Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ 2.20 ಲಕ್ಷ ರೂ. ರೈತ ಕಲ್ಯಾಣ ನಿಧಿ ವಿತರಣೆ
    News

    ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ 2.20 ಲಕ್ಷ ರೂ. ರೈತ ಕಲ್ಯಾಣ ನಿಧಿ ವಿತರಣೆ

    adminBy adminAugust 21, 2025

    ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸದಸ್ಯರಾಗಿ ಬೆಳೆಸಾಲ ಪಡೆದು ಮೃತರಾದ ಸದಸ್ಯರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ರೈತ ಕಲ್ಯಾಣ ನಿಧಿ ಯೋಜನೆಯಡಿಯಲ್ಲಿ ಮರಣ ಹೊಂದಿದ ಕುಟುಂಬದ ನಾಮಿನಿ 22 ಸದಸ್ಯರಿಗೆ ತಲಾ ರೂ.10 ಸಾವಿರದಂತೆ ರೂ.2.20 ಲಕ್ಷ ರೈತ ಕಲ್ಯಾಣ ನಿಧಿಯನ್ನು ಇತ್ತೀಚೆಗೆ ಸಂಘದ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ವಿತರಿಸಲಾಯಿತು.

    https://chat.whatsapp.com/EbVKVnWB6rlHT1mWtsgbch
    ಸಿದ್ದಕಟ್ಟೆ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ರತ್ನಕುಮಾರ್ ಚೌಟ ಮುಖ್ಯ ಅತಿಥಿಯಾಗಿ ಭಾಗವಹಿಸಿ ರೈತ ಕಲ್ಯಾಣ ನಿಧಿಯನ್ನು ಫಲಾನುಭವಿಗಳಿಗೆ ವಿತರಿಸಿದರು. ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಮಾತನಾಡಿ, ಬೆಳೆ ಸಾಲ ಪಡೆದುಕೊಂಡು ಸಂಘದಲ್ಲಿ ವ್ಯವಹಾರ ಮಾಡಿಕೊಂಡು ಬರುತ್ತಿದ್ದ ರೈತ ಸದಸ್ಯರು ಮರಣ ಹೊಂದಿದಾಗ ಕುಟುಂಬಕ್ಕೆ ಆರ್ಥಿಕ ಸಹಕಾರ ನೀಡುವ ಉದ್ದೇಶದಿಂದ ಸಂಘವು ರೈತ ಕಲ್ಯಾಣ ನಿಧಿ ಯೋಜನೆಯನ್ನು ಸ್ಥಾಪಿಸಿ, ಸದ್ರಿ ಯೋಜನೆಯಡಿಯಲ್ಲಿ ಮೃತ ಸದಸ್ಯರ ಕುಟುಂಬಕ್ಕೆ ಸಹಾಯ ಮಾಡುತ್ತಿದೆ ಎಂದು ತಿಳಿಸಿದರು.


    ಸಂಘದ ಉಪಾಧ್ಯಕ್ಷ ಸಂದೇಶ್ ಶೆಟ್ಟಿ ಪೊಡುಂಬ, ನಿರ್ದೇಶಕರಾದ ಸತೀಶ್ ಪೂಜಾರಿ, ದಿನೇಶ್ ಪೂಜಾರಿ, ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಜಾರಪ್ಪ ನಾಯ್ಕ, ವೀರಪ್ಪ ಪರವ, ವಿಶ್ವನಾಥ ಶೆಟ್ಟಿಗಾರ್, ಎ.ಶಿವ ಗೌಡ , ಮಂದಾರತಿ ಎಸ್.ಶೆಟ್ಟಿ , ಪುಷ್ಪಲತಾ ಎಸ್.ಆರ್ ಹಾಗೂ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Bellipadi Krishna Rai Sabhangana Prabhakara Prabhu Raitha Kalyana Nidhi Siddakatte Prathimika Krishi Pattina Sahakara Sangha
    Previous Articleಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 1.67 ಕೋಟಿ ರೂ. ಲಾಭ
    Next Article ದೇಶದ ಆರ್ಥಿಕತೆ ವಿಶ್ವದ ಮೂರನೇ ಸ್ಥಾನಕ್ಕೇರುವಲ್ಲಿ ಸಹಕಾರ ಕ್ಷೇತ್ರದ ಕೊಡುಗೆ ಸ್ಮರಣೀಯ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.