ಮೂಡುಬಿದಿರೆ: ಮೂಡುಬಿದಿರೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಭಾನುವಾರ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಜರಗಿತು.
https://chat.whatsapp.com/EbVKVnWB6rlHT1mWtsgbch
ಸಂಘದ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಹಾಗೂ ನಿರ್ದೇಶಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಸಂಸ್ಥೆಯ ನಿರ್ದೇಶಕರಾದ ದಯಾನಂದ್ ಕಾರ್ಯಕ್ರಮ ನಿರೂಪಣೆ ಮಾಡಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಜನ್ಯ ಡಿ.ಶೆಟ್ಟಿ ಸ್ವಾಗತಿಸಿ, ವಾರ್ಷಿಕ ವರದಿ ಮಂಡಿಸಿದರು. ಡಾ.ನಾಗರಾಜ್ ಶೆಟ್ಟಿ ವಂದಿಸಿದರು. ಸಂಸ್ಥೆಯು 12 ವರ್ಷಗಳಿಂದ ನಡೆದುಕೊಂಡು ಬರುತಿದ್ದು ವಾರ್ಷಿಕ ಲಾಭ 35,74,951.75 ರೂ. ಆಗಿದ್ದು, ಸದಸ್ಯರಿಗೆ 12% ಡಿವಿಡೆಂಡ್ ನೀಡಲಾಗಿದೆ.

ಕೃಷಿ ಕ್ಷೇತ್ರ ದಲ್ಲಿ ಸಾಧನೆಗೈದು 2023-24ನೇ ಸಾಲಿನ ರಾಜ್ಯ ಮಟ್ಟದ ಕರ್ನಾಟಕ ಸರಕಾರದ ಕೃಷಿ ಕ್ಷೇತ್ರ ದಲ್ಲಿನ ಅನನ್ಯ ಸೇವೆಗಾಗಿ “ಉದಯೋನ್ಮುಖ ಕೃಷಿ ಪಂಡಿತ”ಪ್ರಶಸ್ತಿ ಪಡೆದ ಡಾ.ನಾಗರಾಜ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.


