ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್ 2024-25ನೇ ಸಾಲಿನಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ಶನಿವಾರ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
https://chat.whatsapp.com/EbVKVnWB6rlHT1mWtsgbch
ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರಸಕ್ತ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ|ಎಂ.ಎನ್. ರಾಜೇಂದ್ರ ಕುಮಾರ್ ಇವರು, ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಸ್ ಆರ್ ಹರೀಶ್ ಆಚಾರ್ಯ ಮತ್ತು ಉಪಾಧ್ಯಕ್ಷರಾದ ಜಗದೀಶ್ ಪಡುಪಣಂಬೂರು ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಭಾಸ್ಕರ್ ಎಸ್.ಕೋಟ್ಯಾನ್, ಎಸ್.ಬಿ. ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ.ಜೈರಾಜ್ ಬಿ. ರೈ, ಸದಾಶಿವ ಉಳ್ಳಾಲ್, ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್.ಎನ್, ರಮೇಶ್, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಲಾವಣ್ಯ ಮತ್ತಿತರರು ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694




