Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಹಳೆಯಂಗಡಿ ಪ್ರಿಯದರ್ಶಿನಿ ಕೋ-ಆಪರೇಟಿವ್‌ ಸೊಸೈಟಿ ಶೇ.8 ಡಿವಿಡೆಂಡ್ ವಿತರಣೆ
    News

    ಹಳೆಯಂಗಡಿ ಪ್ರಿಯದರ್ಶಿನಿ ಕೋ-ಆಪರೇಟಿವ್‌ ಸೊಸೈಟಿ ಶೇ.8 ಡಿವಿಡೆಂಡ್ ವಿತರಣೆ

    adminBy adminAugust 10, 2025

    ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಘೋಷಣೆ, ಸಾಧಕರಿಗೆ ಸನ್ಮಾನ

    ಮೂಲ್ಕಿ: ಪ್ರತಿಷ್ಠಿತ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಹಳೆಯಂಗಡಿ ಇದರ 2024 -25ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆಯು ಶನಿವಾರ ನಡೆಯಿತು.

    https://chat.whatsapp.com/EbVKVnWB6rlHT1mWtsgbch
    ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎಚ್.ವಸಂತ್ ಬೆರ್ನಾಡ್ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘದ ಅಭಿವೃದ್ಧಿಗೆ ಗ್ರಾಹಕರು, ಸದಸ್ಯರು ಹಾಗೂ ನಿರ್ದೇಶಕರ ಸಹಕಾರ ಕಾರಣವಾಗಿದ್ದು, ಲಾಭಾಂಶದಲ್ಲಿ ಶೇ.8 ಡಿವಿಡೆಂಡ್ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಶಾಖೆಯ ಅಭಿವೃದ್ಧಿಗೆ ಮತ್ತಷ್ಟು ಸಹಕಾರ ಅಗತ್ಯ ಎಂದರು.


    ಮುಖ್ಯ ಅತಿಥಿಗಳಾಗಿ ಸೊಸೈಟಿಯ ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಪಂಜ, ನಿರ್ದೇಶಕರಾದ ಡಾ|ಗಣೇಶ್ ಅಮೀನ್ ಸಂಕಮಾರ್, ಧನಂಜಯ ಮಟ್ಟು, ಗೌತಮ್ ಜೈನ್, ಶರತ್ ಶೆಟ್ಟಿ ಪಂಚವಟಿ, ಉಮಾನಾಥ್ ಜೆ.ಶೆಟ್ಟಿಗಾರ್, ಜೈ ಕೃಷ್ಣ ಕೋಟ್ಯಾನ್, ಗಣೇಶ್ ಪ್ರಸಾದ್ ದೇವಾಡಿಗ, ಧನರಾಜ್ ಕೋಟ್ಯಾನ್, ಮಿರ್ಜಾ ಅಹ್ಮದ್, ಶೆರಿಲ್ ಆಯೋನ ಐಮನ್, ಹರೀಶ್ ಎನ್.ಪುತ್ರನ್, ನವೀನ್ ಸಾಲ್ಯಾನ್ ಪಂಜ, ಸಂದೀಪ್, ವಿಜಯಕುಮಾರ್ ಸನಿಲ್, ತನುಜಾ ಶೆಟ್ಟಿ ಉಪಸ್ಥಿತರಿದ್ದರು.


    2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು ಹಾಗೂ ಹಾಗೂ ರಾಜ್ಯ ಹಿಂದುಳಿದ ಆಯೋಗದ ಸದಸ್ಯರಾಗಿ ನೇಮಕಗೊಂಡಿರುವ ಪ್ರತಿಭಾ ಕುಳಾಯಿ, ಅಂತಾರಾಷ್ಟ್ರೀಯ ಅಥ್ಲೆಟಿಕ್ ಚಾಂಪಿಯನ್ ಶಿಪ್ ಪ್ರಶಸ್ತಿ ಪಡೆದ ಸುಷ್ಮಾ ತಾರಾನಾಥ್, ಗೌರವ ಡಾಕ್ಟರೇಟ್ ಪದವಿ ಪಡೆದ ಡಾ|ಶ್ರುತಿ ಅವರನ್ನು ಗೌರವಿಸಲಾಯಿತು. ಸೊಸೈಟಿಯ ಸಾಧನೆಗೆ ಕಾರಣಕರ್ತರಾದ ಮಹಿಳಾ ಸ್ವಸಹಾಯ ಗುಂಪುಗಳನ್ನು ಅಭಿನಂದಿಸಲಾಯಿತು.
    ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಸ್ವಾಗತಿಸಿದರು. ಕಿನ್ನಿಗೋಳಿ ಶಾಖಾ ಪ್ರಬಂಧಕ ಮೋಹನದಾಸ್ ಮತ್ತು ಹಳೆಯಂಗಡಿ ಶಾಖೆಯ ಪ್ರಜ್ಞಶ್ರೀ ಅವರು ಪ್ರತಿಭಾನ್ವಿತ ವಿದ್ಯಾರ್ಥಿಗಳ ಗೌರವ ಸಲ್ಲಿಕೆ ಕಾರ್ಯಕ್ರಮ ಹಾಗೂ ಮೂಡುಬಿದಿರೆ ಶಾಖಾ ಪ್ರಬಂಧಕ ಅಭಿಷ್ಟಾ ಜೈನ್ ಸಾಧನೆಗೈದ ಸದಸ್ಯರ ಅಭಿನಂದನಾ ಕಾರ್ಯಕ್ರಮ ನಡೆಸಿಕೊಟ್ಟರು. ಪಡುಬಿದ್ರೆ ಶಾಖಾ ಪ್ರಬಂಧಕರಾದ ಅಂಜಲಿ ಉಳ್ಳಾಲ ಎಸ್. ಅವರು ಉತ್ತಮ ಸ್ವಸಹಾಯ ಗುಂಪುಗಳ ಗೌರವ ಕಾರ್ಯಕ್ರಮ ನಡೆಸಿದರು. ಸಾಲ ವಿಭಾಗದ ಪ್ರಬಂಧಕರಾದ ಅಕ್ಷತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಲೆಕ್ಕಿಗರಾದ ಲೋಲಾಕ್ಷಿ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com•

    Co Operative ministry Cooperative Cooperative Department Dividend Prathibha Kulayi Priyadarshini Co Operative Society Haleyangadi Vasantha Bernad
    Previous Articleಎಂ.ಸಿ.ಸಿ.ಬ್ಯಾoಕಿನ 9ನೇ ಎಟಿಎಂ ಬೆಳ್ಮಣ್ ಶಾಖೆಯಲ್ಲಿ ಉದ್ಘಾಟನೆ
    Next Article ಭಾರತವನ್ನು ಸ್ವಾವಲಂಬಿಯಾಗಿಸಲು ಸುವರ್ಣಾವಕಾಶ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.