Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಥಮ ಪ್ರಶಸ್ತಿ
    News

    ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಥಮ ಪ್ರಶಸ್ತಿ

    adminBy adminAugust 12, 2025

    ಮಂಗಳೂರು: ಸಹಕಾರಿ ರಂಗದಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್)ಗೆ ಕರ್ನಾಟಕ ರಾಜ್ಯ ಸಹಕಾರಿ ಅಪಕ್ಸ್ ಬ್ಯಾಂಕ್‌ನ ಪ್ರಥಮ ಪ್ರಶಸ್ತಿ ಲಭಿಸಿದೆ.

    https://chat.whatsapp.com/EbVKVnWB6rlHT1mWtsgbch
    ಅಪೆಕ್ಸ್ ಬ್ಯಾಂಕ್ ರಾಜ್ಯದ ಅತ್ಯುತ್ತಮ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ ಪ್ರಶಸ್ತಿ ನೀಡುತ್ತಿದೆ. ಸಮಾಜಮುಖಿ ಸೇವೆಗಳೊಂದಿಗೆ ಗ್ರಾಹಕರಿಗೆ ಸಂತೃಪ್ತ ಸೇವೆ ನೀಡುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ 2023-24ನೇ ಸಾಲಿನಲ್ಲಿ ತೋರಿದ ಸರ್ವಾಂಗೀಣ ಪ್ರಗತಿಯೊಂದಿಗೆ ಲೆಕ್ಕಪರಿಶೋಧನೆಯಲ್ಲಿ ‘ಎ’ ವರ್ಗ ಪಡೆದು ಪ್ರಥಮ ಪ್ರಶಸ್ತಿಗೆ ಆಯ್ಕೆಯಾಗಿದೆ. ಬ್ಯಾಂಕ್ ವರದಿ ವರ್ಷದಲ್ಲಿ ನೀಡಿದ ಎಲ್ಲಾ ಕೃಷಿ ಸಾಲಗಳು ಶೇಕಡಾ ೧೦೦ಯಾಗಿದ್ದು ಇಂತಹ ಸಾಧನೆಯನ್ನು ಬ್ಯಾಂಕ್ 30 ವರ್ಷಗಳಿಂದ ನಿರಂತರವಾಗಿ ಮಾಡಿರುವುದು ರಾಷ್ಟ್ರೀಯ ದಾಖಲೆ ಎಂದು ಬ್ಯಾಂಕಿನ ಪ್ರಕಟಣೆ ತಿಳಿಸಿದೆ.

    23 ಬಾರಿ ಅಪೆಕ್ಸ್‌ ಬ್ಯಾಂಕ್ ಪ್ರಶಸ್ತಿ
    ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ 113 ಶಾಖೆಗಳ ಮೂಲಕ ಉತ್ಕೃಷ್ಟ ಬ್ಯಾಂಕಿಂಗ್ ಸೇವೆ ನೀಡುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್‌ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ನಾಯಕತ್ವದಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದೆ. ಅಭಿವೃದ್ಧಿಯ ಪಥದಲ್ಲಿರುವ ಬ್ಯಾಂಕ್ ಅಪೆಕ್ಸ್ ಬ್ಯಾಂಕ್‌ನ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಎಸ್‌ಸಿಡಿಸಿಸಿ ಬ್ಯಾಂಕ್ 23ನೇ ಬಾರಿ ತನ್ನದಾಗಿಸಿಕೊಂಡಿದೆ. ಆ.13ರಂದು ಬೆಂಗಳೂರಿನಲ್ಲಿ ನಡೆಯುವ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್‌ ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Apex Bank Award Cooperative Dr.M.N.Rajendra Kumar SCDCC Bank
    Previous Articleಸಹಕಾರ ಸಚಿವ ಕೆ.ಎನ್‌ ರಾಜಣ್ಣ ರಾಜೀನಾಮೆ!
    Next Article ಶ್ರೀರಸ್ತು ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸಾಮಾನ್ಯ ಸಭೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.