Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 1.67 ಕೋಟಿ ರೂ. ಲಾಭ
    News

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 1.67 ಕೋಟಿ ರೂ. ಲಾಭ

    adminBy adminAugust 21, 2025

    2024-25ನೇ ಸಾಲಿನಲ್ಲಿ 412.92 ಕೋಟಿ ರೂ. ವಾರ್ಷಿಕ ವ್ಯವಹಾರ: ಅಧ್ಯಕ್ಷ ತಾರಾನಾಥ ಕಾಯರ್ಗ ಮಾಹಿತಿ

    ಪುತ್ತೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2024-25ನೇ ಸಾಲಿನಲ್ಲಿ 412.92 ಕೋಟಿ ರೂ. ವಾರ್ಷಿಕ ವ್ಯವಹಾರ ನಡೆಸಿದ್ದು, ರೂ. 1.67 ಕೋಟಿ ಲಾಭ ಗಳಿಸಿದೆ. ಸಂಘವು ಸತತ 23ನೇ ಬಾರಿ ಎ ತರಗತಿ ಆಡಿಟ್ ವರ್ಗೀಕರಣದೊಂದಿಗೆ ಶೇಕಡಾ 99.25% ಸಾಲ ವಸೂಲಾತಿ ಮಾಡಿದೆ. ಸತತ 13 ವರ್ಷಗಳಿಂದ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿಗೆ ಭಾಜನವಾಗಿದೆ ಎಂದು ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ ತಿಳಿಸಿದ್ದಾರೆ.

    https://chat.whatsapp.com/EbVKVnWB6rlHT1mWtsgbch
    ಸಂಘದಲ್ಲಿ 3525 ಸದಸ್ಯರಿದ್ದು, ರೂ.5.72 ಕೋಟಿ ಪಾಲು ಬಂಡವಾಳ ಮತ್ತು ರೂ. 40.34 ಕೋಟಿ ಠೇವಣಿ ಸಂಗ್ರಹಿಸಲಾಗಿದೆ. ವರದಿ ವರ್ಷದಲ್ಲಿ ಅಲ್ಪಾವಧಿ, ಮಧ್ಯಮಾವಧಿ, ದೀರ್ಘಾವಧಿ ಕೃಷಿ ಸಾಲ, ಕೃಷಿಯೇತರ ಸಾಲ, ಚಿನ್ನಾಭರಣ ಈಡಿನ ಸಾಲ, ಸ್ವಸಹಾಯ ಗುಂಪು ಸಾಲ, ಇತ್ಯಾದಿಗಳಿಗೆ ರೂ.66.10 ಕೋಟಿ ಸಾಲ ವಿತರಿಸಲಾಗಿದೆ. ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ರೂ. 34.30 ಕೋಟಿ ಸಾಲ ಪಡೆಯಲಾಗಿದೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ 17 ಸದಸ್ಯರಿಗೆ ತಲಾ ರೂ. 5000ದಂತೆ ರೂ. 85,000 ಧನಸಹಾಯ ವಿತರಿಸಲಾಗಿದೆ. ನವೋದಯ ಚೈತನ್ಯ ವಿಮಾ ಯೋಜನೆಯಡಿ 11 ಸದಸ್ಯರಿಗೆ ರೂ. 51,319 ಕ್ಲೈಮ್‌ ಬಂದಿದೆ ಎಂದು ತಾರಾನಾಥ ಕಾಯರ್ಗ ತಿಳಿಸಿದ್ದಾರೆ.


    ಮಾಸ್‌ ಸಹಯೋಗದಲ್ಲಿ ಅಡಿಕೆ ಖರೀದಿ:
    ಮಾಸ್ ಲಿಮಿಟೆಡ್‌ ಮಂಗಳೂರು ಇವರ ಸಹಯೋಗದೊಂದಿಗೆ ರೈತರಿಂದ ರೂ.4.90 ಕೋಟಿ ಮೌಲ್ಯದ 1,238.42 ಕ್ವಿಂಟಾಲ್ ಅಡಿಕೆ ಖರೀದಿಸಲಾಗಿದೆ. ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ರಸಗೊಬ್ಬರ ಮತ್ತು ರಾಜ್ಯ ಸರಕಾರಗಳ ಪಡಿತರ ವ್ಯವಸ್ಥೆಯನ್ನು ನಾಲ್ಕು ಪಡಿತರ ಶಾಖೆಗಳಲ್ಲಿ ವಿತರಿಸಲಾಗುತ್ತಿದೆ. ಗ್ರಾಹಕರ ಅನುಕೂಲಕ್ಕಾಗಿ ಆರ್‌ಟಿಜಿಎಸ್‌/ ನೆಫ್ಟ್‌ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. ರೈತರ ಪಾಲಿಗೆ ವರದಾನವಾಗಿರುವ 2025-26 ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಸಂಘದಲ್ಲಿ 2152 ಸದಸ್ಯ ರು ರೂ. 67.50 ಲಕ್ಷ ಪ್ರೀಮಿಯಂ ಪಾವತಿಸಿದ್ದಾರೆ. 843 ಕುಟುಂಬದ 3100 ಸದಸ್ಯರನ್ನು ಯಶಸ್ವಿನಿ ಅರೋಗ್ಯ ವಿಮಾ ಯೋಜನೆಗೆ ನೋಂದಾಯಿಸಲಾಗಿದೆ ಎಂದು ತಾರಾನಾಥ ಕಾಯರ್ಗ ಮಾಹಿತಿ ನೀಡಿದ್ದಾರೆ.

    ಆ.24ರಂದು ವಾರ್ಷಿಕ ಮಹಾಸಭೆ
    ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.24 ರಂದು ಬೆಳಿಗ್ಗೆ 9.30ಕ್ಕೆ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ಪ್ರತಿವರ್ಷದಂತೆ ಈ ವರ್ಷ ಕೂಡ ಸಂಘದ ಕಾರ್ಯವ್ಯಾಪ್ತಿಯ ಸದಸ್ಯರ ಮಕ್ಕಳ ಪೈಕಿ ಎಸ್. ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ 90% ಕ್ಕಿಂತ ಹೆಚ್ಚು ಮತ್ತು ಡಿಗ್ರಿಯಲ್ಲಿ 80% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಧನದೊಂದಿಗೆ ಪುರಸ್ಕರಿಸಲಾಗುವುದು ಎಂದು ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಉಪಾಧ್ಯಕ್ಷ ಚೇತನ್ ಕುಮಾ‌ರ್ ಕೋಡಿಬೈಲು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಪಿ. ಅವರು ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

     

    Chethan Kumar Kodibail Cooperative Cooperative Department Cooperative Registrar Savanuru Prathamika Krishi Pattina Sahakara Sangha Tharanatha Kayarga
    Previous Articleಎಸ್.ಕೆ.ಗೋಲ್ಡ್‌ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯಿಂದ ಚಿತ್ರ ಸಿಂಚನ-2025
    Next Article ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ 2.20 ಲಕ್ಷ ರೂ. ರೈತ ಕಲ್ಯಾಣ ನಿಧಿ ವಿತರಣೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.