Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಮಾಜ ಸೇವಾ ಸಹಕಾರಿ ಸಂಘ ಬಂಟ್ವಾಳ ಪ್ರಾಯೋಜಕತ್ವದಲ್ಲಿ ನಾಳೆ ‘ಡಾ.ಅಮ್ಮೆಂಬಳ ಬಾಳಪ್ಪ ರಸ್ತೆʼ ನಾಮಕರಣದ ಫಲಕ ಅನಾವರಣ
    News

    ಸಮಾಜ ಸೇವಾ ಸಹಕಾರಿ ಸಂಘ ಬಂಟ್ವಾಳ ಪ್ರಾಯೋಜಕತ್ವದಲ್ಲಿ ನಾಳೆ ‘ಡಾ.ಅಮ್ಮೆಂಬಳ ಬಾಳಪ್ಪ ರಸ್ತೆʼ ನಾಮಕರಣದ ಫಲಕ ಅನಾವರಣ

    adminBy adminAugust 9, 2025

    ಮಂಗಳೂರು: ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಪ್ರಾಯೋಜಕತ್ವದಲ್ಲಿ ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃಸಂಘ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಸಹಭಾಗಿತ್ವದಲ್ಲಿ ಮಂಗಳೂರಿನ ಕುದ್ಮುಲ್‌ ರಂಗರಾವ್ ಪುರಭವನದ ಮುಂಭಾಗದ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ತೆರಳುವ ರಸ್ತೆಗೆ ಸ್ವಾತಂತ್ರ್ಯ ಹೋರಾಟಗಾರ ಡಾ.ಅಮ್ಮೆಂಬಳ ಬಾಳಪ್ಪ ರಸ್ತೆ ನಾಮಕರಣದ ಫಲಕ ಅನಾವರಣ ಮತ್ತು ಅಭಿನಂದನಾ ಸಮಾರಂಭ ಆ.10ರಂದು ನಡೆಯಲಿದೆ.

    https://chat.whatsapp.com/EbVKVnWB6rlHT1mWtsgbch
    ಬೆಳಗ್ಗೆ 9.30ಕ್ಕೆ ಸ್ಪೀಕರ್ ಯು.ಟಿ. ಖಾದ‌ರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್ ನಾಮಫಲಕ ಅನಾವರಣ ಮಾಡುವರು. ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃಸಂಘದ ಕೋರಿಕೆಯಂತೆ ರಾಜ್ಯ ಸರಕಾರ ಮಂಗಳೂರು ಪುರಭವನದ ಮುಂಭಾಗದ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ತೆರಳುವ ರಸ್ತೆಗೆ ಸ್ವಾತಂತ್ರ್ಯ ಹೋರಾಟಗಾರ ಡಾ.ಅಮ್ಮೆಂಬಳ ಬಾಳಪ್ಪ ರಸ್ತೆ ಎಂದು ನಾಮಕರಣ ಮಾಡಿ ಆದೇಶಿಸಿದೆ ಎಂದು ಮಾತೃಸಂಘದ ಪ್ರಕಟಣೆ ತಿಳಿಸಿದೆ.

    ಬೆಳಗ್ಗೆ 10.30ಕ್ಕೆ ಪೊಲೀಸ್‌ ಲೇನ್ ನಾಸಿಕ್ ಬಿ.ಎಚ್. ಬಂಗೇರ ಸಭಾಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಸಾನಿಧ್ಯ ವಹಿಸುವರು. ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಕಿಶೋರ್‌ಕುಮಾ‌ರ್ ಪುತ್ತೂರು, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಮಂಗಳೂರು ನಗರ ಪೊಲೀಸ್‌ ಆಯುಕ್ತ ಸುಧೀರ್‌ಕುಮಾರ್ ರೆಡ್ಡಿ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮೊದಲಾದವರು ಭಾಗವಹಿಸುವರು. ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃಸಂಘದ ಉಪಾಧ್ಯಕ್ಷ ನಾರಾಯಣ ಸಿ.ಪೆರ್ನೆ, ಪ್ರಧಾನ ಕಾರ್ಯದರ್ಶಿ ಕುಶಾಲಪ್ಪ ಕುಲಾಲ್, ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಕುಲಾಲ್, ಶ್ರೀದೇವಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಸದಾಶಿವ ಕುಲಾಲ್, ಶ್ರೀ ವೀರನಾರಾಯಣ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಸುಂದರ ಕುಲಾಲ್, ಪ್ರದೀಪ್ ಅತ್ತಾವರ ಪಾಲ್ಗೊಳ್ಳುವರು. ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್, ಮಾಜಿ ಮೇಯರ್ ದಿವಾಕರ ಪಾಂಡೇಶ್ವರ ಅವರನ್ನು ಅಭಿನಂದಿಸಲಾಗುವುದು. ಬೆಳಗ್ಗೆ 10ರಿಂದ ಮಂಗಳೂರು ಸನಾತನ ನಾಟ್ಯಾಲಯದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

     

    Ammembala Baalappa Da.Ka Jilla Mulyara Yaane Kulaalara Matru Sangha Dr.Ammembala Baalappa Road Kudmul Rangarao Townhall Mangalore Mayur Ullal Suresh Kulal
    Previous Articleಆಗಸ್ಟ್‌ 24ರಂದು ಶ್ರೀ ರಾಮಕೃಷ್ಣ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯಿಂದ ದಿ.ಕೆ.ಬಿ ಜಯಪಾಲ ಶೆಟ್ಟಿ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಸಮಾರಂಭ
    Next Article ದಿವ್ಯಜ್ಯೋತಿ ವಿವಿಧೋದ್ದೇಶ ಸಹಕಾರ ಸಂಘದ ಆಶ್ರಯದಲ್ಲಿಉಚಿತ ವೈದ್ಯಕೀಯ ಶಿಬಿರ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.