Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಜನರಲ್ಲಿ ಆರ್ಥಿಕ ಸಂಪನ್ಮೂಲ ವೃದ್ಧಿಸುವುದು ಸಹಕಾರಿ ಕ್ಷೇತ್ರದ ಮುಖ್ಯ ಉದ್ದೇಶ
    News

    ಜನರಲ್ಲಿ ಆರ್ಥಿಕ ಸಂಪನ್ಮೂಲ ವೃದ್ಧಿಸುವುದು ಸಹಕಾರಿ ಕ್ಷೇತ್ರದ ಮುಖ್ಯ ಉದ್ದೇಶ

    adminBy adminSeptember 6, 2025

    ಉಡುಪಿ ಕೆಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿಯ ವಾರ್ಷಿಕ ಮಹಾಸಭೆಯಲ್ಲಿ ಐವನ್ ಡಿಸೋಜ ಅಭಿಮತ

    ಉಡುಪಿ: ಸಹಕಾರ ಸಂಘಗಳು ಹೆಚ್ಚಿನ ಪತ್ರ ವ್ಯವಹಾರವಿಲ್ಲದೇ, ಸರಳ ರೀತಿಯಲ್ಲಿ ಜನರ ಅವಶ್ಯಕತೆಗಳಿಗೆ ಅನುಗುಣವಾಗಿ ಸಾಲ ಸೌಲಭ್ಯ ಒದಗಿಸುತ್ತವೆ. ಇದರಿಂದಾಗಿ ಜನರು ಸಹಕಾರ ಸಂಘಗಳಲ್ಲಿ ವ್ಯವಹಾರ ನಡೆಸಲು ಹೆಚ್ಚಿನ ಒಲವನ್ನು ತೋರುತ್ತಿದ್ದಾರೆ. ಜನರಲ್ಲಿ ಆರ್ಥಿಕ ಉಳಿತಾಯ ಮನೋಭಾವ ಬೆಳೆಸುವಲ್ಲಿ ಸಹಕಾರ ಕ್ಷೇತ್ರದ ಕೊಡುಗೆ ಮಹತ್ತರದ್ದಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಅಭಿಪ್ರಾಯಪಟ್ಟರು.

    https://chat.whatsapp.com/EbVKVnWB6rlHT1mWtsgbch
    ಉಡುಪಿ ಶೋಕಮಾತಾ ದೇವಾಲಯ ಆವರಣದಲ್ಲಿರುವ ‘ಆವೇ ಮರಿಯಾ’ ಸಭಾಂಗಣದಲ್ಲಿ ಉಡುಪಿ ಕೆಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿಯ 28ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.
    ಸಹಕಾರ ಸಂಘಗಳು ಪ್ರಾಮಾಣಿಕವಾಗಿ ಜನಪರ ಕೆಲಸ ಮಾಡಿದಂತೆ, ಸಾಲ ಪಡೆದ ಸದಸ್ಯರು ಸಮಯಕ್ಕೆ ಸರಿಯಾಗಿ ಸಾಲಗಳನ್ನು ಮರುಪಾವತಿ ಮಾಡಿದ್ದಲ್ಲಿ ಸಂಘವು ಅಭಿವೃದ್ಧಿಯ ಉತ್ತುಂಗಕ್ಕೇರುತ್ತದೆ. ಇಂದು ಸಹಕಾರ ಸಂಘಗಳು ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಸಮನಾಗಿ ಸೇವೆಯನ್ನು ನೀಡಿ, ಜನರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ ಎಂದರು. ಉಡುಪಿ ಶೋಕಮಾತಾ ದೇವಾಲಯದ ಸಹಾಯಕ ಧರ್ಮಗುರುಗಳಾದ ವಂದನೀಯ ಫಾ|ಲಿಯೋ ಪ್ರವೀಣ್ ಡಿಸೋಜ ಆಶೀರ್ವಚನ ನೀಡಿದರು.


    ಸಂಘದ ಅಧ್ಯಕ್ಷರಾದ ಲೂವಿಸ್ ಲೋಬೊ ಸಮಾರಂಭದ ಅಧ್ಯಕ್ಷತೆ ವಹಿಸಿ ಸಂಘದ ಮುಂದಿನ ಕಾರ್ಯಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಹಿಂದಿನ ಆರ್ಥಿಕ ವರ್ಷದಲ್ಲಿ ಸಂಘವು ರೂ. 250 ಕೋಟಿಗೂ ಮೀರಿ ವ್ಯವಹಾರ ಮಾಡಿದ್ದು ರೂ.94 ಲಕ್ಷ ಲಾಭ ಗಳಿಸಿದ್ದು, ಸಂಘದ ಸದಸ್ಯರಿಗೆ 18% ಲಾಭಾಂಶ ಘೋಷಣೆ ಮಾಡಿದರು. ಸಂಘದ ಪ್ರಧಾನ ವ್ಯವಸ್ಥಾಪಕರಾದ ಸಂದೀಪ್ ಫೆರ್ನಾಂಡಿಸ್ ವಾರ್ಷಿಕ ವರದಿ ವಾಚಿಸಿದರು. ಸಂಘದ ಸ್ಥಾಪಕ ಸಂಚಾಲಕರು, ಮಾಜಿ ಅಧ್ಯಕ್ಷರಾದ ದಿ. ಲೂವಿಸ್ ಡಿ’ಅಡಾ ಅವರು 28 ವರ್ಷಗಳ ಸೇವೆ ನೀಡಿದಕ್ಕಾಗಿ ಅವರ ಪತ್ನಿ ವಯ್ಲೆಟ್ ಡಿ’ಲಿಡಾ ಅವರು ಸನ್ಮಾನ ಸ್ವೀಕರಿಸಿದರು ಹಾಗೂ ಸಂಘದ ವಿಶ್ರಾಂತ ನಿರ್ದೇಶಕರುಗಳಾದ ಫೆಲಿಕ್ಸ್ ಪಿಂಟೋ, ಫ್ರಾಂಕ್ಲಿನ್ ಮಿನೇಜಸ್, ಜೆಸಿಂತಾ ಡಿಸೋಜ, ಕೇವಿನ್ ಆರ್. ಪಿರೇರಾ ಮತ್ತು ಗಿಲ್ಬರ್ಟ್ ಫೆರ್ನಾಂಡಿಸ್ ಅವರನ್ನು ಸನ್ಮಾನಿಸಲಾಯಿತು. ಎಸ್‌.ಎಸ್.ಎಲ್.ಸಿ, ಪಿ.ಯು.ಸಿ ಮತ್ತು ಸಿ.ಎ. ಪರಿಕ್ಷೆಗಳಲ್ಲಿ ಉತ್ತಮ ಅಂಕ ಪಡೆದ ಸಂಘದ ಸದಸ್ಯರುಗಳ ಮಕ್ಕಳಿಗೆ ವಿಧ್ಯಾರ್ಥಿ ವೇತನ, 13 ವ್ಯಕ್ತಿಗಳಿಗೆ ಮತ್ತು ಎರಡು ಸಂಸ್ಥೆಗಳಿಗೆ ಆರ್ಥಿಕ ಸಹಾಯವನ್ನು ನೀಡಲಾಯಿತು.

    ಸಂಘದ ಉಪಾಧ್ಯಕ್ಷರಾದ ಜೇಮ್ಸ್ ಡಿಸೋಜ ಸ್ವಾಗತಿಸಿ, ನಿರ್ದೇಶಕರಾದ ಆರ್.ಮಾಕ್ಸಿಂ ಡಿ’ಸೋಜ ವಂದಿಸಿದರು. ಸ್ಟೀವನ್ ಕುಲಾಸೋ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಸಂಘದ ನಿರ್ದೇಶಕರುಗಳಾದ ಇಗ್ನೇಷಿಯಸ್ ಮೋನಿಸ್, ಪರ್ಸಿ ಜೆ.ಡಿ’ಸೋಜ, ಆರ್ಚಿಬಾಲ್ಸ್ ಎಸ್. ಡಿಸೋಜ, ಡಾ| ನೇರಿ ಕರ್ನೆಲಿಯೋ, ಲಾಯ್ಸಟ್ ಜೆ. ಕರ್ನೇಲಿಯೋ, ರಿಚರ್ಡ್ ಡಾಯಸ್, ಡಾಲ್ಪಿ ವಿ. ಲೂವಿಸ್, ವಿಲಿಯಂ ಮಚಾದೋ, ಓನಿಲ್ ಜೆ. ಡಿಸೋಜ, ಜೆನೆವೀವ್ ಎಂ. ಮಿನೇಜಸ್, ಫ್ರಾಂಕ್ ಪೀಟರ್ ಕಾರ್ಡೊಜಾ, ಸಂಘದ ಸಿಬ್ಬಂದಿ ವರ್ಗ ಮತ್ತು ಸದಸ್ಯರು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Co Operative ministry Cooperative Cooperative Department MLC Ivan Dsouza Udupi Catholic Credit Co-operative Society
    Previous Articleಸೆ.8ರಂದು ಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿಯ ನಾಲ್ಕನೇ ಶಾಖೆ ಮೂಡುಬಿದಿರೆಯ ಪ್ರಾಂತ್ಯದಲ್ಲಿ ಆರಂಭ
    Next Article ವಾಣಿ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿ ಮಹಾಸಭೆ, ರೂ.40 ಲಕ್ಷ ನಿವ್ವಳ ಲಾಭ, 10% ಡಿವಿಡೆಂಡ್ ಘೋಷಣೆ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.