ಮೂಲ್ಕಿ: ಮೂಲ್ಕಿ ತಾಲೂಕಿನ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿ, ಹಳೆಯಂಗಡಿ, ಪಡುಬಿದ್ರಿ ಮತ್ತು ಕಿನ್ನಿಗೋಳಿಯಲ್ಲಿ ಶಾಖೆಯನ್ನು ಹೊಂದಿರುವ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ನಾಲ್ಕನೇ ಶಾಖೆಯು ಮೂಡುಬಿದಿರೆ ತಾಲೂಕಿನ ಪ್ರಾಂತ್ಯ ಜ್ಯೋತಿನಗರ ಮೆಸ್ಕಾಂ ಕಚೇರಿ ಮುಂಭಾಗದ ಮಹಾಲಸ ಕಟ್ಟಡದಲ್ಲಿ ಸೆಪ್ಟೆಂಬರ್ 8ರಂದು ಉದ್ಘಾಟನೆಗೊಳ್ಳಲಿದೆ.
https://chat.whatsapp.com/EbVKVnWB6rlHT1mWtsgbch
2021ರಲ್ಲಿ ಪ್ರಾರಂಭಗೊಂಡ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯು ಪ್ರಸ್ತುತ 32 ಕೋಟಿ ರೂ. ನಿರಖು ಠೇವಣಿ ಹೊಂದಿದೆ. 2024-25ನೇ ಸಾಲಿನಲ್ಲಿ 351.69 ಕೋಟಿ ರೂ. ವಹಿವಾಟು ನಡೆಸಿದ್ದು, ರೂ. 41.88 ಲಕ್ಷ ರೂ. ಲಾಭ ಗಳಿಸಿದೆ. 98.5 % ಸಾಲ ವಸೂಲಾತಿ ನಡೆಸಿ ಲೆಕ್ಕಪರಿಶೋಧನಾ ವರದಿಯಲ್ಲಿ “ಎ” ಶ್ರೇಣಿಯಲ್ಲಿದೆ ಎಂದು ಸೊಸೈಟಿಯ ಅಧ್ಯಕ್ಷರಾದ ಎಚ್.ವಸಂತ್ ಬೆರ್ನಾರ್ಡ್ ಮೂಡುಬಿದಿರೆಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯು ಮೂರು ಶಾಖೆಗಳಲ್ಲೂ ಇ-ಮುದ್ರಾಂಕ ವ್ಯವಸ್ಥೆ, ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ, ಹವಾನಿಯಂತ್ರಿತ ಬ್ಯಾಂಕಿಂಗ್ ವಿಭಾಗವನ್ನು ಹೊಂದಿರುತ್ತದೆ. ಪ್ರಸ್ತುತ 3,843 ಸದಸ್ಯರನ್ನು ಹೊಂದಿದ್ದು, 21 ಸಿಬ್ಬಂದಿಗಳು, 17 ನಿರ್ದೇಶಕರ ತಂಡ ಇದೆ. ಇವರೆಲ್ಲರ ಶ್ರಮದಿಂದ 2023-24 ಮತ್ತು 2024-25ನೇ ಸಾಲಿನಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ವಿಶಿಷ್ಟ ಸಾಧನಾ ಪ್ರಶಸ್ತಿ ದೊರಕಿದೆ ಎಂದು ಹೇಳಿದ್ದಾರೆ.

ಪ್ರಸ್ತುತ ಮೂಡುಬಿದಿರೆಯಲ್ಲಿ ನಾಲ್ಕನೇ ಶಾಖೆಯನ್ನು ತೆರೆಯುತ್ತಿದ್ದು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷರಾದ ಡಾ॥ ಎಂ.ಎನ್. ರಾಜೇಂದ್ರ ಕುಮಾರ್ ಇವರು ಉದ್ಘಾಟನೆ ಮಾಡಲಿದ್ದಾರೆ. ಮೂಲ್ಕಿ ಸೀಮೆ ಅರಸರು ಎಂ.ದುಗ್ಗಣ್ಣ ಸಾವಂತರು ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಚಿವರಾದ ಕೆ.ಅಭಯಚಂದ್ರ ಜೈನ್ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ.ರೈ ಕಂಪ್ಯೂಟರ್ ವ್ಯವಸ್ಥೆಗೆ ಚಾಲನೆ ನೀಡಲಿದ್ದಾರೆ. ಆಳ್ವಾಸ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ|| ಎಂ.ಮೋಹನ ಆಳ್ವ ಭದ್ರತಾ ಕೊಠಡಿ ಉದ್ಘಾಟಿಸಲಿದ್ದು, ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ಡಾ|| ಐಕಳಬಾವ ದೇವಿಪ್ರಸಾದ್ ಶೆಟ್ಟಿಯವರು ಅಮೃತ ನಗದು ಪತ್ರ ಠೇವಣಿ ಬಿಡುಗಡೆ ಮಾಡಲಿದ್ದಾರೆ. ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ್ ಎಂ ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದು, ಮೂಡುಬಿದಿರೆ ವಲಯದ ಪ್ರಧಾನ ಧರ್ಮಗುರು ರೆ|ಫಾ| ಓನಿಲ್ ಡಿಸೋಜ ಉಳಿತಾಯ ಖಾತೆಯ ಪಾಸ್‌ಬುಕ್ ವಿತರಣೆ ಮಾಡಲಿದ್ದಾರೆ. ಸಿಎಸ್‌ಐ ಕ್ರಿಸ್ತ ಕಾಂತಿ ಚರ್ಚ್ ಮೂಡುಬಿದಿರೆ ಇದರ ಸಭಾಪಾಲಕರಾದ ರೇ. ಸಂತೋಷ್ ಕುಮಾರ್ ಮಾಸಿಕ ಠೇವಣಿ ಪತ್ರ ಬಿಡುಗಡೆ ಮಾಡಲಿದ್ದು, ಪಾವಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಿ.ಸೂರ್ಯ ಕುಮಾರ್ ಪ್ರಥಮ ವಾಹನ ಸಾಲ ವಿತರಣೆ ಮಾಡಲಿದ್ದಾರೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್ ನಿತ್ಯನಿಧಿ ಪಾಸ್‌ಬುಕ್ ವಿತರಣೆ ಮಾಡಲಿದ್ದು, ವಕೀಲ ಶರತ್ ಡಿ.ಶೆಟ್ಟಿಯವರು ಪ್ರಿಯದರ್ಶಿನಿ ಸ್ವ-ಸಹಾಯ ಗುಂಪಿಗೆ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರಾದ ಎಚ್.ಎನ್.ರಮೇಶ್, ಮೂಡುಬಿದಿರೆ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ಹರ್ಷವರ್ಧನ್ ಪಡಿವಾಳ್, ಶಿರ್ತಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಜೈನ್, ದೇವಾಡಿಗ ಸುಧಾರಕ ಸೇವಾ ಸಂಘದ ಅಧ್ಯಕ್ಷರಾದ ಪುರಂದರ ದೇವಾಡಿಗ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಪುಚ್ಚೆಮೊಗರು ಇರುವೈಲು ಇದರ ಅಧ್ಯಕ್ಷರಾದ ಕುಮಾರ್ ಪೂಜಾರಿ, ಲಯನ್ಸ್ ಕ್ಲಬ್ 317 ಡಿ ಇದರ ವಲಯ ಅಧ್ಯಕ್ಷರಾದ ಜೊಸ್ಸಿ ಮಿನೇಜಸ್, ಪುರಸಭೆ ಸದಸ್ಯರಾದ ಇಕ್ಲಾಲ್ ಕರೀಂ, ಕಟ್ಟಡ ಮಾಲೀಕರಾದ ದೇವದಾಸ್ ಭಟ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸೊಸೈಟಿಯ ನಿರ್ದೇಶಕರಾದ ಗೌತಮ್ ಜೈನ್, ಗಣೇಶ್ ಪ್ರಸಾದ್ ದೇವಾಡಿಗ, ನವೀನ್ ಸಾಲಿಯಾನ್ ಪಂಜ, ತನುಜಾ ಶೆಟ್ಟಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ಮೂಡುಬಿದಿರೆ ಶಾಖಾ ಪ್ರಬಂಧಕರಾದ ಅಭಿಷ್ಠಾ ಜೈನ್, ಲೆಕ್ಕಾಧಿಕಾರಿ ಲೋಲಾಕ್ಷಿ ಸುದ್ದಿಗೋಷ್ಠಿಯಲ್ಲಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com


