ಎಂಸಿಸಿ ಬ್ಯಾಂಕ್ ಬೈಂದೂರು ಶಾಖೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಧರ್ಮಗುರು ವಂದನೀಯ ವಿನ್ಸೆಂಟ್ ಕುವೆಲ್ಲೋ ಅಭಿಪ್ರಾಯ
ಬೈಂದೂರು: ಎಂಸಿಸಿ ಬ್ಯಾಂಕ್ ಜನರಲ್ಲಿ ಜಾತಿ, ಧರ್ಮ, ಭೇದ ನೋಡದೆ ತಮ್ಮ ಗ್ರಾಹಕರಿಗೆ ವಿಶೇಷ ಆದ್ಯತೆ ನೀಡುತ್ತಿದ್ದು ಸಮಾಜಮುಖಿ ಕೆಲಸಗಳಿಂದ ಗುರುತಿಸಿಕೊಂಡಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರ ನಂಬಿಕೆ, ಪ್ರೀತಿ, ವಿಶ್ವಾಸ ಗಳಿಸಿ ಆದರ್ಶ ಬ್ಯಾಂಕ್ ಆಗಿ ಗುರುತಿಸಿಕೊಂಡಿದೆ ಎಂದು ಬೈಂದೂರು ಹೋಲಿಕ್ರಾಸ್ ಚರ್ಚ್‌ನ ಧರ್ಮಗುರು ವಂದನೀಯ ವಿನ್ಸೆಂಟ್ ಕುವೆಲ್ಲೋ ಹೇಳಿದರು.
ಬೈಂದೂರಿನಲ್ಲಿ ಭಾನುವಾರ ಎಂಸಿಸಿ ಬ್ಯಾಂಕಿನ ನೂತನ ೨೦ನೇ ಶಾಖೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

https://chat.whatsapp.com/EbVKVnWB6rlHT1mWtsgbch
ಎಂಸಿಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸಿ ಮಾತನಾಡಿ, 113 ವರ್ಷಗಳ ಇತಿಹಾಸ ಹೊಂದಿರುವ ಎಂಸಿಸಿ ಬ್ಯಾಂಕ್ ಗ್ರಾಮೀಣ ಪ್ರದೇಶಗಳಲ್ಲಿ ತನ್ನ ಶಾಖೆಗಳನ್ನು ಆರಂಭಿಸುವ ಮೂಲಕ ಜನರ ಬಳಿಗೆ ಹೋಗಿ ಸೇವೆ ಮಾಡುತ್ತಿದೆ. ಕೇವಲ ಲಾಭದ ದೃಷ್ಟಿಗಿಂತ ಮುಖ್ಯವಾಗಿ ಸೌಹಾರ್ದ, ಸಾಮರಸ್ಯ ಜೀವನದ ತತ್ವಗಳನ್ನು ಅಳವಡಿಸಿಕೊಂಡು ಸೇವೆಗೆ ಹೆಚ್ಚು ಮಹತ್ವ ಕೊಡುವುದರ ಮೂಲಕ ಜನರ ಸ್ವಾವಲಂಬಿ ಬದುಕಿಗೆ ಸಹಕಾರ ನೀಡುತ್ತಿದೆ ಎಂದು ಹೇಳಿದರು.
ಯಾವುದೇ ಜಾತಿ, ರಾಜಕೀಯ ಇಲ್ಲದೆ ಅಭಿವೃದ್ಧಿ ಹಾಗೂ ಸ್ವಾವಲಂಬನೆಗಾಗಿ ಬ್ಯಾಂಕಿನ ಮೂಲಕ ಸಹಾಯ, ಸಹಕಾರ ನೀಡಲಾಗುತ್ತಿದೆ. ನಿರಖ ಠೇವಣಿ, ನಗದು ಪತ್ರ, ಪಿಗ್ಮಿ, ಠೇವಣಿ ಮೊದಲಾದವುಗಳಿಂದ ಸದಸ್ಯರು ಉಳಿತಾಯದ ಹಣವನ್ನು ಜಮಾ ಮಾಡಬಹುದು. ಈ ಬ್ಯಾಂಕ್‌ಗೆ ರಿಸರ್ವ್ ಬ್ಯಾಂಕಿನ ಶಾಸನಾತ್ಮಕ ನಿಯಂತ್ರಣವಿರುವುದರಿಂದ ಸದಸ್ಯರು ತಮ್ಮ ಉಳಿತಾಯದ ಹಣದ ಬಗ್ಗೆ ಯಾವುದೇ ಆತಂಕಪಡಬೇಕಾಗಿಲ್ಲ ಎಂದರು.


ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ಭದ್ರತಾ ಕೊಠಡಿ ಉದ್ಘಾಟಿಸಿದರು. ಸೈಂಟ್ ಥೋಮಸ್ ವಸತಿ ಶಾಲಾ ಪ್ರಾಂಶುಪಾಲ ಫಿಲಿಪ್ ನೆಲಿವಿಲ್ಲ ಶುಭ ಹಾರೈಸಿದರು.
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಜಾಹ್ನವಿ, ಗೌತಮಿ, ಜೀವಿತಾ, ಗೋಪಾಲ ಭಂಡಾರಿ, ನಾಗಶ್ರೀ, ರಶ್ಮಿತಾ ಇವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ವಿವಿಧ ಕ್ಷೇತ್ರದ ಸಾಧಕರನ್ನು ಗೌರವಿಸಲಾಯಿತು. ಕಟ್ಟಡದ ಮಾಲೀಕ ನಾಕಟ್ಟೆ ಜಗನ್ನಾಥ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು.







ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ, ಬೈಂದೂರು ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಸದಾಶಿವ ಪಡುವರಿ, ಶಿರೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕಾಪ್ಶೀನೂರ್ ಮೊಹಮ್ಮದ್, ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟದ ಅಧ್ಯಕ್ಷ ನಾಗೆಶ ಖಾರ್ವಿ ಉಪ್ಪುಂದ, ಬೈಂದೂರು ವಕೀಲರ ಸಂಘದ ಅಧ್ಯಕ್ಷ ಮೋಬಿ ಪಿ.ಸಿ., ಎಂಸಿಸಿ ಬ್ಯಾಂಕ್ ಉಪಾಧ್ಯಕ್ಷ ಜೆರಾಲ್ಡ್ ಜ್ಯೂಡ್ ಡಿಸೋಜ, ಜನರಲ್ ಮ್ಯಾನೇಜರ್ ಸುನೀಲ್ ಮಿನೇಜಸ್, ನಿರ್ದೇಶಕರಾದ ಅನಿಲ್ ಪತ್ರಾವೊ, ಆ್ಯಂಡ್ರ್ಯೂ ಡಿಸೋಜ, ಡಾ.ಜೆರಾಲ್ಡ್ ಪಿಂಟೊ, ಡೇವಿಡ್ ಡಿಸೋಜ, ರೋಶನ್ ಡಿಸೋಜ, ಜೆ.ಪಿ.ರೊಡ್ರಿಗಸ್, ಹೆರಾಲ್ಡ್ ಜಿ.ಮೊಂತೇರೊ, ಐರಿನ್ ರೆಬೆಲ್ಲೊ, ಡಾ.ಫ್ರೀಡಾ ಡಿಸೋಜ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ವೃತ್ತಿಪರ ನಿರ್ದೇಶಕರಾದ ಸಿ.ಜಿ.ಪಿಂಟೊ, ಸುಶಾಂತ್ ಸಲ್ಡಾನ್ಹಾ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಫೆಲಿಕ್ಸ್ ಡಿಕ್ರೂಜ್, ಅಲ್ವಿನ್ ಮೊಂತೇರೊ, ಶರ್ಮಿಳಾ ಮಿನೇಜಸ್ ಮೊದಲಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಬ್ಯಾಂಕ್ ನಿರ್ದೇಶಕ ಎಲ್ರಾಯ್ ಕೆ.ಕ್ರಾಸ್ಟೋ ಸ್ವಾಗತಿಸಿ, ಹಿರಿಯ ವ್ಯವಸ್ಥಾಪಕ ಸಂದೀಪ್ ಕೋಡ್ರೆಸ್ ವಂದಿಸಿದರು. ಸ್ಟೀವನ್ ಕೊಲೊಸ್ ಕಾರ್ಯಕ್ರಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com








