ಮಂಗಳೂರು: ಕಿರಣ್ ಗೇಮ್ಸ್ ಟೀಮ್ ಮಾರ್ನಮಿಕಟ್ಟೆ ಮತ್ತು ರಾಮಕೃಷ್ಣ ಮಿಶನ್ ಜಂಟಿ ಆಶ್ರಯದಲ್ಲಿ, ವಿಶ್ವಕರ್ಮ ಸಹಕಾರ ಬ್ಯಾಂಕ್ ಮತ್ತು ಮಹಾರಾಣಾ ಪ್ರತಾಪ್ ಸ್ಪೋರ್ಟ್ ಕ್ಲಬ್ ಮಂಗಳೂರು ಸಹಯೋಗದಲ್ಲಿ ಆ.31ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1.30ರ ತನಕ ಮಂಗಳಾದೇವಿ ಬಳಿಯ ಶ್ರೀ ರಾಮಕೃಷ್ಣ ಮಿಶನ್ ಆಶ್ರಮದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ.
https://chat.whatsapp.com/EbVKVnWB6rlHT1mWtsgbch
ಮಂಗಳೂರಿನ ಪ್ರಸಿದ್ಧ ಕೆಎಂಸಿ ಹಾಗೂ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರು ಆರೋಗ್ಯ ತಪಾಸಣೆಯಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 9ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಮಂಗಳೂರಿನ ರಾಮಕೃಷ್ಣ ಮಿಶನ್ ಮುಖ್ಯಸ್ಥರಾದ ಸ್ವಾಮಿ ಜಿತಕಾಮಾನಂದಜಿ ದೀಪ ಪ್ರಜ್ವಲನ ಮಾಡಲಿದ್ಧಾರೆ. ಆಳ್ವಾಸ್ ಎಜುಕೇಶನ್ ಫೌಂಡೇಶನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೆಎಂಸಿ ಮಂಗಳೂರಿನ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಚಕ್ರಪಾಣಿ ಎಂ ಅಧ್ಯಕ್ಷತೆ ವಹಿಸಲಿದ್ದಾರೆ. ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಡಿ.ವೇದವ್ಯಾಸ ಕಾಮತ್, ನಿಕಟಪೂರ್ವ ಕಾರ್ಪೊರೇಟರ್ ಪ್ರೇಮಾನಂದ ಶೆಟ್ಟಿ, ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಂ.ಅರುಣ್ ಐತಾಳ್, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್., ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ನಟ ರೂಪೇಶ್ ಶೆಟ್ಟಿ, ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ, ವಕೀಲ ರಾಘವೇಂದ್ರ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com


