Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರ ಸಂಘಗಳಲ್ಲಿ 4,500 ಕೋಟಿ ರೂ. ಠೇವಣಿ ಇರುವುದು ಜನರಿಗೆ ಇರುವ ವಿಶ್ವಾಸಾರ್ಹತೆಗೆ ಸಾಕ್ಷಿ
    News

    ಸಹಕಾರ ಸಂಘಗಳಲ್ಲಿ 4,500 ಕೋಟಿ ರೂ. ಠೇವಣಿ ಇರುವುದು ಜನರಿಗೆ ಇರುವ ವಿಶ್ವಾಸಾರ್ಹತೆಗೆ ಸಾಕ್ಷಿ

    adminBy adminAugust 20, 2025

    ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಹೇಳಿಕೆ

    ಉಡುಪಿ: ಜಿಲ್ಲೆಯಲ್ಲಿನ 750ಕ್ಕೂ ಅಧಿಕ ಸಹಕಾರ ಸಂಘಗಳು ಜಿಲ್ಲಾ ಸಹಕಾರಿ ಯೂನಿಯನ್‌ನಲ್ಲಿ ನೋಂದಣಿಯಾಗಿದ್ದು, ಈ ಪೈಕಿ 21 ಸಹಕಾರಿ ಸಂಘಗಳನ್ನು ಮಹಿಳೆಯರೇ ಮುನ್ನಡೆಸುತ್ತಿದ್ದಾರೆ. ಸಹಕಾರ ಸಂಘಗಳಲ್ಲಿ ಜನ 4,500 ಕೋಟಿ ರೂ. ಠೇವಣಿ ಇರಿಸಿರುವುದು ಸಹಕಾರ ಸಂಘಗಳ ಬಗ್ಗೆ ಜನ ಇಟ್ಟಿರುವ ವಿಶ್ವಾಸಾರ್ಹತೆಗೆ ಸಾಕ್ಷಿ ಎಂದು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.

    https://chat.whatsapp.com/EbVKVnWB6rlHT1mWtsgbch
    ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆಗಳ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಆಡಳಿತ ನಿರ್ವಹಣೆ ಕುರಿತ ಜಿಲ್ಲಾಮಟ್ಟದ ವಿಶೇಷ ತರಬೇತಿ ಕಾರ್ಯಾಗಾರದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
    ರಾಜಕೀಯ ರಹಿತವಾದ ಸಹಕಾರಿ ಕ್ಷೇತ್ರದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ದೇಶದಲ್ಲಿ ಶೇ.40ರಷ್ಟು ಜನ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯದಲ್ಲಿ 45,500 ಸಹಕಾರಿ ಸಂಘಗಳಿವೆ. ಸಹಕಾರಿ ಕ್ಷೇತ್ರ ಬೃಹದಾಕಾರವಾಗಿ ಬೆಳೆದಿದ್ದು, ಕೇಂದ್ರದಲ್ಲಿ ಸಹಕಾರಿ ಸಚಿವಾಲಯ ಸ್ಥಾಪನೆಯಾದ ಬಳಿಕ ಈ ವಲಯ ಶಕ್ತಿಯುತವಾಗಿ ಬೆಳೆಯುತ್ತಿದೆ. ಮುಂದಿನ ದಿನಗಳಲ್ಲಿ ಗುಜರಾತ್‌ನಲ್ಲಿ ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯವೂ ಪ್ರಾರಂಭವಾಗಲಿದ್ದು, ಆಸಕ್ತರು ಹೆಚ್ಚಿನ ಅಧ್ಯಯನ ಕೈಗೊಳ್ಳಬಹುದಾಗಿದೆ ಎಂದು ಹೇಳಿದರು.


    ಉಡುಪಿ ನಗರಸಭಾ ಉಪಾಧ್ಯಕ್ಷರಾದ ರಜನಿ ಹೆಬ್ಬಾರ್ ಕಾರ್ಯ್ರಕಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಲಯನ್ಸ್ ಗವರ್ನರ್ ಸಪ್ನಾ ಸುರೇಶ್, ಪ್ರಾಧ್ಯಾಪಕ ಸಂತೋಷ್ ಶೆಟ್ಟಿ, ಸಹಕಾರ ಯೂನಿಯನ್ ನಿರ್ದೇಶಕ ಸುಧೀರ್ ವೈ ಉಪಸ್ಥಿತರಿದ್ದರು. ಅನುಷಾ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    B.Jayakara Shetty Indrali Cooperative Department Cooperative Registrar Karnataka Rajya Sahakara Mahamandala Rajani Hebbar Udupi District Co Operative Union
    Previous Articleಸಹಕಾರ ಮಂಡಳಿಯಲ್ಲಿ ಮಹಿಳಾ ಮೀಸಲಾತಿ
    Next Article ವಿಧಾನ ಪರಿಷತ್‌ನಲ್ಲಿ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ಮಸೂದೆ ತಿರಸ್ಕೃತ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.