Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ವಾರ್ಷಿಕ ಸಾಮಾನ್ಯ ಸಭೆ
    News

    ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ವಾರ್ಷಿಕ ಸಾಮಾನ್ಯ ಸಭೆ

    adminBy adminAugust 5, 2025

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ನ ವಾರ್ಷಿಕ ಸಾಮಾನ್ಯ ಸಭೆ ಸೋಮವಾರ ಎಸ್‌ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.
    ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ. ಎನ್ ರಾಜೇಂದ್ರ ಕುಮಾರ್ ಸಭೆಯಲ್ಲಿ ಮಾರ್ಗದರ್ಶನ ನೀಡಿದರು. ಜಿಲ್ಲಾ ಸಹಕಾರಿ ಯೂನಿಯನ್‌ನ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿದ ಅವರು, ಮುಂದೆಯೂ ಹೆಚ್ಚಿನ ರೀತಿಯಲ್ಲಿ ಯೂನಿಯನ್ ಮೂಲಕ ಎಲ್ಲಾ ಸಹಕಾರಿ ಸಂಘಗಳಿಗೆ ಗುಣಮಟ್ಟದ ತರಬೇತಿ ಶಿಕ್ಷಣ ಒದಗಿಸಿ ಸಂಘಗಳ ಆಡಳಿತ ವ್ಯವಸ್ಥೆ ಸುಧಾರಿಸಲು ಸಲಹೆ ನೀಡಿದರು.

    https://chat.whatsapp.com/EbVKVnWB6rlHT1mWtsgbch
    ಅಧ್ಯಕ್ಷತೆ ವಹಿಸಿದ ಸಹಕಾರಿ ಯೂನಿಯನ್‌ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಯೂನಿಯನ್‌ನ ವಾರ್ಷಿಕ ವರದಿ ಮಂಡಿಸಿ ಮಾತನಾಡಿ ಈ ವರ್ಷ ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ ಆಗಿರುವುದರಿಂದ ಯೂನಿಯನ್ ಮುಖಾಂತರ ಉತ್ತಮ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು, ಇದರಲ್ಲಿ ಎಲ್ಲಾ ಸಹಕಾರಿ ಸಂಘಗಳ ಪ್ರತಿನಿಧಿಗಳು ಭಾಗವಹಿಸಿ ಪ್ರಯೋಜನೆ ಪಡೆಯಬೇಕು ಎಂದು ತಿಳಿಸಿದರು. 2024-25ನೇ ಸಾಲಿನಲ್ಲಿ 7.33 ಲಕ್ಷ ರೂ. ಲಾಭಾಂಶ ಬಂದಿದೆ. ಈ ವರ್ಷ ಯೂನಿಯನ್ನಿನ ಬೈಲಾ ತಿದ್ದುಪಡಿ ಮಾಡಲು ಒಪ್ಪಿದ್ದರಿಂದ ಮುಂದಿನ ಸಾಮಾನ್ಯ ಸಭೆಯಲ್ಲಿ ಸದಸ್ಯ ಸಂಘಗಳಿಗೆ ಡಿವಿಡೆಂಡ್ ನೀಡಲಾಗುವುದು ಎಂದು ತಿಳಿಸಿದರು.
    ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರು ಮತ್ತು ಯೂನಿಯನ್ನಿನ ನಿರ್ದೇಶಕರಾದ ವಿನಯಕುಮಾರ್ ಸೂರಿಂಜೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ನ ಉಪಾಧ್ಯಕ್ಷರಾದ ನಿಲಯ ಎಂ ಅಗರಿ ಹಾಗೂ ಯೂನಿಯನ್ನಿನ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು. ಸಹಕಾರಿ ಯೂನಿಯನ್‌ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಸ್.ವಿ.ಹಿರೇಮಠ ಸ್ವಾಗತಿಸಿ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Co Operative ministry Cooperative Neelaya M Agari Shashikumar Rai balyottu South Canara District Co Operative Union
    Previous Articleಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್‌ ಸೊಸೈಟಿಗೆ 10.42 ಕೋಟಿ ರೂ. ಲಾಭ, ಶೇ.25 ಡಿವಿಡೆಂಡ್ ಘೋಷಣೆ
    Next Article ಕರ್ನಾಟಕದಲ್ಲಿ 125 ಕೃಷಿ ಪತ್ತಿನ ಸಹಕಾರ ಸಂಘಗಳು ದಿವಾಳಿ: ಲೋಕಸಭೆಯಲ್ಲಿ ಸಚಿವ ಅಮಿತ್ ಷಾ ಮಾಹಿತಿ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.