ಉಳ್ಳಾಲ: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ಆಶ್ರಯದಲ್ಲಿ ಸೆ.7ರ ಭಾನುವಾರ ಬ್ಯಾಂಕಿನ ಸಭಾಂಗಣದಲ್ಲಿ ಬೆಳಗ್ಗೆ 9.30ಕ್ಕೆ ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ.
https://chat.whatsapp.com/EbVKVnWB6rlHT1mWtsgbch
ಕಾರ್ಯಕ್ರಮವನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಉದ್ಘಾಟಿಸಲಿದ್ದಾರೆ. ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಕೃಷ್ಣ ಶೆಟ್ಟಿ, ಕೆಳಗಿನ ಕೋಟೆಕಾರುಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಖಿಲ ಭಾರತ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷರಾದ ಆಲ್ವಿನ್ ಡಿಸೋಜ, ಸೋಮೇಶ್ವರ ಪುರಸಭೆಯ ಅಧ್ಯಕ್ಷರಾದ ಕಮಲ, ಸಿಐಟಿಯು ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಹಮೀದ್ ಹಸನ್ ಮಾಡೂರು, ಕೋಟೆಕಾರು ಪಟ್ಟಣ ಪಂಚಾಯತ್ ಸದಸ್ಯರಾದ ರಾಘವ ಗಟ್ಟಿ ಕೋಟೆಕಾರು ಭಾಗವಹಿಸಲಿದ್ದಾರೆ. ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ಉಪಾಧ್ಯಕ್ಷರಾದ ಕೆ.ಬಿ. ಅಬುಸಾಲಿ ಕಿನ್ಯಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ ಉಳ್ಳಾಲ್, ನಿರ್ದೇಶಕರಾದ ಗಂಗಾಧರ್ ಯು, ಕೆ.ಕೃಷ್ಣಪ್ಪ ಸಾಲಿಯಾನ್, ಉದಯಕುಮಾರ್ ಶೆಟ್ಟಿ, ಅರುಣ್ ಕುಮಾರ್ ಯು, ರಾಘವ ಆರ್.ಉಚ್ಚಿಲ್ ರಾಘವ ಸಿ.ಉಚ್ಚಿಲ್, ಸುರೇಖಾ ಚಂದ್ರಹಾಸ್, ಸುನೀತಾ ಲೋಬೊ, ಕೃಷ್ಣಪ್ಪ, ಬಾಬು ನಾಯ್ಕ, ಕಿರಣ್ ಕುಮಾರ್ ಶೆಟ್ಟಿ (ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರತಿನಿಧಿ) ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


