ಪುತ್ತೂರು: ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸುಳ್ಯಪದವು ಶಾಖೆಯ ನೂತನ ಕಚೇರಿ ಪ್ರಕೃತಿ ಸಹಕಾರ ಸೌಧ ಕಟ್ಟಡದ ಉದ್ಘಾಟನಾ ಸಮಾರಂಭ ಆಗಸ್ಟ್ 21ರಂದು ನಡೆಯಲಿದೆ.
https://chat.whatsapp.com/EbVKVnWB6rlHT1mWtsgbch
ಬೆಳಗ್ಗೆ 10 ಗಂಟೆಗೆ ಪ್ರಕೃತಿ ಸಹಕಾರ ಸೌಧ ಕಟ್ಟಡವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಉದ್ಘಾಟಿಸಲಿದ್ದಾರೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಆಡಳಿತ ಕಚೇರಿ ಉದ್ಘಾಟಿಸಲಿದ್ದಾರೆ. ಭದ್ರತಾ ಕೊಠಡಿಯನ್ನು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ನ್ಯಾಯಬೆಲೆ ಅಂಗಡಿಯನ್ನು ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ರಸಗೊಬ್ಬರ ಗೋದಾಮನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಸಭಾ ಕಾರ್ಯಕ್ರಮವನ್ನು ಮಾಜಿ ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ.
ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅಧ್ಯಕ್ಷತೆ ವಹಿಸಲಿದ್ದು ಅತಿಥಿಗಳಾಗಿ ದ.ಕ. ಜಿಲ್ಲಾಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್.ಬಿ ಜಯರಾಮ ರೈ, ಸಹಕಾರಿ ಸಂಘಗಳ ಸಹಾಯಕ ನಿಬಂಧಕ ರಘು ಎಸ್.ಎಂ., ಬಡಗನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಲತಾ ದೇವಕಜೆ, ಪ್ರಗತಿಪರ ಕೃಷಿಕ ರಾಮ ಭಟ್ ಬೀರಮೂಲೆ, ಅಕ್ರಮ ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು ಮತ್ತಿತರರು ಗೌರವ ಉಪಸ್ಥಿತರಿರಲಿದ್ದಾರೆ ಎಂದು ಅಧ್ಯಕ್ಷ ಪ್ರಕಾಶ್ಚಂದ್ರ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com





