ್ಘಾಟನೆಗೊಳ್ಳಲಿದೆ. ಸೆಪ್ಟೆಂಬರ್ 14ರಂದು ಕಿನ್ನಿಗೋಳಿಯಲ್ಲಿ 12ನೇ ಎಟಿಎಂ, 27ರಂದು ಉಡುಪಿ ಶಾಖೆಯಲ್ಲಿ 13ನೇ ಎಟಿಎಂ, ಅಕ್ಟೋಬರ್ 5ರಂದು ಸಂತೆಕಟ್ಟೆ ಬ್ರಾಂಚ್ ಉದ್ಘಾಟನೆ ಜೊತೆಗೆ 14ನೇ ಎಟಿಎಂ ಉದ್ಘಾಟನೆಗೊಳ್ಳಲಿದೆ ಎಂದು ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ತಿಳಿಸಿದ್ದಾರೆ.

