ಪುತ್ತೂರು: ಪ್ರತಿಷ್ಟಿತ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸರ್ವತೋಮುಖ ಪ್ರಗತಿಯನ್ನು ಪುರಸ್ಕರಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ವತಿಯಿಂದ ಶನಿವಾರ ಸಾಧನಾ ಪುರಸ್ಕಾರ ನೀಡಿ ಗೌರವಿಸಲಾಗಿದೆ.
https://chat.whatsapp.com/EbVKVnWB6rlHT1mWtsgbch
ಸಂಘದ ಅಧ್ಯಕ್ಷರಾದ ತಾರಾನಾಥ ಕಾಯರ್ಗ ಮತ್ತು
ಸಿಇಒ ಚಂದ್ರಶೇಖರ ಅವರು ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ. ಎನ್ ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಸ್. ಬಿ ಜಯರಾಮ ರೈ, ಸದಾಶಿವ ಉಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2024-25ನೇ ಸಾಲಿನಲ್ಲಿ 412.92 ಕೋಟಿ ರೂ. ವ್ಯವಹಾರ ಮಾಡಿದ್ದು, 1.67 ಕೋಟಿ ರೂ. ಲಾಭ ಗಳಿಸಿದೆ. ಸದಸ್ಯರಿಗೆ ಶೇ.14 ಡಿವಿಡೆಂಡ್ ನೀಡಲಾಗಿದೆ. ಸಂಘವು ಸತತವಾಗಿ 23ನೇ ಬಾರಿ ಎ ತರಗತಿ ಆಡಿಟ್ ವರ್ಗೀಕರಣದೊಂದಿಗೆ ಶೇ.99.25 ಸಾಲ ವಸೂಲಾತಿ ಸಾಧನೆ ಮಾಡಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

