Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕುಶಾಲನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 1.26 ಕೋಟಿ ರೂ. ನಿವ್ವಳ ಲಾಭ
    News

    ಕುಶಾಲನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 1.26 ಕೋಟಿ ರೂ. ನಿವ್ವಳ ಲಾಭ

    adminBy adminSeptember 5, 2025

    ಕುಶಾಲನಗರ: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2024-25ನೇ ಸಾಲಿನಲ್ಲಿ 259.30 ಕೋಟಿ ರೂ. ವಾರ್ಷಿಕ ವಹಿವಾಟು ನಡೆಸಿದ್ದು 1.26 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಟಿ.ಆ‌ರ್.ಶರವಣಕುಮಾ‌ರ್ ತಿಳಿಸಿದ್ದಾರೆ.

    https://chat.whatsapp.com/EbVKVnWB6rlHT1mWtsgbch
    ಸಂಘವು 104ನೇ ವರ್ಷದಲ್ಲಿ ಮುನ್ನಡೆಯುತ್ತಿದ್ದು ಸತತವಾಗಿ ಎಂಟು ವರ್ಷಗಳಿಂದ ಕೋಟಿಗೂ ಮೀರಿ ಲಾಭ ಗಳಿಸುತ್ತಿದೆ. 105.06 ಲಕ್ಷ ರೂ. ಸಾಲ ಪಾವತಿಸಿದ್ದು. ಇನ್ನೂ ಕೆಲವು ಸದಸ್ಯರಿಗೆ ಸಾಲ ವಿತರಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಈ ಸಾಲಿನಲ್ಲಿ ವಿವಿಧ ಸಾಲಗಳ ರೂಪದಲ್ಲಿ 50 ಕೋಟಿ ರೂ. ವಿತರಿಸಲಾಗಿದೆ. ಸಂಘದ ಸ್ವಂತ ಬಂಡವಾಳದಿಂದ 40 ಲಕ್ಷ ರೂ.ಗಳನ್ನು ಸ್ವಸಹಾಯ ಗುಂಪುಗಳಿಗೆ ಸಾಲ ಕೊಡಲಾಗಿದೆ ಎಂದು ಗುರುವಾರ ಸಂಘದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ಸಂಘದ ಸದಸ್ಯರಿಗೆ ಕಳೆದ 13 ವರ್ಷಗಳಿಂದ ಶೇ.16ರಿಂದ ಶೇ.25 ಡಿವಿಡೆಂಡ್ ನೀಡಲಾಗುತ್ತಿದ್ದು, ಸಂಘವು ಸದಸ್ಯರ ಅನುಕೂಲಕ್ಕಾಗಿ ತ್ಯಾಗರಾಜ ರಸ್ತೆಯಲ್ಲಿರುವ 8.60 ಸೆಂಟ್ಸ್ ನಿವೇಶನದಲ್ಲಿ ನಿರ್ಮಿಸಿದ ಕಟ್ಟಡದಲ್ಲಿ ಸುಲಲಿತವಾಗಿ ಸದಸ್ಯರ ಸೇವೆಗೆ ಅನುಕೂಲವಾಗುವಂತೆ ವ್ಯವಹಾರ ನಡೆಸಲಾಗುತ್ತಿದೆ ಎಂದು ತಿಳಿಸಿದರು.


    ಈ ಸಾಲಿನಲ್ಲಿ ಸದಸ್ಯರಿಗೆ ಶೇ.10 ಡಿವಿಡೆಂಡ್ ನೀಡಲು ತೀರ್ಮಾನಿಸಲಾಗಿದೆ. ವನಿತಾ ಬಂಧು ಮತ್ತು ಜನಚೈತನ್ಯ ಎಂಬ ಜಂಟಿ ಗುಂಪು ಸಾಲ ಯೋಜನೆ ಯಶಸ್ವಿಯಾಗಿದ್ದು ಈ ಯೋಜನೆಯಡಿಯಲ್ಲಿ ಒಟ್ಟು 887 ಮಹಿಳೆಯರಿಗೆ 5.83 ಕೋಟಿ ರೂ. ಸಾಲ ವಿತರಿಸಲಾಗಿದೆ. ಪ್ರತಿ ವಾರ್ಷಿಕ ಮಹಾಸಭೆಯಲ್ಲಿ ಸದಸ್ಯರ ಮಕ್ಕಳ ಪೈಕಿ 10ನೇ ತರಗತಿ, ದ್ವಿತೀಯ ಪಿ.ಯು.ಸಿ., ಅಂತಿಮ ಪದವಿ ಪರೀಕ್ಷೆ, ಡಿಪ್ಲೊಮ ಮತ್ತು ಕೊನೆಯ ಇಂಜಿನಿಯರಿಂಗ್ ಪರೀಕ್ಷೆ, ವೈದ್ಯಕೀಯ ಪದವಿಯಲ್ಲಿ ಉತ್ತಮ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಬಹುಮಾನ ನೀಡಲಾಗುತ್ತಿದೆ. ಎಂದು ಹೇಳಿದರು.
    ಸದಸ್ಯರ ಮಕ್ಕಳು ರಾಷ್ಟ್ರ ಮಟ್ಟದಲ್ಲಿ, ರಾಜ್ಯಮಟ್ಟದಲ್ಲಿ ಸ್ಪರ್ಧಿಸಿರುವ ಕ್ರೀಡಾಸ್ಪರ್ಧಿಗಳಿಗೆ ಬಹುಮಾನದ ವ್ಯವಸ್ಥೆ ಮಾಡಲಾಗಿದೆ. ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಸೆ. 7ರಂದು ಭಾನುವಾರ ಪೂರ್ವಾಹ್ನ 11.00 ಗಂಟೆಗೆ ಸಂಘದ ಅಧ್ಯಕ್ಷ ಟಿ. ಆರ್. ಶರವಣಕುಮಾ‌ರ್ ಅಧ್ಯಕ್ಷತೆಯಲ್ಲಿ ಗಾಯಿತ್ರಿ ಕಲ್ಯಾಣ ಮಂಟಪ ಸಭಾಂಗಣದಲ್ಲಿ ನಡೆಯಲಿದೆ ಎಂದರು.
    ಸಂಘದ ಉಪಾಧ್ಯಕ್ಷೆ ನೇತ್ರಾವತಿ, ನಿರ್ದೇಶಕರಾದ ವಿ.ಎಸ್.ಆನಂದ್ ಕುಮಾರ್, ಯತೀಶ್, ಎಂ.ವಿ.ರಾಜೇಶ್‌, ಎಂ.ಎಂ.ಚರಣ್, ಕೆ.ಎನ್.ದೇವರಾಜ್, ಬಿ.ರಾಮಕೃಷ್ಣ, ಕವಿತಾ, ಎಚ್.ಎಂ.ಮಧುಸೂದನ್, ಮಹಮ್ಮದ್ ಇಬ್ರಾಹಿಂ, ಪ್ರಸನ್ನ, ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Co Operative ministry Cooperative Cooperative Registrar Kushalanagara Prathamika Krushi Pattina Sahakara Sangha Sharavana Kumar
    Previous Articleಸೆ.21ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ
    Next Article ಸೆ.7ರ ಭಾನುವಾರ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ನಿಂದ ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.