ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ 2024-25ನೇ ಸಾಲಿನಲ್ಲಿ 1,063 ಕೋಟಿ ರೂ. ವ್ಯವಹಾರ ನಡೆಸಿದ್ದು, 21.40 ಕೋಟಿ ರೂ. ಲಾಭ ದಾಖಲಿಸಿದೆ ಎಂದು ಬ್ಯಾಂಕ್ನ ಅಧ್ಯಕ್ಷ, ಶಾಸಕ ಯಶಪಾಲ್ ಎ.ಸುವರ್ಣ ತಿಳಿಸಿದ್ದಾರೆ.
https://chat.whatsapp.com/EbVKVnWB6rlHT1mWtsgbch
ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್, ಸಹಕಾರಿ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ನ ಪರಿವೀಕ್ಷಣೆಗೆ ಒಳಪಟ್ಟು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಟು ಶಾಖೆಗಳನ್ನು ಹೊಂದಿ 50 ಸಾವಿರ ಗ್ರಾಹಕರ ಮೂಲಕ ವ್ಯವಹಾರ ನಡೆಸುತ್ತಿದೆ. 2024-25ನೇ ಸಾಲಿನಲ್ಲಿ 11,457 ಕೋಟಿ ರೂ., ಒಟ್ಟು ವಹಿವಾಟು ನಡೆಸಿ, 604 ಕೋಟಿ ರೂ. ಠೇವಣಿ, 459 ಕೋಟಿ ರೂ. ಸಾಲ, ಮತ್ತು ಮುಂಗಡದೊಂದಿಗೆ 39.93 ಕೋಟಿ ರೂ. ಪಾಲು ಬಂಡವಾಳದೊಂದಿಗೆ 9.15 ಕೋಟಿ ರೂ. ನಿವ್ವಳ ಲಾಭ ಗಳಿಸಿ ಶೂನ್ಯ ನಿವ್ವಳ ಅನುತ್ಪಾದಕ ಸಾಲದ ಪ್ರಮಾಣದೊಂದಿಗೆ ಉತ್ತಮ ಪ್ರಗತಿ ಸಾಧಿಸಿದೆ.

ಕಳೆದ 15 ವರ್ಷಗಳಿಂದ ನಿರಂತರವಾಗಿ ಸದಸ್ಯ ಗ್ರಾಹಕರಿಗೆ ಅತಿ ಹೆಚ್ಚು ಡಿವಿಡೆಂಡ್ ನೀಡುವ ಕರಾವಳಿ ಭಾಗದ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್, ಶಾಸನಬದ್ಧ ಲೆಕ್ಕಪರಿಶೋಧನೆಯಲ್ಲಿ ‘ಎ’ ಶ್ರೇಣಿಯನ್ನು ಪಡೆದು ಸತತವಾಗಿ ಒಂಬತ್ತು ವರ್ಷದಿಂದ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ ನೀಡುವ ಪ್ರತಿಷ್ಠಿತ ಸಾಧನಾ ಪುರಸ್ಕಾರವನ್ನು ಪಡೆದುಕೊಂಡಿದೆ. ರಾಷ್ಟ್ರೀಕೃತ ಬ್ಯಾಂಕ್ನಲ್ಲಿ ದೊರೆಯುವ ಎಲ್ಲ ಆಧುನಿಕ ಸೌಲಭ್ಯಗಳು ಇಲ್ಲಿ ಲಭ್ಯವಿದ್ದು, ಸುಮಾರು 5 ಸಾವಿರ ಗ್ರಾಹಕರು ಇದರ ಸದುಪಯೋಗ ಪಡೆದಿದ್ದಾರೆ. ಪ್ರಸ್ತುತ ಬ್ಯಾಂಕ್ನ ವ್ಯವಹಾರ ಕ್ಷೇತ್ರವು ದ.ಕ., ಉಡುಪಿ, ಉ.ಕ., ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಮೈಸೂರು, ಮಂಡ್ಯ ಜಿಲ್ಲೆಯನ್ನು ಒಳಗೊಂಡಿರುತ್ತದೆ.
50 ಲಕ್ಷರೂ. ಪ್ರತಿಭಾ ಪುರಸ್ಕಾರ
ಪ್ರತಿವರ್ಷದಂತೆ ಬ್ಯಾಂಕ್ ವತಿಯಿಂದ ಸುಮಾರು 50 ಲಕ್ಷ ರೂ. ಮೊತ್ತದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸುಮಾರು 1,500 ಮಂದಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸಲಾಗುತ್ತಿದೆ. ಉಚ್ಚಿಲ ದಸರಾ ಮಹೋತ್ಸವದ ಸಂದರ್ಭದಲ್ಲಿ ಅವಿಭಜಿತ ದ.ಕ. ಜಿಲ್ಲಾಮಟ್ಟದಲ್ಲಿ ಚಿತ್ರ ಬಿಡಿಸುವ ಸ್ಪರ್ಧೆ, ಪೊಣ್ಣು ಪಿಲಿ ನಲಿಕೆ ಆಯೋಜಿಸಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಪ್ರೋತ್ಸಾಹ ನೀಡಲಾಗುತ್ತಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com



