Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಶೇ.8 ಡಿವಿಡೆಂಡ್‌
    News

    ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಶೇ.8 ಡಿವಿಡೆಂಡ್‌

    adminBy adminAugust 12, 2025

    ವಾರ್ಷಿಕ ಮಹಾಸಭೆಯಲ್ಲಿ ಘೋಷಣೆ
    ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ

    ಮಂಗಳೂರು; ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಕಾವೂರು ಇದರ 2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಕೋಡಿಕಲ್ ಎಸ್‌ಎನ್‌ಡಿಪಿ ಸಂಘದ ಸಭಾಂಗಣದಲ್ಲಿ ಭಾನುವಾರ ನಡೆಯಿತು.
    ಸಹಕಾರಿಯ ಅಧ್ಯಕ್ಷರಾದ ಚಂದ್ರಶೇಖರ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಹಕಾರಿಯ ಸದಸ್ಯರಾದ ಕೋಡಿಕಲ್ ಎಸ್.ಎನ್.ಡಿ.ಪಿ. ಸಂಘದ ಅಧ್ಯಕ್ಷ ಉಮ್ಮಪ್ಪ ಪೂಜಾರಿ ಪಿ., ಪದ್ಮನಾಭ ಕಾರ್ನಾಡ್, ಪ್ರಮೀಳಾ ಈಶ್ವರ್, ಶಾಲಿನಿ, ಸೀತಾರಾಮ, ಕೃಷ್ಣ ಎನ್. ಪೂಜಾರಿ, ರಮೇಶ್ ಹಾಗೂ ಆಡಳಿತ ಮಂಡಳಿ ಸದಸ್ಯರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

    https://chat.whatsapp.com/EbVKVnWB6rlHT1mWtsgbch
    ನಿರ್ದೇಶಕರಾದ ಪುರುಷೋತ್ತಮ್ ಎನ್ ಪೂಜಾರಿ ಸ್ವಾಗತಿಸಿದರು. ಮುಖ್ಯಕಾರ್ಯನಿರ್ವಾಹಕರಾದ ರಚನಾ 2024-25ನೇ ಸಾಲಿನ ವರದಿ, ಲೆಕ್ಕಪತ್ರಗಳು ಹಾಗೂ ನಿವ್ವಳ ಲಾಭದ ವಿಂಗಡಣೆಯ ಕುರಿತು ವಿಷಯ ಮಂಡಿಸಿದರು. ಸಹಕಾರಿಯ ಸದಸ್ಯರಿಗೆ ಶೇ.8 ಡಿವಿಡೆಂಡ್‌ ಘೋಷಣೆ ಮಾಡಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸೊಸೈಟಿಯ ಅಧ್ಯಕ್ಷ ಚಂದ್ರಶೇಖರ್ ಕುಮಾರ್ ಮಾತನಾಡಿ ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಸಾಧನೆಯ ಹಿಂದೆ ಸದಸ್ಯರ ವಿಶ್ವಾಸ, ಪ್ರೋತ್ಸಾಹ ಮತ್ತು ನಿರಂತರ ಸಹಕಾರವಿದೆ. ನಮ್ಮ ಸಹಕಾರಿ ಇನ್ನಷ್ಟು ಪ್ರಗತಿ ಹೊಂದಿ ಅಭಿವೃದ್ಧಿ ಸಾಧಿಸಲು ಎಲ್ಲಾ ಸದಸ್ಯರ ಸಕ್ರಿಯ ಬೆಂಬಲ ಅಗತ್ಯ ಎಂದು ಹೇಳಿದರು.


    ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಎಂಟು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಿ ಸನ್ಮಾನಿಸಲಾಯಿತು. ಸಹಕಾರಿಯ ಲೆಕ್ಕ ಪರಿಶೋಧಕರಾದ ಸಿಎ ಶ್ರವಣ್ ಕುಮಾರ್, ನಿರ್ದೇಶಕರಾದ ಸದಾಶಿವ ಪೂಜಾರಿ, ಹೇಮಚಂದ್ರ ಹೆಚ್ , ಪುರುಷೋತ್ತಮ್ ಪೂಜಾರಿ , ದಿವಾಕರ್ , ಸದಾಶಿವ, ಕಿಶೋರ್ ಸುವರ್ಣ , ಪೂರ್ಣಿಮಾ ಕೆ ನಾಯ್ಕ್, ಬೋಳೂರು ಧನ್ಯಲತಾ , ಭವ್ಯ ಹಾಗೂ ವೃತ್ತಿಪರ ನಿರ್ದೇಶಕರಾದ ಜಿ.ಚಂದ್ರಶೇಖರ್ ಉಪಸ್ಥಿತರಿದ್ದರು. ಉಪಾಧ್ಯಕ್ಷರಾದ ಸಚ್ಚಿದಾನಂದ ಪೂಜಾರಿ ಧನ್ಯವಾದವನ್ನಿತ್ತರು. ಕಾವೂರು ಶಾಖಾ ವ್ಯವಸ್ಥಾಪಕಿ ದಿವ್ಯಾ ಆರ್ ಕಾರ್ಯಕ್ರಮ ನಿರ್ವಹಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Chandrashekar Kumar Dividend Shree Gurushakthi Souharda Cooperative Society Kavoor SNDP Kodical Souharda Sahakari Spandana
    Previous Articleಶ್ರೀರಸ್ತು ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸಾಮಾನ್ಯ ಸಭೆ
    Next Article ದಕ್ಷಿಣ ಕನ್ನಡ ಸೌಹಾರ್ದ ಸಹಕಾರಿಯ ನಾಲ್ಕನೇ ಮಹಾಸಭೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.